
ಬೆಂಗಳೂರು(ಮಾ.01): ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರಿನ ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ ₹25 ಕೋಟಿಗಳ ಭರ್ಜರಿ ಅನುದಾನ ನೀಡಲು ಅನುಮೋದನೆ ಸಿಕ್ಕಿದೆ.
ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಕಾಮಗಾರಿಗಳ ಕ್ರಿಯಾ ಯೋಜನೆಗಳಿಗೆ ತಲಾ ₹25 ಕೋಟಿಗಳಂತೆ 225 ಕೋಟಿ ಅನುದಾನ ನೀಡಲು ಸಭೆಯಲ್ಲಿ ಒಪ್ಪಿಗೆ ದೊರಕಿದೆ ಎಂದು ತಿಳಿದು ಬಂದಿದೆ.
ಸಚಿವರಾಗಿರುವವರ ಕ್ಷೇತ್ರಗಳನ್ನು ಹೊರತು ಪಡಿಸಿಉಳಿದಶಿವಾಜಿನಗರ, ಗೋವಿಂದರಾಜನಗರ, ವಿಜಯನಗರ, ಪುಲಕೇಶಿನಗರ, ಶಾಂತಿನಗರ ಸೇರಿದಂತೆ ಒಟ್ಟು ಒಂಬತ್ತು ಕಾಂಗ್ರೆಸ್ ಶಾಸಕರ ಕ್ಷೇತ್ರಗಳಿಗೆ ತಲಾ 25 ಕೋಟಿ ಅನುದಾನ ನೀಡಲು ಸಭೆಯಲ್ಲಿ ಮುಖ್ಯಮಂತ್ರಿಗಳು ಸಮ್ಮತಿಸಿದ್ದಾರೆ.
ವಿಶ್ವವಿದ್ಯಾಲಯಗಳಿಗೆ ₹3600 ಕೋಟಿ ಅನುದಾನ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯದ ಸೆಂಟ್ರಲ್ ಕಾಲೇಜು ಹಾಗೂ ಪ್ರಸನ್ನ ಕುಮಾರ್ ಬ್ಲಾಕ್ ಆವರಣದಲ್ಲಿ ಒಟ್ಟು 43 ಎಕರೆ ಜಮೀನಿನಲ್ಲಿ ವಿಶ್ವವಿದ್ಯಾಲಯದ ಶೈಕ್ಷಣಿಕ ಕಟ್ಟಡ, ಕ್ರೀಡಾ ಕಟ್ಟಡ ಹಾಗೂ ಇತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ₹168.63 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುದೋದನೆ ಸಚಿವ ಸಂಪುಟ ಸಭೆಯಲ್ಲಿ ದೊರಕಿದೆ ಎಂದು ತಿಳಿದು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ