Coronavirus: ಹೊಸ ತಳಿ ಆತಂಕದ ಮಧ್ಯೆ ರಾಜ್ಯದಲ್ಲಿ ಕೊರೋನಾ ಅಂಕಿ-ಸಂಖ್ಯೆ ತಿಳ್ಕೊಳ್ಳಿ

By Suvarna News  |  First Published Nov 29, 2021, 10:02 PM IST

* ರಾಜ್ಯದಲ್ಲೂ ನಿದ್ದೆಗೆಡಿಸಿದ ಕೊರೋನಾ ಹೊಸ ತಳಿ
* 257 ಕೊರೋನಾ ಪಾಸಿಟಿವ್ ಕೇಸ್ ಪತ್ತೆ
* ಕಾರ್ಯಕ್ರಮಗಳನ್ನು ಮುಂದೂಡುವಂತೆ ಸರ್ಕಾರ ಸೂಚನೆ



ಬೆಂಗಳೂರು, (ನ.29): ತುಂಬಾ ವೇಗವಾದ ಹರಡುವಿಕೆ ಮತ್ತು ಹೆಚ್ಚು ಸೋಂಕುಕಾರಕ ಗುಣಗಳನ್ನು ಹೊಂದಿರುವ ಹೊಸ ತಳಿ ಈಗ ಪ್ರಪಂಚದ ನಿದ್ದೆಗೆಡಿಸಿದ್ದು, ಕರ್ನಾಟಕದಲ್ಲಿ ಸರ್ಕಾರ (Karnatak Government) ಮುಂಜಾಗ್ರತಾ ಕ್ರಮಗಳನ್ನ ಕೈಗೊಂಡಿದೆ. 

ಇದರ ಮಧ್ಯೆ ರಾಜ್ಯದಲ್ಲಿ ಇಂದು (ನ.29)  257 ಕೊರೋನಾ ಪಾಸಿಟಿವ್ (Coronavirus positive) ಕೇಸ್ ಪತ್ತೆಯಾಗಿದ್ದು, 5 ಮಂದಿ ಮೃತಪಟ್ಟಿದ್ದಾರೆ.

Latest Videos

undefined

Covid Pandemic: ರಾಜ್ಯ ಲಾಕ್‌ಡೌನ್ ಆಗುತ್ತಾ? ಸ್ಪಷ್ಟನೆ ಕೊಟ್ಟ ಸಿಎಂ ಬೊಮ್ಮಾಯಿ

ಬೆಂಗಳೂರು (Bengaluru) ನಗರದಲ್ಲಿ 131 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ 205 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಒಟ್ಟು 6,878 ಸಕ್ರಿಯ ಪ್ರಕರಣಗಳು ಇದ್ದು, ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 29,95,857 ಮಂದಿಗೆ ಕೊರೋನಾ ಸೋಂಕು ತಗುಲಿದೆ. 29,50,747 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.94 ರಷ್ಟಿದ್ದರೆ, ಪಾಸಿಟಿವಿಟಿ ರೇಟ್ ಶೇ.0.45 ರಷ್ಟಿದೆ.

ಇಂದು (ಸೋಮವಾರ) ಒಟ್ಟು 56,825 ಸ್ಯಾಂಪಲ್ (ಆರ್‌ಟಿ ಪಿಸಿಆರ್ 49,473+ 7,352 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ, ತುಮಕೂರು ಹಾಗೂ ಕೋಲಾರ ಜಿಲ್ಲೆಯಲ್ಲಿ ಕೊವಿಡ್19 ಸೋಂಕಿನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಕೊರೊನಾದಿಂದ ಸಾವು ಸಂಭವಿಸಿಲ್ಲ.

ಜಿಲ್ಲಾವಾರು ಕೊರೋನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 0, ಬೆಂಗಳೂರು ಗ್ರಾಮಾಂತರ 2, ಬೆಂಗಳೂರು ನಗರ 131, ಬೀದರ್ 0, ಚಾಮರಾಜನಗರ 8, ಚಿಕ್ಕಬಳ್ಳಾಪುರ 0, ಚಿಕ್ಕಮಗಳೂರು 1, ಚಿತ್ರದುರ್ಗ 0, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 11, ಗದಗ 0, ಹಾಸನ 21, ಹಾವೇರಿ 0, ಕಲಬುರಗಿ 0, ಕೊಡಗು 14, ಕೋಲಾರ 2, ಕೊಪ್ಪಳ 0, ಮಂಡ್ಯ 0, ಮೈಸೂರು 15, ರಾಯಚೂರು 0, ರಾಮನಗರ 0, ಶಿವಮೊಗ್ಗ 4, ತುಮಕೂರು 23, ಉಡುಪಿ 7, ಉತ್ತರ ಕನ್ನಡ 5, ವಿಜಯಪುರ 0, ಯಾದಗಿರಿ ಜಿಲ್ಲೆಯಲ್ಲಿ 0 ಕೊವಿಡ್ 19 ಪ್ರಕರಣಗಳು ದಾಖಲಾಗಿವೆ.

ಕಾರ್ಯಕ್ರಮಗಳನ್ನು ಮುಂದೂಡುವಂತೆ ಸೂಚನೆ
ರಾಜ್ಯದಲ್ಲಿ ಮತ್ತೆ ಕೊರೋನಾ ಭೀತಿ ಶುರುವಾಗಿರುವ ಹಿನ್ನೆಲೆಯಲ್ಲಿ ಮುಂದಿನ ಎರಡು ತಿಂಗಳ ಕಾಲ ಎಲ್ಲಾ ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಮುಂದೂಡುವಂತೆ ಶಿಕ್ಷಣ ಸಂಸ್ಥೆಗಳಿಗೆ ಎಂದು ರಾಜ್ಯ ಸರ್ಕಾರ ಆದೇಶಿಸಿದೆ.

ಸೆಮಿನಾರ್, ಕಾನ್ಫರೆನ್ಸ್, ಶೈಕ್ಷಮಿಕ ಚಟುವಟಿಕೆಯನ್ನು ಮುಂದೂಡಿ ಇಲ್ಲವೇ ಕಡಿಮೆ ಜನರ ಭೌತಿಕ ಹಾಜರಿಯಲ್ಲಿ ಹೈಬ್ರಿಡ್ ಮಾದರಿಯಲ್ಲಿ ಕಾರ್ಯಕ್ರಮ ಆಯೋಜಿಸಿ, ಕಾಲೇಜು ಆವರಣದಲ್ಲಿ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಕೋವಿಡ್ ಮುನ್ನೆಚ್ಚರಿಕೆ ಕ್ರಮಗಳ ಪಾಲನೆ ಆಗುವಂತೆ ಶೈಕ್ಷಣಿಕ ಸಂಸ್ಥೆಯ ಮುಖ್ಯಸ್ಥರು ನಿಗಾ ಇಡಬೇಕೆಂದು ಸರ್ಕಾರ ಹೇಳಿದೆ.

click me!