ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿರುವ 26 ನೇ ರಾಷ್ಟ್ರೀಯ ಯುವಜನೋತ್ಸವದ ಲಾಂಛನವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಲಾಂಛನ ಬಿಡುಗಡೆ ಮಾಡಿದರು.
ಹುಬ್ಬಳ್ಳಿ (ಜ.7): ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಜನವರಿ 12ರಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಂದ ಉದ್ಘಾಟನೆಗೊಳ್ಳಲಿರುವ 26 ನೇ ರಾಷ್ಟ್ರೀಯ ಯುವಜನೋತ್ಸವದ ಲಾಂಛನವನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಉಪಸ್ಥಿತಿಯಲ್ಲಿ ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಲಾಂಛನ ಬಿಡುಗಡೆ ಮಾಡಿದರು. ವರ್ಚುವಲ್ ಮೂಲಕ ಬೆಂಗಳೂರಿನಿಂದ ಸಿಎಮ್ ಬಸವರಾಜ ಬೊಮ್ಮಾಯಿ, ದೆಹಲಿಯಿಂದ ಕೇಂದ್ರ ಕ್ರೀಡಾ ಸಚುವ ಅನುರಾಗ ಸಿಂಗ್ ಠಾಕೂರ್ ಭಾಗಿಯಸಗಿದ್ದರು ಹುಬ್ಬಳ್ಳಿಯ ಬಿವಿಬಿ ಬಯೋಟೆಕ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ವರ್ಚುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿಎಮ್ ಜಗದೀಶ್ ಶೆಟ್ಟರ್, ಸಚಿವ ಶಂಕರ್ ಪಾಟೀಲ್ ಮುನೇನಕೊಪ್ಪ ಭಾಗಿಯಾಗಿ ಲಾಂಛನ ಬಿಡುಗಡೆ ಮಾಡಿದ್ದಾರೆ. ನಾಲ್ಕು ದಿನಗಳ ರಾಷ್ಟ್ರೀಯ ಯುವಜನೋತ್ಸವಕ್ಕೆ ಈಗಾಗಲೇ ಹುಬ್ಬಳ್ಳಿ ಧಾರವಾಡ ಅವಳಿನಗರದ ಸಕಲ ರೀತಿಯಲ್ಲಿ ಸನ್ನದ್ಧವಾಗುತ್ತಿದೆ. ಲಾಂಛನ ಬಿಡುಗಡೆ ಕಾರ್ಯಕ್ರಮದಲ್ಲಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಸಾಥ್ ನೀಡಿದ್ದು, ನೂರಾರು ವಿದ್ಯಾರ್ಥಿಗಳ ಭಾಗಿಯಾಗಿದ್ದರು.
ಯುವಜನೋತ್ಸವ, ಕ್ರಿಯಾಶೀಲರಾಗಿ ಕೆಲಸ ಮಾಡಿ:
ರಾಷ್ಟ್ರೀಯ ಯುವಜನೋತ್ಸವ ಜಿಲ್ಲೆಯಲ್ಲಿ ಜರುಗುತ್ತಿರುವುದು ಹೆಮ್ಮೆ ಎಂದು ತಿಳಿದು ಪ್ರತಿಯೊಂದು ಕೆಲಸಗಳು ಅಚ್ಚುಕಟ್ಟಾಗಿ ಮಾಡಲು ವಿವಿಧ ಸಮಿತಿಗಳು ಕ್ರಿಯಾಶೀಲವಾಗಿ ಕೆಲಸ ಮಾಡಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ರಾಷ್ಟ್ರೀಯ ಯುವಜನೋತ್ಸವ ಸಮಿತಿಗಳ ಕಾರ್ಯಪ್ರಗತಿ ಪರಿಶೀಲನೆ ಮಾಡಿದ ಅವರು, ಈಗಾಗಲೇ ಆನ್‌ಲೈನ್ ಮೂಲಕ ಎರಡು ಸಾವಿರಕ್ಕೂ ಹೆಚ್ಚು ಯುವಜನೋತ್ಸವ ಸ್ಪರ್ಧಾಳುಗಳು ತಮ್ಮ ಹೆಸರು ನೋಂದಾಯಿಸಿದ್ದಾರೆ. ವಿವಿಧ ಭಾಷೆ, ಸಂಸ್ಕೃತಿ ಮತ್ತು ವಿಭಿನ್ನ ಸಾಮಾಜಿಕ ಹಿನ್ನಲೆ ಇರುವ ಉತ್ಕೃಷ್ಟಯುವ ಕಲಾವಿದರು ದೇಶದ ಬೇರೆ ಬೇರೆ ಭಾಗಗಳಿಂದ ನಮ್ಮ ಜಿಲ್ಲೆಗೆ ಆಗಮಿಸುತ್ತಿದ್ದಾರೆ. ಅವರಿಗೆ ಊಟ, ವಸತಿ, ಸಾರಿಗೆ ಸೇರಿದಂತೆ ಯಾವುದರಲ್ಲೂ ವ್ಯತ್ಯಾಸವಾಗದಂತೆ ನೋಡಿಕೊಳ್ಳಬೇಕು. ಸಮಿತಿ ಸದಸ್ಯರು ತಮ್ಮ ಸಮಿತಿಗೆ ನೀಡಿದ ಕಾರ್ಯಗಳನ್ನು ವಿಳಂಬವಿಲ್ಲದೆ, ಲೋಪವಾಗದಂತೆ ನಿರ್ವಹಿಸಬೇಕು ಎಂದರು.
ಅತಿಥಿಗಳು ಜ. 9ರಿಂದಲೇ ಜಿಲ್ಲೆಗೆ ಆಗಮಿಸಲು ಆರಂಭಿಸುತ್ತಾರೆ. ಆದ್ದರಿಂದ ಎಲ್ಲ ಸಮಿತಿಗಳು ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಿ, ಆದಷ್ಟು ಬೇಗ ತಮ್ಮ ಜವಾಬ್ದಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
National Youth Festival 2023: ಯುವಜನೋತ್ಸವ: 4 ವರ್ಷಗಳ ಬಳಿಕ ಮತ್ತೆ ಶೃಂಗಾರಗೊಳ್ಳುತ್ತಿದೆ ಧಾರವಾಡ!
ಜಿಪಂ ಸಿಇಒ ಡಾ. ಇಟ್ನಾಳ, ಆಹಾರ ಹಾಗೂ ವಸತಿ ವ್ಯವಸ್ಥೆ ಅತ್ಯಂತ ಶಿಸ್ತಿನಿಂದ ಮಾಡಲಾಗಿದೆ. ಅಗತ್ಯ ಸಿಬ್ಬಂದಿ ಮತ್ತು ಸ್ವಯಂ ಸೇವಕರನ್ನು ನೇಮಿಸಲಾಗಿದೆ. ಕರ್ನಾಟಕದ ಮತ್ತು ವಿಶೇಷವಾಗಿ ಉತ್ತರ ಕರ್ನಾಟಕದ ಊಟಕ್ಕೆ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದರು.
National Youth Festival 2023: ಯವಜನೋತ್ಸವ ವೆಬ್ ಪೋರ್ಟಲ್‌ಗೆ ಚಾಲನೆ
ಇದೇ ಜನವರಿ 12 ರಿಂದ ಹುಬ್ಬಳ್ಳಿ - ಧಾರವಾಡದಲ್ಲಿ ನಡೆಯಲಿರುವ ರಾಷ್ಟ್ರೀಯ ಯುವಜನೋತ್ಸವದ ಲೋಗೋ ಮತ್ತು ಮ್ಯಾಸ್ಕಾಟ್ ಅನ್ನು ಇಂದು ಬಿಡುಗಡೆಗೊಳಿಸಿದೆನು. pic.twitter.com/SIRimspuML
— Basavaraj S Bommai (@BSBommai)ಎಸ್ಪಿ ಲೋಕೇಶ ಜಗಲಾಸರ್ ಮಾತನಾಡಿ, ವೇದಿಕೆ ಮತ್ತು ಸ್ಟಾಲ್‌ಗಳ ನಿರ್ಮಾಣ ಕಾರ್ಯ ಶೀಘ್ರ ಆರಂಭಿಸಲಾಗುವುದು. ಗುತ್ತಿಗೆದಾರರು ತಕ್ಷಣ ಸ್ಪಂದಿಸಬೇಕು ಎಂದರು. ಸಭೆಯಲ್ಲಿ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡು ತಮ್ಮ ಸಮಿತಿಗಳ ಕಾರ್ಯ ಪ್ರಗತಿ ವರದಿ ಸಲ್ಲಿಸಿದರು.