
ಬೆಂಗಳೂರು, (ಜೂನ್.12): ರಾಜ್ಯದಲ್ಲಿ ಕೊರೋನಾ ವೈರಸ್‌ನಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಏರುತ್ತಿದ್ದು, ಇಂದು (ಶುಕ್ರವಾರ) ಒಂದೇ ದಿನ ಬರೋಬ್ಬರಿ 7 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.
ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 79ಕ್ಕೇರಿಕೆಯಾಗಿದೆ. ಕೊರೋನಾ ವೈರಸ್ ನಿಂದಾಗಿ ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ ನಾಲ್ವರು, ಕಲಬುರಗಿಯಲ್ಲಿ ಇಬ್ಬರು ಹಾಗೂ ಹಾಸನದಲ್ಲಿ ಒಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಕೊರೋನಾ ಹೆಲ್ತ್ ಬುಲೆಟಿನ್ ತಿಳಿಸಿದೆ.
12 ದಿನದಲ್ಲಿ 1 ಲಕ್ಷ ಕೇಸ್, ಭಾರತದಲ್ಲಿ ಅಟ್ಟಹಾಸ ಮೆರೆದ ಕೊರೋನಾ ವೈರಸ್ !
ಇನ್ನು ಹೊಸದಾಗಿ 271 ಮಂದಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 6516ಕ್ಕೆ ಏರಿಕೆಯಾಗಿದೆ. ಹೊಸದಾಗಿ ಪತ್ತೆಯಾದ 271 ಸೋಂಕಿತರ ಪೈಕಿ 92 ಮಂದಿ ಹೊರರಾಜ್ಯ ಪ್ರಯಾಣದ ಇತಿಹಾಸ ಹೊಂದಿದ್ದು, 14 ಮಂದಿ ವಿದೇಶ ಪ್ರಯಾಣದ ಇತಿಹಾಸ ಹೊಂದಿದ್ದಾರೆ.
ಯಾವ ಜಿಲ್ಲೆಯಲ್ಲಿ ಎಷ್ಟು?
ಕಳೆದ 24 ಗಂಟೆಗಳಲ್ಲಿ ಬಳ್ಳಾರಿ 97, ಬೆಂಗಳೂರು 36, ಉಡುಪಿ 22, ಕಲಬುರ್ಗಿ 20, ಧಾರವಾಡ 19, ದಕ್ಷಿಣ ಕನ್ನಡ 17, ಬೀದರ್ 10, ಹಾಸನ 9, ಮೈಸೂರು 9, ತುಮಕೂರು 7, ಶಿವಮೊಗ್ಗ 6, ರಾಯಚೂರು 4, ಉತ್ತರ ಕನ್ನಡ 4, ಚಿತ್ರದುರ್ಗ 3, ರಾಮನಗರ 3, ಮಂಡ್ಯ 2, ಬೆಳಗಾವಿ, ವಿಜಯಪುರ, ಯಾದಗಿರಿಯಲ್ಲಿ ತಲಾ ಒಂದು ಕೊರೋನಾ ಪ್ರಕರಣಗಳು ವರದಿಯಾಗಿವೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಚೇತರಿಕೆಯ ಪ್ರಮಾಣವೂ ಹೆಚ್ಚು
ಹೌದು....ಒಂದು ಕಡೆ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ರೆ, ಚೇತರಿಕೆಯ ಪ್ರಮಾಣ ಕೂಡ ಉತ್ತಮವಾಗಿದೆ. ಈವರೆಗೆ ಕೊರೋನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ 3440ಕ್ಕೇರಿಕೆಯಾಗಿದೆ. ರಾಜ್ಯದಲ್ಲಿ ಒಟ್ಟು 2995 ಸಕ್ರಿಯ ಪ್ರಕರಣಗಳಿದ್ದು, 19 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ