2750 ಕೋಟಿ ರೂ ಮೊತ್ತದ ಯೋಜನೆಗಳಿಗೆ ಅನುಮೋದನೆ: ಸಚಿವ ಮುರುಗೇಶ್ ನಿರಾಣಿ

By Govindaraj SFirst Published Sep 3, 2022, 11:29 PM IST
Highlights

ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ  ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ. 

ಬೆಂಗಳೂರು (ಸೆ.03): ರಾಜ್ಯದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯಮಿದಾರರಿಗೆ  ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯು ಒಟ್ಟು 2750.55 ಕೋಟಿ ರೂ. ಮೊತ್ತದ 53 ಯೋಜನೆಗಳಿಗೆ ಅನುಮೋದನೆ ನೀಡಿದೆ. ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಶನಿವಾರ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ಆರ್ ನಿರಾಣಿ ನೇತೃತ್ವದಲ್ಲಿ ನಡೆದ 134 ನೇ ರಾಜ್ಯ ಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಯಿತು. 

ಒಟ್ಟು 53 ಯೋಜನೆಗಳಿಂದ  2750.55 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದ್ದಾರೆ. 50 ಕೋಟಿ ರೂ. ಗೂ ಹೆಚ್ಚು ಬಂಡವಾಳ ಹೂಡಿಕೆಯ  ಪ್ರಮುಖ ಬೃಹತ್ ಮತ್ತು ಮಧ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, ಇವುಗಳಿಂದ ರೂ. 1670.69 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು, ಸುಮಾರು 4000 ಜನರಿಗೆ ಉದ್ಯೋಗಾವಕಾಶ ಲಭ್ಯವಾಗಲಿದೆ ಎಂದು ಹೇಳಿದರು. 

ಬಿಜೆಪಿ ಬಾಗಿಲು ತಟ್ಟಿದ ಕಾಂಗ್ರೆಸ್ ಮಾಜಿ ಸಂಸದ, ಯಡಿಯೂರಪ್ಪ ಜತೆ ಗುಪ್ತ್-ಗುಪ್ತ್ ಮಾತು

ಇದೇ ರೀತಿ 15 ಕೋಟಿ ರೂ. ಯಿಂದ ರೂ.50 ಕೋಟಿ ರೂ. ಒಳಗಿನ ಬಂಡವಾಳ ಹೂಡಿಕೆಯ 41 ಹೊಸ ಯೋಜನೆಗಳಿಗೆ ಅನುಮೋದನೆ ನೀಡಲಾಗಿದೆ. ಇದರಿಂದ 1062.01 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದ್ದು ಅಂದಾಜು 4311 ಜನರಿಗೆ ಉದ್ಯೋಗಗಳು ಸೃಜನೆಯಾಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ 3 ಯೋಜನೆಗೆ ಅನುಮೋದನೆ ನೀಡಿದ್ದು, ಇದರಿಂದ 17.85 ಕೋಟಿ ರೂ. ಬಂಡವಾಳ ಹೂಡಿಕೆಯಾಗಲಿದೆ. 

ಒಟ್ಟು 53 ಯೋಜನೆಗಳಿಂದ ರೂ. 2750.55 ಕೋಟಿ ಬಂಡವಾಳ ಹೂಡಿಕೆಯಾಗಲಿದ್ದು, ಇವುಗಳಿಂದ 8619 ಜನರಿಗೆ ಉದ್ಯೋಗವಕಾಶ ಲಭ್ಯವಾಗಲಿದೆ. ಸಭೆಯಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ.ವಿ.ರಮಣರೆಡ್ಡಿ, ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಅವಳನ್ನ ರೇಪ್ ಮಾಡಿದ್ದೀನಾ..? ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ

ಹೂಡಿಕೆ ಹಾಗೂ ಉದ್ಯೋಗಗಳು 
* ಉಕೇಮ್ ಅಗ್ರೀ ಇನ್ಪಾ ಲಿ. ₹497.95 ಕೋಟಿ ರೂ. ಹೂಡಿಕೆ, ಉದ್ಯೋಗ - 425

* ಸುಂದರಿ ಶುಗರ್ಸ್ ಲಿಮಿಟೆಡ್ - ₹402.24 ಕೋಟಿ ರೂ. ಹೂಡಿಕೆ, ಉದ್ಯೋಗ-270

* ಎವರೆಸ್ಟ್ ಇಂಡಸ್ಟ್ರೀಸ್ ಲಿಮಿಟೆಡ್ ₹187 ಕೋಟಿ ರೂ. ಹೂಡಿಕೆ, ಉದ್ಯೋಗ-120 

* ಕೊಪ್ಪಳ ಟಾಯ್ಸ್ ಮೋಲ್ಡಿಂಗ್ ಕೋ ಪ್ರೈವೇಟ್ ಲಿಮಿಟೆಡ್-131.94 ಕೋಟಿ ರೂ.ಹೂಡಿಕೆ, ಉದ್ಯೋಗ-800

* ಅಕ್ವೀಸ್ ಕನ್ಸ್ಯೂಮರ್ ಪ್ರಾಡಕ್ಟ್ಸ್ ಪ್ರೈವೇಟ್ ಲಿಮಿಟೆಡ್-118.27 ಕೋಟಿ ರೂ. ಹೂಡಿಕೆ,  ಉದ್ಯೋಗ-485

* ಕೆಆರ್ ಬಿಎಲ್  ಲಿಮಿಟೆಡ್-110.25 ಕೋಟಿ ರೂ. ಹೂಡಿಕೆ, ಉದ್ಯೋಗ-140

* ಅಕ್ವೀಸ್ ಟಾಯ್ಸ್ ಪ್ರೈವೇಟ್ ಲಿಮಿಟೆಡ್ ಡಿಟಿಎ ಯುನಿಟ್- 72.58 ಕೋಟಿ ರೂ. ಹೂಡಿಕೆ, ಉದ್ಯೋಗ-550

* ಹೆಲ್ಲಾ ಇನ್ಫ್ರಾ ಮಾರ್ಕೆಟ್ ಪ್ರೈವೇಟ್ ಲಿಮಿಟೆಡ್-71.66 ಕೋಟಿ ರೂ. ಹೂಡಿಕೆ, ಉದ್ಯೋಗ -1500  

* ಸಾವಿತ್ರಿ ಪ್ಲೈಬೋರ್ಡ್ ಇಂಡಿಯಾ ಪ್ರೈವೇಟ್ ಲಿಮಿಟೆಡ್- 49.86 ಕೋಟಿ ರೂ. ಹೂಡಿಕೆ, ಉದ್ಯೋಗ-515

click me!