ಕರ್ನಾಟಕದಲ್ಲಿ ನಿನ್ನೆ ಒಂದೇ ದಿನ 293 ಮಂದಿಗೆ ಡೆಂಘೀ ಜ್ವರ ದೃಢ

By Kannadaprabha News  |  First Published Jul 11, 2024, 8:56 AM IST

ಬುಧವಾರ ಡೆಂಘೀ ವರದಿಯಾದ 293 ಮಂದಿಯ ಪೈಕಿ 100 ಮಂದಿ ಸೇರಿದಂತೆ ಡೆಂಘೀ ಜ್ವರದಿಂದ ಒಟ್ಟು 358 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು 7840 ಮಂದಿಗೆ ಡೆಂಘೀ ದೃಢಪಟ್ಟಿದೆ. ಜತೆಗೆ ಏಳು ಮಂದಿ ಅಧಿಕೃತವಾಗಿ ಡೆಂಘೀಗೆ ಬಲಿಯಾಗಿದ್ದಾರೆ. ಬುಧವಾರ 1,874 ಮಂದಿಗೆ ಪರೀಕ್ಷೆ ನಡೆಸಿದ್ದು 293 ಮಂದಿಗೆ ಡೆಂಘೀ ದೃಢಪಟ್ಟಿದೆ. ಈ ಪೈಕಿ ಒಂದು ವರ್ಷದೊಳಗಿನ ಮಕ್ಕಳಲ್ಲಿ ಇಬ್ಬರಿಗೆ ಡೆಂಘೀ ವರದಿಯಾಗಿದೆ.

ಬೆಂಗಳೂರು(ಜು.11):  ರಾಜ್ಯದಲ್ಲಿ ಡೆಂಘೀ ಅಬ್ಬರ ಮುಂದುವರೆದಿದ್ದು ಬುಧವಾರ 293 ಮಂದಿಗೆ ಡೆಂಘಿ ಸೋಂಕು ದೃಢಪಟ್ಟಿದೆ. ಒಟ್ಟು ವರದಿಯಾದ ಪ್ರಕರಣಗಳ ಸಂಖ್ಯೆ 7,840ಕ್ಕೆ ಏರಿಕೆಯಾಗಿದೆ. 

ಬುಧವಾರ ಡೆಂಘೀ ವರದಿಯಾದ 293 ಮಂದಿಯ ಪೈಕಿ 100 ಮಂದಿ ಸೇರಿದಂತೆ ಡೆಂಘೀ ಜ್ವರದಿಂದ ಒಟ್ಟು 358 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಈವರೆಗೆ 58534 ಮಂದಿಗೆ ರಕ್ತ ಮಾದರಿ ಪರೀಕ್ಷೆ ನಡೆಸಿದ್ದು 7840 ಮಂದಿಗೆ ಡೆಂಘೀ ದೃಢಪಟ್ಟಿದೆ. ಜತೆಗೆ ಏಳು ಮಂದಿ ಅಧಿಕೃತವಾಗಿ ಡೆಂಘೀಗೆ ಬಲಿಯಾಗಿದ್ದಾರೆ. ಬುಧವಾರ 1,874 ಮಂದಿಗೆ ಪರೀಕ್ಷೆ ನಡೆಸಿದ್ದು 293 ಮಂದಿಗೆ ಡೆಂಘೀ ದೃಢಪಟ್ಟಿದೆ. ಈ ಪೈಕಿ ಒಂದು ವರ್ಷದೊಳಗಿನ ಮಕ್ಕಳಲ್ಲಿ ಇಬ್ಬರಿಗೆ ಡೆಂಘೀ ವರದಿಯಾಗಿದೆ.

Tap to resize

Latest Videos

ಡೆಂಗ್ಯೂ ಟೆಸ್ಟಿಂಗ್‌ ಬೆಲೆ ಹೆಚ್ಚಳ ಕಂಡುಬಂದರೆ ಲೈಸನ್ಸ್‌ ರದ್ದು: ಸಚಿವ ದಿನೇಶ್‌ ಗುಂಡೂರಾವ್‌

ಡೆಂಘೀ ನಿಯಂತ್ರಣಕ್ಕೆ ಏನು ಮಾಡಿದ್ದೀರಿ?: ಹೈಕೋರ್ಟ್ ಪ್ರಶ್ನೆ

ಬೆಂಗಳೂರು: ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಡೆಂಘೀಜ್ವರ ಪ್ರಕರಣಗಳ ಹೆಚ್ಚಳವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ ಹಾಗೂ ಉತ್ತಮ ವಾತಾವರಣದಲ್ಲಿ ಬದುಕುವುದು ಮೂಲಭೂತ ಹಕ್ಕು ಎಂದಿದೆ. ಬುಧವಾರ ಕಲಾಪ ಪ್ರಾರಂಭವಾಗುತ್ತಿದ್ದಂತೆ ಮುಖ್ಯ ನ್ಯಾಯಮೂರ್ತಿ ಎನ್. ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ. ಅರವಿಂದ್ ಅವರ ನೇತೃತ್ವದ ವಿಭಾಗೀಯ ಪೀಠ ವಿಷಯ ಪ್ರಸ್ತಾಪಿಸಿತು. ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಇಲಾಖೆಯ ಕಾರ್ಯದರ್ಶಿಗೆ ತುರ್ತು ನೋಟಿಸ್‌ ಜಾರಿ ಮಾಡಿ ಜುಲೈ 23ರೊಳಗೆ ಡೆಂಘೀ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ನ್ಯಾಯಾಲಯ ಆದೇಶಿಸಿತು.

click me!