
ಬೆಳಗಾವಿ (ಅ.23): ಕೋಟೆ ಆವರಣದ ಕಿತ್ತೂರು ರಾಣಿ ಚನ್ನಮ್ಮ ವೇದಿಕೆಯಲ್ಲಿ ಮೂರು ದಿನಗಳ ಕಾಲ ಅದ್ಧೂರಿಯಾಗಿ ಜರುಗುವ ಕಿತ್ತೂರು ಉತ್ಸವಕ್ಕೆ ಸೋಮವಾರ ಸಂಜೆ 7 ಗಂಟೆಗೆ ಚಾಲನೆ ದೊರೆಯಲಿದೆ.
ಕಿತ್ತೂರು ಉತ್ಸವದ ಉದ್ಘಾಟನಾ ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಚನ್ನಮ್ಮನ ಕಿತ್ತೂರು ರಾಜಗುರು ಸಂಸ್ಥಾನ ಕಲ್ಮಠದ ಮಡಿವಾಳ ರಾಜಯೋಗಿಂದ್ರ ಸ್ವಾಮೀಜಿ, ನಿಚ್ಚಣಕಿ ಗುರು ಮಡಿವಾಳೇಶ್ವರ ಮಠದ ಪಂಚಾಕ್ಷರಿ ಸ್ವಾಮೀಜಿ, ಕೂಡಲ ಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಹಿಸಲಿದ್ದಾರೆ.
ಇನ್ನು, ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸಮಾರಂಭವನ್ನು ಉದ್ಘಾಟಿಸಲಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅತಿಥಿಗಳಾಗಿ ಆಗಮಿಸಲಿದ್ದಾರೆ. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಬ್ರಿಟಿಷರ ವಿರುದ್ಧ ಹೋರಾಡಿದ ಮೊದಲ ರಾಣಿ ಝಾನ್ಸಿ ಲಕ್ಷ್ಮಿಬಾಯಿ ಅಲ್ಲ, ಕಿತ್ತೂರು ಚೆನ್ನಮ್ಮ: ಸಿಎಂ ಬೊಮ್ಮಾಯಿ
ಕಳೆದ ವರ್ಷದಿಂದ ರಾಜ್ಯಮಟ್ಟದ ಉತ್ಸವವಾಗಿ ಕಿತ್ತೂರು ಉತ್ಸವ ಆಚರಿಸಲಾಗಿತ್ತು. ಈ ಬಾರಿಯೂ ಅದ್ಧೂರಿಯಾಗಿ ಕಿತ್ತೂರು ಉತ್ಸವಕ್ಕೆ ಸಿದ್ಧತೆ. ಇಂದು ಬೆಳಗ್ಗೆ 10.30ಕ್ಕೆ ಕಲಾ ತಂಡಗಳ ಮೆರವಣಿಗೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಚಾಲನೆ ನೀಡಲಿದ್ದಾರೆ. ಸಂಜೆ 7 ಗಂಟೆಗೆ ಸಚಿವ ಸತೀಶ ಜಾರಕಿಹೊಳಿ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಈ ಬಾರಿ ಕಿತ್ತೂರು ಉತ್ಸವದಲ್ಲಿ ಖ್ಯಾತ ಗಾಯಕರಾದ ಸಂಚಿತ ಹೆಗಡೆ, ನಾದಬ್ರಹ್ಮ ಹಂಸಲೇಖ, ಶಮಿತಾ ಮಲ್ನಾಡ್ ಅವರಿಂದ ಸಂಗೀತ ಕಾರ್ಯಕ್ರಮ.
ಈ ಬಾರಿ ಕರಾವಳಿಯಲ್ಲಿ 'We stand with Israel' ಹುಲಿಗಳ ಅರ್ಭಟ!
ಕಿತ್ತೂರು ಉತ್ಸವಕ್ಕೆ ಸಿಎಂ ಗೈರು?
ಉತ್ಸವಕ್ಕೆ ಹೋದರೆ ಅಧಿಕಾರಕ್ಕೆ ಹೋಗುತ್ತೆ ಎಂಬ ಭಯ, ಈ ಸಲವೂ ಕಿತ್ತೂರು ಉತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಗೈರು. ಈ ಹಿಂದೆ ಸಿಎಂ ಆಗಿದ್ದಾಗಲೂ ಐದೂ ವರ್ಷ ಉತ್ಸವಕ್ಕೆ ಗೈರಾಗಿದ್ದ ಸಿದ್ದರಾಮಯ್ಯ. ಈ ಸಲ ರಾಜ್ಯಮಟ್ಟದ ಉತ್ಸವವಾಗುತ್ತಿದ್ದರೂ ಸಿಎಂ ಸಿದ್ದರಾಮಯ್ಯ ಗೈರು? ಮೌಡ್ಯಕ್ಕೆ ಹೆದರಿ ಈ ಸಲವೂ ಕಿತ್ತೂರು ಉತ್ಸವಕ್ಕೆ ಗೈರಾಗ್ತಿದ್ದಾರಾ ಸಿಎಂ ಸಿದ್ದರಾಮಯ್ಯ? ಈವರೆಗೆ ಕೇವಲ ಮೂವರು ಸಿಎಂಗಳು ಮಾತ್ರ ಕಿತ್ತೂರು ಉತ್ಸವದಲ್ಲಿ ಭಾಗಿ. ಬಂಗಾರಪ್ಪ, ಜಗದೀಶ್ ಶೆಟ್ಟರ್, ಬಸವರಾಜ್ ಬೊಮ್ಮಾಯಿ ಮಾತ್ರ ಉತ್ಸವದಲ್ಲಿ ಭಾಗಿ. ಕಿತ್ತೂರು ಉತ್ಸವದಲ್ಲಿ ಪಾಲ್ಗೊಂಡ ಈ ಮೂವರು ಕಾಕತಾಳೀಯ ಎಂಬಂತೆ ಮತ್ತೊಮ್ಮೆ ಸಿಎಂ ಆಗಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ