
ಬೆಂಗಳೂರು(ಏ.29): ಚುನಾವಣಾ ಅಕ್ರಮಗಳನ್ನು ತಡೆಯಲು ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ತನಿಖಾ ಸಂಸ್ಥೆಗಳು ಶುಕ್ರವಾರ 2.57 ಕೋಟಿ ರು. ನಗದನ್ನು ಜಪ್ತಿ ಮಾಡಿವೆ.
ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿ 93.50 ಲಕ್ಷ ರು. ನಗದು, ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ 50 ಲಕ್ಷ ರು. ನಗದು ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ನಗರದಲ್ಲಿ 25.74 ಲಕ್ಷ ರು. ಮೌಲ್ಯದ 50.461 ಮಾದಕ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ಚುನಾವಣಾ ಆಯೋಗವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಚುನಾವಣಾ ಅಕ್ರಮ: ಈವರೆಗೆ 245 ಕೋಟಿ ನಗದು, ವಸ್ತು ಜಪ್ತಿ
ಚುನಾವಣಾ ನೀತಿ ಸಂಹಿತೆ ಜಾರಿಯಾದ ಬಳಿಕ ಈವರೆಗೆ ಒಟ್ಟು 102.90 ಕೋಟಿ ರು. ನಗದು, 22.12 ಕೋಟಿ ರು. ಮೌಲ್ಯದ ಉಚಿತ ಕೊಡುಗೆಗಳನ್ನು ಜಪ್ತಿ ಮಾಡಲಾಗಿದೆ. 68.69 ಕೋಟಿ ರು. ಮೌಲ್ಯದ 18.16 ಲಕ್ಷ ಲೀಟರ್ ಮದ್ಯ, 80.44 ಕೋಟಿ ರು. ಮೌಲ್ಯದ ಚಿನ್ನ ಮತ್ತು ಬೆಳ್ಳಿ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ನಗದು, ಮದ್ಯ ಸೇರಿದಂತೆ ಒಟ್ಟು 292.06 ಕೋಟಿ ರು. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ 5.88 ಕೋಟಿ ರು. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿತ್ತು. ಈ ಬಾರಿ ಮೂರುಪಟ್ಟು ಅಕ್ರಮ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿದೆ.
2,226 ಎಫ್‌ಐಆರ್, 69,805 ಶಸ್ತ್ರಾಸ್ತ್ರಗಳನ್ನು ಜಮೆ ಮಾಡಿಸಿಕೊಳ್ಳಲಾಗಿದೆ. 18 ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 20 ಶಸ್ತ್ರಾಸ್ತ್ರಗಳ ಪರವಾನಿಗೆ ರದ್ದು ಪಡಿಸಲಾಗಿದೆ. ಸಿಆರ್‌ಪಿಸಿ ಕಾಯ್ದೆಯಡಿ 5,329 ಪ್ರಕರಣಗಳನ್ನು ದಾಖಲಿಸಲಾಗಿದೆ. 9,569 ವ್ಯಕ್ತಿಗಳಿಂದ ಮುಚ್ಚಳಿಕೆ ಪತ್ರ ಪಡೆಯಲಾಗಿದೆ. 14,885 ಜಾಮೀನು ರಹಿತ ವಾರೆಂಟ್‌ಗಳನ್ನು ಜಾರಿಗೊಳಿಸಲಾಗಿದೆ ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ