ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ

Kannadaprabha News   | Asianet News
Published : Sep 01, 2020, 07:07 AM IST
ಕೊರೋನಾಗೆ ಬಲಿಯಾದರೆ 30 ಲಕ್ಷ ರು. ವಿಮೆ

ಸಾರಾಂಶ

ಎಲ್ಲೆಡೆ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಇದರಿಂದ ಸಾವು ನೋವುಗಳ ಸಂಖ್ಯೆಯೂ ಕೂಡ ಭಾರತದಲ್ಲಿ ಹೆಚ್ಚೇ ಇದೆ. ಇದೀಗ ಕೊರೋನಾದಿಂದ ಮೃತರಾದ ವಾರಿಯರ್ಸ್ ಕುಟುಂಬಕ್ಕೆ 30 ಲಕ್ಷ ವಿಮಾ ಸೌಲಭ್ಯದ ಬಗ್ಗೆ ಸರ್ಕಾರ ಹೇಳಿದೆ.

 ಬೆಂಗಳೂರು (ಸೆ.01): ಕೊರೋನಾ ಸೋಂಕು ನಿಯಂತ್ರಣ ಸಂಬಂಧ ಕರ್ತವ್ಯದಲ್ಲಿ ತೊಡಗಿದ ರಾಜ್ಯದ ಗ್ರಾಮ ಪಂಚಾಯಿತಿ ನೌಕರರು ಸೋಂಕಿನಿಂದ ಸಾವನ್ನಪ್ಪಿದರೆ 30 ಲಕ್ಷ ರು. ವಿಮಾ ಪರಿಹಾರ ನೀಡಲಿದೆ ಮತ್ತು ಸೋಂಕಿಗೊಳಗಾದರೆ ಸಂಪೂರ್ಣ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ.

ಗ್ರಾಮಪಂಚಾಯತ್‌ ಬಿಲ್‌ ಕಲೆಕ್ಟರ್‌, ಕ್ಲರ್ಕ್, ಕ್ಲರ್ಕ್ ಕಮ್‌ ಡಾಟಾ ಎಂಟ್ರಿ ಆಪರೇಟರ್‌, ವಾಟರ್‌ಮೆನ್‌, ಜವಾನ ಮತ್ತು ಸ್ವಚ್ಛತಾಗಾರರು ಕೋವಿಡ್‌-19 ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸಾರ್ವಜನಿಕರಲ್ಲಿ ರೋಗದ ಬಗ್ಗೆ ಅರಿವು ಮೂಡಿಸುವಲ್ಲಿ ತೊಡಗಿದ್ದಾರೆ.

 ಕಂಟೈನ್ಮೆಂಟ್‌ ವಲಯದಲ್ಲಿ ಅವಶ್ಯಕ ವಸ್ತುಗಳನ್ನು ಒದಗಿಸುವುದು, ಅಂಗನವಾಡಿ, ಶಾಲಾ ಮಕ್ಕಳಿಗೆ ಆಹಾರ ಪದಾರ್ಥಗಳನ್ನು ವಿತರಿಸಲು ನೆರವಾಗುವುದು, ಆರೋಗ್ಯ ಸೇವಾ ಕೇಂದ್ರದಲ್ಲಿ ನೆರವು ನೀಡುತ್ತಿದ್ದಾರೆ. ಇವರಿಗೆ ನೀಡುತ್ತಿರುವ ವೇತನ ಕನಿಷ್ಠವಾಗಿರುವ ಹಿನ್ನೆಲೆಯಲ್ಲಿ ವಿಮಾ ಸೌಲಭ್ಯ ಕಲ್ಪಿಸಲು ಸರ್ಕಾರ ನಿರ್ಧರಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
'ಅಫಿಡವಿಟ್‌ನಲ್ಲಿ ಡಿಕ್ಲೇರ್ ಮಾಡಿದ್ದರೂ ಟೀಕೆ 'ಚಿಲ್ಲರ್ ಕೆಲಸ': ಸಿಎಂ ಡಿಸಿಎಂ ದುಬಾರಿ ವಾಚ್ ಬಗ್ಗೆ ಬಿಜೆಪಿ ಹೇಳಿಕೆಗೆ ಕಾಶೆಪ್ಪನವರು ಕಿಡಿ