ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ 300 ಕೋಟಿ ರು. ಬಂಡವಾಳ: ಸಚಿವ ಎಚ್‌.ಕೆ. ಪಾಟೀಲ್‌

Published : Jul 29, 2023, 07:32 AM IST
ಕರ್ನಾಟಕದ ಪ್ರವಾಸೋದ್ಯಮ ಅಭಿವೃದ್ಧಿಗೆ 300 ಕೋಟಿ ರು. ಬಂಡವಾಳ: ಸಚಿವ ಎಚ್‌.ಕೆ. ಪಾಟೀಲ್‌

ಸಾರಾಂಶ

ಖಾಸಗಿ ಬಂಡವಾಳ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು, ಕೆಳವರ್ಗದ ಜನರಿಗೂ ಅದರ ಪ್ರಯೋಜನವಾಗಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ: ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ 

ಬೆಂಗಳೂರು(ಜು.29): ರಾಜ್ಯ ಪ್ರವಾಸೋದ್ಯಮ ಇಲಾಖೆಯ ಉನ್ನತಾಧಿಕಾರ ಸಮಿತಿಯು ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ 300 ಕೋಟಿ ರು. ಬಂಡವಾಳ ಹೂಡಿಕೆ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಪ್ರವಾಸೋದ್ಯಮ ಸಚಿವ ಎಚ್‌.ಕೆ. ಪಾಟೀಲ್‌ ತಿಳಿಸಿದರು.

ಟ್ರಾವೆಲ್‌ ಇಂಡಿಯಾ ಮತ್ತು ಸ್ಪಿಯರ್‌ ಟ್ರಾವೆಲ್‌ ಮೀಡಿಯಾ ಸಂಸ್ಥೆಗಳು ಅರಮನೆ ಮೈದಾನದಲ್ಲಿ ಆಯೋಜಿಸಿರುವ ಮೂರು ದಿನಗಳ ಇಂಡಿಯಾ ಇಂಟರ್‌ನ್ಯಾಷನಲ್‌ ಟ್ರಾವೆಲ್‌ ಮಾರ್ಚ್‌ ಪ್ರವಾಸೋದ್ಯಮ ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಮಾತನಾಡಿದರು.

ಕರ್ನಾಟಕವನ್ನು ಪ್ರವಾಸೋದ್ಯಮ ಸ್ನೇಹಿ ರಾಜ್ಯವಾಗಿಸಲು ಬದ್ಧ: ಸಚಿವ ಎಚ್‌.ಕೆ.ಪಾಟೀಲ್‌

ಖಾಸಗಿ ಬಂಡವಾಳ ಹೂಡಿಕೆಯಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಚಟುವಟಿಕೆ ಇನ್ನಷ್ಟು ಅಭಿವೃದ್ಧಿ ಹೊಂದಲಿದ್ದು, ಕೆಳವರ್ಗದ ಜನರಿಗೂ ಅದರ ಪ್ರಯೋಜನವಾಗಲಿದೆ. ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಸರ್ಕಾರ ಬದ್ಧವಾಗಿದ್ದು, ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ಸಾರಿಗೆ ಬಸ್‌ಗಳಲ್ಲಿ ಮಹಿಳೆಯರ ಉಚಿತ ಪ್ರಯಾಣದ ಶಕ್ತಿ ಯೋಜನೆ ಅನುಷ್ಠಾನದಿಂದ ರಾಜ್ಯದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೊಳ್ಳುತ್ತಿದೆ ಎಂದು ಹೇಳಿದರು.

ಮೂರು ದಿನಗಳ ಮೇಳದಲ್ಲಿ ಮಲೇಷ್ಯಾ, ವಿಯೆಟ್ನಾಂ, ನೇಪಾಳ, ದುಬೈ ಸೇರಿದಂತೆ 15ಕ್ಕೂ ಹೆಚ್ಚಿನ ದೇಶಗಳ ಪ್ರತಿನಿಧಿಗಳು, 22 ರಾಜ್ಯಗಳ ಪ್ರವಾಸೋದ್ಯಮ, ಆತಿಥ್ಯ, ವಿರಾಮ, ಪ್ರಯಾಣ ಸೇರಿದಂತೆ ಮತ್ತಿತರ ಉದ್ಯಮಗಳ ಸಂಸ್ಥೆಗಳು ಪಾಲ್ಗೊಂಡಿವೆ. 400ಕ್ಕೂ ಹೆಚ್ಚಿನ ಪ್ರದರ್ಶಕರು ಭಾಗವಹಿಸಿದ್ದಾರೆ. ಸ್ಪಿಯರ್‌ ಟ್ರಾವೆಲ್‌ ಇಂಡಿಯಾ ನಿರ್ದೇಶಕ ರೋಹಿತ್‌ ಹಂಗಲ್‌, ಪಂಜಾಬ್‌ ಪ್ರವಾಸೋದ್ಯಮ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಖಿ ಗುಪ್ತ ಭಂಡಾರಿ, ಛತ್ತೀಸ್‌ಗಡ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿ ವ್ಯವಸ್ಥಾಪಕ ನಿರ್ದೇಶಕ ಅನಿಲ್‌ಕುಮಾರ್‌ ಇತರರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!