
ಗದಗ (ಜ.25): ರಾಜ್ಯದಲ್ಲಿ 300 ಇಲೆಕ್ಟ್ರಿಕ್ ಬಸ್ಗಳನ್ನು ರಸ್ತೆಗಿಳಿಸಲು ನಿರ್ಧರಿಸಲಾಗಿದ್ದು, ಶೀಘ್ರವೇ ಕಾರ್ಯಾರಂಭ ಮಾಡಲಿವೆ.
ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ 50 ಬಸ್‌ಗಳು ಹಾಗೂ ಹುಬ್ಬಳ್ಳಿ ವಿಭಾಗಕ್ಕೆ 10 ಬಸ್ಗಳನ್ನು ನೀಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ರಾಜ್ಯಾದ್ಯಂತ ವಿಸ್ತರಿಸಲಾಗುವುದು ಎಂದು ಸಾರಿಗೆ ಸಚಿವ, ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದ್ದಾರೆ.
ಮೊಬೈಲ್ ಶಾಲೆಯಾದ ಬಿಎಂಟಿಸಿ ಹಳೆ ಬಸ್..! ..
ಭಾನುವಾರ ರಾತ್ರಿ ಇಲ್ಲಿ ಬಸ್ ನಿಲ್ದಾಣದ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಸಾರಿಗೆ ಸಂಸ್ಥೆಯ ಚಾಲಕರಿಗೆ ಉತ್ತಮ ತರಬೇತಿ ನೀಡುವ ನಿಟ್ಟಿನಲ್ಲಿ ರಾಜ್ಯದಲ್ಲಿ ಶೀಘ್ರವೇ 3 ವಿಶೇಷ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುತ್ತಿದೆ ಎಂದು ತಿಳಿಸಿದರು.
ಇದೇವೇಳೆ ಸಾರಿಗೆ ಸಂಸ್ಥೆಯಲ್ಲಿ ಹಿರಿಯ ಅಧಿಕಾರಿಗಳು ಚಾಲಕರು ಮತ್ತು ನಿರ್ವಾಹಕರಿಗೆ ವಿಪರೀತ ಕಿರುಕುಳ ನೀಡುವುದು ನನ್ನ ಗಮನಕ್ಕೆ ಬಂದಿದ್ದು, ಕೂಡಲೇ ನಿಲ್ಲಿಸುವಂತೆ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ