
ಬೆಂಗಳೂರು, (ಜೂನ್.20) : ರಾಜ್ಯದಲ್ಲಿ ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡ 16 ಜಿಲ್ಲೆಗಳಲ್ಲಿ ಲಾಕ್‌ಡೌನ್ ಸಡಿಲಿಕೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ನಾಳೆಯಿಂದ (ಜೂನ್.21) ಕೆಎಸ್‌ಆರ್‌ಟಿಸಿ ಬಸ್ ಸಂಚಾರಕ್ಕೆ ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಶೇ.50ರಷ್ಟು ಪ್ರಯಾಣಿಕರೊಂದಿಗೆ 3 ಸಾವಿರ ಕೆಎಸ್‌ಆರ್‌ಟಿ ಸಿ ಬಸ್ ಸಂಚಾರ ಆರಂಭಗೊಳ್ಳಲಿದೆ ಎಂದು ಕೆಎಸ್‌ಆರ್‌ಟಿಸಿ ಸಾರ್ವಜನಿಕರ ಗಮನಕ್ಕೆ ಇರಲಿ ಎಂದು ಸುತ್ತೋಲೆಯೊಂದನ್ನ ಹೊರಡಿಸಿದೆ.
ರಾಜ್ಯದಲ್ಲಿ ಮತ್ತಷ್ಟು ಲಾಕ್‌ಡೌನ್ ಸಡಿಲಿಕೆ, ಬಸ್ ಓಡಾಡುತ್ತವೆ, ಕಂಡೀಷನ್ಸ್ ಅಪ್ಲೈ
ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಕರ್ನಾಟಕ ಸರ್ಕಾರವು ರಾಜ್ಯದಲ್ಲಿ ವಿಧಿಸಿದ್ದ ನಿರ್ಬಂಧಗಳನ್ನು ಮೈಸೂರು ಜಿಲ್ಲೆ ಹೊರತುಪಡಿಸಿ, ಇತರೆ ಜಿಲ್ಲೆಗಳಲ್ಲಿ ಸಡಿಲಿಸಿ, ಮಾರ್ಗಸೂಚಿಗಳನ್ನು ಹೊರಡಿಸಿದ್ದು, ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲು ಅನುಮತಿಸಲಾಗಿರುತ್ತದೆ.
ಕೆ ಎಸ್ ಆರ್ ಟಿ ಸಿ ನಿಗಮವು ದಿನಾಂಕ 21-06-2021ರಿಂದ ಜಾರಿಗೆ ಬರುವಂತೆ ಮೈಸೂರು ಜಿಲ್ಲೆ ಹೊರತುಪಡಿಸಿ, ಇತರೆ ಜಿಲ್ಲೆಗಳಲ್ಲಿ ಪ್ರಯಾಣಿಕರ ಜನದಟ್ಟಣೆ ಹಾಗೂ ಅವಶ್ಯಕತೆಗೆ ಅನುಗುಣವಾಗಿ ಸ್ಥಳೀಯ ಮತ್ತು ದೂರ ಮಾರ್ಗದ ಅಂತರ ಜಿಲ್ಲಾ ಸಾರಿಗೆಗಳ ಕಾರ್ಯಾಚರಣೆಯನ್ನು ಪ್ರಾರಂಭಿಸುತ್ತಿದೆ. ಪ್ರಾರಂಭಿಕವಾಗಿ ಸುಮಾರು 3 ಸಾವಿರ ಬಸ್ಸುಗಳನ್ನು ಕಾರ್ಯಾಚರಿಸಲು ಯೋಜಿಸಲಾಗಿದೆ.
ಅಂತಾರಾಜ್ಯ ಮಾರ್ಗಗಳ ಕಾರ್ಯಚಾರಣೆಯ ಬಗ್ಗೆ ಆಯಾ ಮಾರ್ಗಸೂಚಿಗಳನ್ವಯ ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು. ನಿಗಮದ ಬಸ್ಸುಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರು ಕೋವಿಡ್-19 ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಕೆಎಸ್ಆರ್‌ಟಿಸಿ ಮನವಿ ಮಾಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ