
ವಿಧಾನಪರಿಷತ್(ಫೆ.23): ರಾಜ್ಯದಲ್ಲಿ ಚರ್ಮಗಂಟು ರೋಗಕ್ಕೆ ಫೆ. 7ರವರೆಗೆ 3.25 ಲಕ್ಷ ಜಾನುವಾರುಗಳು ತುತ್ತಾಗಿವೆ. 2.57 ಲಕ್ಷ ಜಾನುವಾರು ಗುಣಮುಖವಾಗಿದ್ದು, 30,397 ಜಾನುವಾರುಗಳು ಮೃತಪಟ್ಟಿವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ತಿಳಿಸಿದ್ದಾರೆ.
ಪರಿಷತ್‌ನಲ್ಲಿ ಉತ್ತರಿಸಿ ಫೆ. 7ರವರೆಗೆ 10.11 ಲಕ್ಷ ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಬಹುತೇಕ ಎಲ್ಲ ಅರ್ಹ ಜಾನುವಾರುಗಳಿಗೆ ಲಸಿಕೆ ಹಾಕಲಾಗಿದ್ದು, ರೋಗ ನಿಯಂತ್ರಣಕ್ಕೆ ಬರುತ್ತಿದೆ ಎಂದರು. ರೋಗದಿಂದ ಸಾವನ್ನಪ್ಪಿದ ಜಾನುವಾರುಗಳ ಮಾಲಿಕರಿಗೆ ಪ್ರತಿ ಕರುವಿಗೆ 5000 ರು., ಪ್ರತಿ ಹಸುವಿಗೆ 20 ಸಾವಿರ ರು. ಪ್ರತಿ ಎಮ್ಮೆಗೆ 30 ಸಾವಿರ ರು. ಪರಿಹಾರ ಘೋಷಿಸಲಾಗಿದೆ. ಈ ಸಂಬಂಧ ಈಗಾಗಲೇ 37 ಕೋಟಿ ರು. ಪರಿಹಾರ ಧನ ಬಿಡುಗಡೆ ಮಾಡಲಾಗಿದೆ. 17,563 ಜಾನುವಾರುಗಳ ಮಾಲಿಕರಿಗೆ ಪರಿಹಾರÜವನ್ನು ನೇರವಾಗಿ ವಿತರಿಸಲಾಗಿದೆ. ತುರ್ತು ಚಿಕಿತ್ಸೆಗೆ ಅವಶ್ಯವಿರುವ ಔಷಧಿಗಳನ್ನು ಪೂರೈಸಲಾಗಿದೆ. ಪ್ರತಿ ತಾಲ್ಲೂಕಿಗೆ ಕನಿಷ್ಠ 5 ಲಕ್ಷ ರು. ಕಾಯ್ದಿರಿಸಲಾಗಿದೆ ಎಂದರು.
Shivamogga: ಜಿಲ್ಲೆಯಲ್ಲಿ ಚರ್ಮಗಂಟು ರೋಗಕ್ಕೆ 1057 ಜಾನುವಾರು ಬಲಿ!
ರೋಗ ನಿಯಂತ್ರಿಸಲು ತಾತ್ಕಾಲಿಕವಾಗಿ ಜಾನುವಾರುಗಳ ಸಾಗಾಟ, ಮಾರಾಟ, ಸಂತೆ, ಜಾತ್ರೆಗಳನ್ನು ನಿರ್ಬಂಧಿಸಲಾಗಿದೆ. ರೋಗ ಹಾಗೂ ರೋಗದ ನಿಯಂತ್ರಣದ ಬಗ್ಗೆ ಅರಿವು ಮೂಡಲು ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ