
ವಿಧಾನ ಪರಿಷತ್(ಸೆ.16): ಕಾವೇರಿ ನ್ಯಾಯಾಧಿಕರಣದ ಅಂತಿಮ ತೀರ್ಪಿನಂತೆ ತಮಿಳುನಾಡಿಗೆ ರಾಜ್ಯದಿಂದ ಜೂನ್‌ನಿಂದ ಸೆಪ್ಟೆಂಬರ್ 12ರವರೆಗೆ 101.08 ಟಿಎಂಸಿ ನೀರು ಹರಿಸಬೇಕಿದ್ದರೂ, ಹೆಚ್ಚಿನ ಮಳೆ ಸುರಿದ ಪರಿಣಾಮ 416.65 ಟಿಎಂಸಿ ನೀರು ಹರಿಸಲಾಗಿದೆ.
ಕಾಂಗ್ರೆಸ್‌ನ ದಿನೇಶ್ ಗೂಳಿಗೌಡ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ವಿಷಯ ತಿಳಿಸಿರುವ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಜೂನ್ ತಿಂಗಳಲ್ಲಿ 9.19 ಟಿಎಂಸಿ ಬದಲು 16.46 ಟಿಎಂಸಿ, ಜುಲೈನಲ್ಲಿ 31.24ರ ಬದಲು 106.93 ಟಿಎಂಸಿ, ಆಗಸ್ಟ್‌ನಲ್ಲಿ 45.95 ಟಿಎಂಸಿ ಬದಲು 223.57 ಟಿಎಂಸಿ ಹಾಗೂ ಸೆಪ್ಟೆಂಬರ್ 12ರವರೆಗೆ 14.70 ಟಿಎಂಸಿ ಬದಲು 69.69 ಟಿಎಂಸಿ ನೀರು ಹರಿಸಲಾಗಿದೆ. ಜಲ ವರ್ಷವಾದ ಜೂನ್ ತಿಂಗಳಿಂದ ಮೇ ವರೆಗೆ 177. 25 ಟಿಎಂಸಿ ನೀರು ಹರಿಸಬೇಕಾಗುತ್ತದೆ. ಆದರೆ ಈ ವರ್ಷ ನಿಗದಿಗಿಂತ ಹೆಚ್ಚಿನ ಪ್ರಮಾಣದ ನೀರು ಹರಿಸಲಾಗಿದೆ ಎಂದಿದ್ದಾರೆ.
ಮಲೆನಾಡಲ್ಲಿ ಭಾರೀ ಮಳೆ: ಟಿಬಿ, ಕೆಆರ್‌ಎಸ್ ಡ್ಯಾಂನಿಂದ 1 ಲಕ್ಷ ಕ್ಯುಸೆಕ್ ಹೊರಕ್ಕೆ
ರಾಜ್ಯದಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಹರಿದು ಹೋಗುತ್ತಿದ್ದರೂ ತಮಿಳುನಾಡು ಈ ಎಲ್ಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಆಗದೆ ಸಮುದ್ರ ಸೇರುತ್ತಿದೆ ಎಂದು ದಿನೇಶ್ ಹೇಳಿದರು.
ಜೂನ್ ತಿಂಗಳಲ್ಲಿ 9.19 ಟಿಎಂಸಿ ಬದಲು 16.46 ಟಿಎಂಸಿ, ಜುಲೈನಲ್ಲಿ 31.24ರ ಬದಲು 106.93 ಟಿಎಂಸಿ, ಆಗಸ್ಟ್‌ನಲ್ಲಿ 45.95 ಟಿಎಂಸಿ ಬದಲು 223.57 ಟಿಎಂಸಿ ಹಾಗೂ ಸೆಪ್ಟೆಂಬರ್ 12ರವರೆಗೆ 14.70 ಟಿಎಂಸಿ ಬದಲು 69.69 ಟಿಎಂಸಿ ನೀರು ಹರಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ರಾಜ್ಯದಿಂದ ಇಷ್ಟೊಂದು ದೊಡ್ಡ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದ್ದರೂ ತಮಿಳುನಾಡು ಈ ಎಲ್ಲ ನೀರನ್ನು ಸಂಗ್ರಹಿಸಿಟ್ಟುಕೊಳ್ಳಲು ಆಗದೆ ಸಮುದ್ರ ಸೇರುತ್ತಿದೆ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಆರಂಭಿಸುವ ಮೂಲಕ ವ್ಯರ್ಥವಾಗುವ ನೀರನ್ನು ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೆ ಬಳಸಬೇಕೆಂದು ದಿನೇಶ್ ಗೂಳಿಗೌಡ ಸಲಹೆ ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ