ಇಂದು (ಏ.27) ರಾಜ್ಯದಲ್ಲಿ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ!

Published : Apr 27, 2021, 08:32 PM IST
ಇಂದು (ಏ.27) ರಾಜ್ಯದಲ್ಲಿ ಕೊರೋನಾ ಸೊಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆ!

ಸಾರಾಂಶ

ಮಿತಿ ಮೀರಿ ಹೆಚ್ಚುತ್ತಿರುವ ಕೋವಿಡ್‍ಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯದಲ್ಲಿ ಕಳೆದ ಶುಕ್ರವಾರ ರಾತ್ರಿಯಿಂದ ಸೋಮವಾರದ ಮುಂಜಾನೆ ವರೆಗೆ ವಾರಾಂತ್ಯದ ಕರ್ಫ್ಯೂ ವಿಧಿಸಲಾಗಿತ್ತು. ಇದರಿಂದ ಭಾನುವಾರ ದಾಖಲಾದ ಕೋವಿಡ್ ಪ್ರಕರಣಗಳಲ್ಲಿ ಇಳಿಮುಖ ಖಂಡಿತ್ತು. ಆದರೆ, ಸೋಮವಾರ ಕರ್ಫ್ಯೂ ತೆರವುಗೊಳಿಸುತ್ತಿದ್ದಂತೆ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗಿದೆ.

ಬೆಂಗಳೂರು, (ಏ.27): ವೀಕೆಂಡ್ ಕರ್ಫ್ಯೂ ತೆರೆವಾದ ಬೆನ್ನಲ್ಲೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ಇಂದು (ಮಂಗಳವಾರ)  ಬರೋಬ್ಬರಿ 31830 ಜನರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, 180 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 1400775 ಕ್ಕೆ ಏರಿಕೆಯಾಗಿದ್ರೆ, ಸಾವನ್ನಪ್ಪಿದವರ ಸಂಖ್ಯೆ 14807ಕ್ಕೇರಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದಲ್ಲಿ ಬೆಡ್, ಆಕ್ಸಿಜನ್ ಕೊರತೆ: ಮಹತ್ವದ ಕಾರ್ಯಕ್ಕೆ ಮುಂದಾದ ಕಾಂಗ್ರೆಸ್

ಮಂಗಳವಾರ 10793 ಸೋಂಕಿತರು ಸೇರಿದಂತೆ ಇದುವರೆಗೆ 1084050 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸಕ್ರಿಯ ಪ್ರಕರಣಗಳ ಒಟ್ಟು ಸಂಖ್ಯೆ 301899.

ಬೆಂಗಳೂರಿನಲ್ಲಿ ಹೆಚ್ಚು
 ಎಂದಿನಂತೆ ರಾಜ್ಯ ರಾಜಧಾನಿ ಬೆಂಗಳೂರು ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಸಿಲಿಕಾನ್ ಸಿಟಿಯಲ್ಲಿ 17550 ಜನರಿಗೆ ಕೋವಿಡ್ ತಗುಲಿರುವುದು ವರದಿಯಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 10 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!