
ಬೆಂಗಳೂರು(ನ.04): ನೈಋುತ್ಯ ರೈಲ್ವೆ ವಲಯದಲ್ಲಿ ಸರಕು ಸಾಗಣೆ ಹೆಚ್ಚಳವಾಗುತ್ತಿದ್ದು, ಅಕ್ಟೋಬರ್ ತಿಂಗಳಲ್ಲೇ ವಿವಿಧ ರೀತಿಯ 32.2 ಲಕ್ಷ ಟನ್ ಸರಕುಗಳನ್ನು ಸಾಗಿಸಲಾಗಿದೆ.
ಲಾಕ್‌ಡೌನ್ ಅವಧಿಯಲ್ಲಿ ದಾಖಲೆ ಮಟ್ಟದಲ್ಲಿ ವೈದ್ಯಕೀಯ ಮತ್ತು ಅಗತ್ಯ ವಸ್ತುಗಳ ಸಾಗಣೆ ಮಾಡಲಾಗಿತ್ತು. ಲಾಕ್‌ಡೌನ್ ಸಡಿಲಿಕೆ ನಂತರ ಪ್ರಯಾಣಿಕ ಸೇವೆಗಿಂತ ಸರಕು ಸಾಗಣೆ ಸೇವೆಯಲ್ಲಿ ಹೆಚ್ಚಳವಾಗಿದೆ. ಪ್ರಸಕ್ತ ಆರ್ಥಿಕ ವರ್ಷದ ಅಕ್ಟೋಬರ್ ಅಂತ್ಯದವರೆಗೆ ಒಟ್ಟು 1.95 ಕೋಟಿ ಟನ್ ಸರಕು ಸಾಗಿಸಲಾಗಿದೆ. ಅದರಲ್ಲಿ ಅಕ್ಟೋಬರ್ ತಿಂಗಳಲ್ಲಿಯೇ 32.2 ಲಕ್ಷ ಟನ್ ಸರಕು ಸಾಗಣೆ ಮಾಡಲಾಗಿದ್ದು, ಇದು ಒಂದು ತಿಂಗಳಲ್ಲಿ ಮಾಡಲಾದ ಅತಿ ಹೆಚ್ಚು ಸರಕು ಸಾಗಣೆಯಾಗಿದೆ.
ನೈಋುತ್ಯ ರೈಲ್ವೆಗೆ ರಾಜಧಾನಿ ಎಕ್ಸ್‌ಪ್ರೆಸ್‌ನಿಂದ ಭಾರೀ ಆದಾಯ
ತಿಂಗಳಿಗೆ 30 ಲಕ್ಷ ಟನ್:
ಕಳೆದ ಆಗಸ್ಟ್‌ನಿಂದ ಆಕ್ಟೋಬರ್‌ವರೆಗೆ ಮಾಸಿಕ ತಲಾ 30 ಲಕ್ಷ ಟನ್ ಸರಕುಗಳನ್ನು ಸಾಗಿಸಲಾಗುತ್ತಿದೆ. ಪ್ರಮುಖವಾಗಿ ವಾಹನಗಳು, ಉಕ್ಕು, ಆಹಾರ ಸಾಮಗ್ರಿಗಳ ಪ್ರಮಾಣ ಹೆಚ್ಚಿದೆ. ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ವರ್ಷದ ಸೆಪ್ಟೆಂಬರ್‌ನಲ್ಲಿ ಶೇ. 4.48 ಹಾಗೂ ಅಕ್ಟೋಬರ್‌ನಲ್ಲಿ ಶೇ. 8.61 ಹೆಚ್ಚಿನ ಸರಕು ಸಾಗಣೆ ಮಾಡಲಾಗಿದೆ ಎಂದು ನೈಋುತ್ಯ ರೈಲ್ವೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ