
ಬೆಂಗಳೂರು(ಜ.08): ಕೋವಿಡ್ ಪಾಸಿಟಿವಿಟಿ ದರದಲ್ಲಿ ಮತ್ತೆ ಏರಿಕೆಯಾಗಿದೆ. ಹೌದು, ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ರೇಟ್ 8.61 ರಷ್ಟು ಏರಿಕೆಯಾಗಿದೆ. ಇನ್ನು ಗದಗದಲ್ಲಿ ಕೊವಿಡ್‌ಗೆ ಒಂದು ಬಲಿಯಾಗಿದೆ.
ಭಾನುವಾರ ಒಟ್ಟು 329 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 1181 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 177 ಹೊಸದಾಗಿ ಕೋವಿಡ್ ಪ್ರಕರಣ ಪತ್ತೆಯಾಗಿವೆ.
297 ಮಂದಿಗೆ ಕೋವಿಡ್: ಸಕ್ರಿಯ ಕೇಸು 1136ಕ್ಕೆ
ಬೆಂಗಳೂರು: ರಾಜ್ಯದಲ್ಲಿ ಶನಿವಾರ ಮತ್ತೆ 297 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಸೋಂಕು ಪ್ರಕರಣ 1,136ಕ್ಕೆ ಏರಿಕೆಯಾಗಿತ್ತು. ಶನಿವಾರದ ವೇಳೆಗೆ ಕಳೆದ 24 ಗಂಟೆಗಳಲ್ಲಿ 7,356 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದೆ. ಶೇ.4.03ರಷ್ಟು ಪಾಸಿಟಿವಿಟಿ ದರವಿದೆ. ಸಕ್ರಿಯ ಸೋಂಕಿತರಲ್ಲಿ 1,070 ಮಂದಿ ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದಂತೆ 66 ಮಂದಿ ಆಸ್ಪತ್ರೆ ಆಸ್ಪತ್ರೆಗೆ ದಾಖಲಾಗಿದ್ದು ಇದರಲ್ಲಿ 18 ಮಂದಿ ಐಸಿಯು, 5 ಮಂದಿ ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಶನಿವಾರ ವರದಿಯಾಗಿರುವ ಸೋಂಕಿನಲ್ಲಿ ಬೆಂಗಳೂರು 171, ಮೈಸೂರು 26, ಬೆಂಗಳೂರು ಗ್ರಾಮಾಂತರ 12, ಧಾರವಾಡ, ಕೊಪ್ಪಳ ತಲಾ 8, ರಾಮನಗರ, ಮಂಡ್ಯ, ದಕ್ಷಿಣ ಕನ್ನಡ ತಲಾ 6, ಬಾಗಲಕೋಟೆ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕಲಬುರಗಿ ತಲಾ 5, ವಿಜಯನಗರ, ತುಮಕೂರು, ಶಿವಮೊಗ್ಗ, ಹಾವೇರಿ ತಲಾ 4, ಕೋಲಾರ 3, ಚಾಮರಾಜನಗರ, ಗದಗ, ರಾಯಚೂರು ತಲಾ 2, ವಿಜಯಪುರ, ಕೊಡಗು, ದಾವಣಗೆರೆ ಜಿಲ್ಲೆಗಳಲ್ಲಿ ತಲಾ ಒಂದು ಪ್ರಕರಣ ವರದಿಯಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ