* ರಾಜ್ಯದಲ್ಲಿ ಮತ್ತೆ ಕೊರೋನಾ ಏರಿಕೆ
* ಪಾಸಿಟಿವ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಏರಿಕೆ
* ಕೆಳ ದಿನಗಳ ಹಿಂದೆ ತಗ್ಗಿದ್ದ ಕೊರೋನಾ
ಬೆಂಗಳೂರು, (ಜೂನ್.30): ಕರ್ನಾಟಕದಲ್ಲಿ ಇಂದು (ಬುಧವಾರ) ಕೊರೋನಾ ಪಾಸಿಟಿವ್ ಕೇಸ್ ಹಾಗೂ ಸಾವಿನ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದೆ.
ರಾಜ್ಯದಲ್ಲಿ ಬುಧವಾರ 3382 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, 111 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಒಂದೇ ದಿನ 813 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 11 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
undefined
ಕರ್ನಾಟಕದಲ್ಲಿ ಮತ್ತೆ ಕೊರೋನಾ ಕೊಂಚ ಏರಿಕೆ: ಇಲ್ಲಿದೆ ಜೂನ್.29ರ ಅಂಕಿ-ಸಂಖ್ಯೆ
ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 28,43,810ಕ್ಕೆ ಏರಿಕೆಯಾಗಿದ್ರೆ, ಈವರೆಗೆ ಕೊರೋನಾದಿಂದ 35,040 ಜನರು ಮೃತಪಟ್ಟಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ಸೋಂಕಿತರ ಪೈಕಿ 27,32,242 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. 76,505 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12,13,559ಕ್ಕೆ ಏರಿಕೆಯಾಗಿದೆ. ಈ ಪೈಕಿ 11,54,234 ಜನರು ಗುಣಮುಖರಾಗಿದ್ದಾರೆ. 43,698 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಲ್ಲಿ ಕೊರೊನಾ ಸೋಂಕಿನಿಂದ ಈವರೆಗೆ ಮೃತಪಟ್ಟವರ ಒಟ್ಟು ಸಂಖ್ಯೆಯು 15,626ಕ್ಕೆ ಏರಿಕೆಯಾಗಿದೆ.