
ಬೆಂಗಳೂರು (ಮಾ.6): ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮಾರು 34 ಸಾವಿರ ಅತಿಥಿ ಶಿಕ್ಷಕರಿಗೆ ಕಳೆದ ಐದು ತಿಂಗಳಿಂದ ಗೌರವ ಧನ ದೊರೆಯದೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಅತಿಥಿ ಶಿಕ್ಷಕರಿಗೆ ಸರ್ಕಾರ ಮಾಸಿಕ ಕೇವಲ 1000 ರು. ಗೌರವಧನ ನೀಡುತ್ತಿದೆ. ಆದರೆ, ಅದನ್ನೂ ಪ್ರತೀ ತಿಂಗಳು ನೀಡುತ್ತಿಲ್ಲ. ಹೀಗಾದರೆ ನಾವು ಜೀವನ ನಡೆಸುವುದು ಹೇಗೆ? ಎಂದು ಅತಿಥಿ ಉಪನ್ಯಾಸಕರು ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗುಡ್‌ನ್ಯೂಸ್ ಕೊಟ್ಟ ಸರ್ಕಾರ, ಗೌರವಧನ 2000 ಏರಿಸಿ ಆದೇಶ
ಸರ್ಕಾರಿ ಶಾಲೆಗಳಲ್ಲಿ ವರ್ಷದಿಂದ ವರ್ಷಕ್ಕೆ ಅತಿಥಿ ಶಿಕ್ಷಕರ ಸಂಖ್ಯೆ ಹೆಚ್ಚುತ್ತಿದೆ. ಈ ಬಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆ ಎರಡೂ ಸೇರಿ ಸುಮಾರು 48 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಪ್ರೌಢ ಶಾಲಾ ಅತಿಥಿ ಶಿಕ್ಷಕರಿಗೆ ಇತ್ತೀಚೆಗಷ್ಟೇ ಗೌರವಧನ ನೀಡಲಾಗಿದೆ. ಆದರೆ, ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಕಳೆದ ನವೆಂಬರ್ ತಿಂಗಳಿಂದ ಇಲ್ಲಿಯವರೆಗೆ ಗೌರವಧನ ನೀಡದೆ ಸುಮಾರು 40 ಕೋಟಿ ರು.ಯಷ್ಟು ಬಾಕಿ ಉಳಿಸಿಕೊಂಡಿದೆ ಎಂದು ಅತಿಥಿ ಉಪನ್ಯಾಸಕರು ಅಳಲು ತೋಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ