ವೀಕೆಂಡ್ ಕರ್ಫ್ಯೂ ಜಾರಿ ಇದ್ದರೂ ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಅಬ್ಬರಿಸಿದೆ. ಏ.25 ಅಂಕಿ-ಸಂಖ್ಯೆ ಈ ಕೆಳಗಿನಂತಿದೆ ನೋಡಿ..
ಬೆಂಗಳೂರು, (ಏ.25): ರಾಜ್ಯದಲ್ಲಿ ಇಂದು (ಭಾನುವಾರ) ಕೊರೋನಾ ಮಹಾಸ್ಪೋಟವೇ ಆಗಿದೆ. ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಬರೋಬ್ಬರಿ 34,804 ಪಾಸಿಟಿವ್ ಕೇಸ್ ಸಿಕ್ಕಿದ್ದು, 143 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಈ ಮೂಲಕ ಸೋಂಕಿತರ ಸಂಖ್ಯೆ 1339201 ಕ್ಕೆ ಏರಿಕೆಯಾಗಿದ್ದು, ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 14426 ಕ್ಕೆ ಏರಿಕೆಯಾಗಿರುವುದಾಗಿ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
undefined
ಮುಂದಿನ ವಾರವೂ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ: ಸುಳಿವು ಕೊಟ್ಟ ಸಚಿವ .
ಇನ್ನು ಕಳೆದ 24 ಗಂಟೆಯಲ್ಲಿ 6982 ಸೋಂಕಿತರು ಸೇರಿದಂತೆ ಇದುವರೆಗೆ 1062594 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಬೆಂಗಳೂರು ನಗರದಲ್ಲಿ 1,80,542 ಸೇರಿದಂತೆ ರಾಜ್ಯಾಧ್ಯಂತ 2,62,162 ಸಕ್ರಿಯ ಕೇಸ್‌ಗಳಿವೆ.
ಬೆಂಗಳೂರಿನ ಅಂಕಿ-ಸಂಖ್ಯೆ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾನುವಾರ 20,733 ಜನರಿಗೆ ಕೊರೋನಾ ಸೊಂಕು ತಗುಲಿರುವುದು ದೃಢಪಟ್ಟಿದ್ದು, 77 ಜನರು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ ಸದ್ಯ 1,80,542 ಸಕ್ರಿಯ ಕೇಸ್‌ಗಳಿವೆ.