ಕರ್ನಾಟಕದಲ್ಲಿ ಕೊರೋನಾ ಏರಿಳಿತ: ಇಲ್ಲಿದೆ ಅ.19ರ ಅಂಕಿ-ಸಂಖ್ಯೆ

Published : Oct 19, 2021, 09:46 PM IST
ಕರ್ನಾಟಕದಲ್ಲಿ ಕೊರೋನಾ ಏರಿಳಿತ: ಇಲ್ಲಿದೆ ಅ.19ರ ಅಂಕಿ-ಸಂಖ್ಯೆ

ಸಾರಾಂಶ

* ಕರ್ನಾಟಕದಲ್ಲಿ ಕೊರೋನಾ ಏರಿಳಿತ * ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ಪ್ರಮಾಣ ಶೇ 0.41 * ಕರ್ನಾಟಕ ಆರೋಗ್ಯ ಇಲಾಖೆಯಿಂದ ಮಾಹಿತಿ

ಬೆಂಗಳೂರು, (ಅ.19): ಕರ್ನಾಟಕದಲ್ಲಿ (Karnataka ಇಂದು (ಮಂಗಳವಾರ) 349 ಕೊರೋನಾ ಪಾಸಿಟಿವ್ (Coronavirus)  ಕೇಸ್ ಪತ್ತೆಯಾಗಿದ್ದು, 14 ಜನರು ಸಾವನ್ನಪ್ಪಿದ್ದಾರೆ. 

ಇನ್ನು 399 ಮಂದಿ ಕೊವಿಡ್​ನಿಂದ (Covid) ಚೇತರಿಸಿಕೊಂಡು ವಿವಿಧ ಆಸ್ಪತ್ರೆಗಳಿಂದ ಡಿಸ್​ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ 9100 ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ಪ್ರಮಾಣ (positivity Rate) ಶೇ 0.41 ಇದೆ.

ವಿದೇಶದಿಂದ ಬರುವವರಿಗೆ ಕೋವಿಡ್‌ ಪರೀಕ್ಷೆ ಇಲ್ಲ!

ರಾಜ್ಯದಲ್ಲಿ ಈವರೆಗೆ ಒಟ್ಟು 29,84,022 ಸೋಂಕು ದೃಢಪಟ್ಟಿದ್ದು, ಈವರೆಗೆ 37,967 ಜನರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
29,36,926 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿ 161 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 125 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. 5 ಜನರು ಸಾವನ್ನಪ್ಪಿದ್ದಾರೆ. ಈ ಮೂಲಕ ಸಿಲಿಕಾನ್  ಸಿಟಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 12,49,662 ಇದ್ದರೆ, ಚೇತರಿಸಿಕೊಂಡವರ ಸಂಖ್ಯೆ 12,26,666 ಇದೆ. ನಗರದಲ್ಲಿ ಪ್ರಸ್ತುತ 6,776 ಸಕ್ರಿಯ ಪ್ರಕರಣಗಳಿವೆ. ಕೊವಿಡ್​ನಿಂದ ಈವರೆಗೆ 16,219 ಮಂದಿ ಬಲಿಯಾಗಿದ್ದಾರೆ.

ಯಾವ ಜಿಲ್ಲೆಯಲ್ಲಿ ಎಷ್ಟು ಕೇಸ್? 
ಬೆಂಗಳೂರು ನಗರ 161, ಮೈಸೂರು 37, ದಕ್ಷಿಣ ಕನ್ನಡ 24, ಹಾಸನ 23, ಉತ್ತರ ಕನ್ನಡ 19, ತುಮಕೂರು 14, ಶಿವಮೊಗ್ಗ 12, ಚಿಕ್ಕಮಗಳೂರು 8, ಕೋಲಾರ, ಬೆಳಗಾವಿ 5, ಮಂಡ್ಯ, ರಾಮನಗರ, ಚಿತ್ರದುರ್ಗ, ಕೊಡಗು 4, ಬೆಂಗಳೂರು ಗ್ರಾಮಾಂತರ, ಧಾರವಾಡ, ಕೊಪ್ಪಳ 2, ದಾವಣಗೆರೆ, ಚಾಮರಾಜನಗರ, ಬೀದರ್, ಬಳ್ಳಾರಿ, ವಿಜಯಪುರ, ಯಾದಗಿರಿ, ರಾಯಚೂರು 1.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಅಪರೂಪದ ಕೋತಿ ಪ್ರಭೇದ ಬ್ಯಾಗ್‌ನಲ್ಲಿಟ್ಟು ವಿದೇಶದಿಂದ ಅಕ್ರಮ ಸಾಗಾಟ, ಬೆಂಗಳೂರು ಏರ್ಪೋರ್ಟ್‌ನಲ್ಲಿ ಸಿಕ್ಕಿಬಿದ್ದ ಪ್ರಯಾಣಿಕ!
ಡೆವಿಲ್ ಇನ್ ಟ್ರಬಲ್: ನಟ ದರ್ಶನ್‌ನಿಂದ ಒಂದು ಗನ್ ಕಿತ್ತುಕೊಂಡರೂ ಮತ್ತೊಂದು .22mm ರೈಫಲ್ ಮರೆತ ಪೊಲೀಸರು