
ಬೆಂಗಳೂರು (ಸೆ.20) : ಕನ್ನಡಪರ ಹೋರಾಟಗಾರರು, ರೈತ ಮುಖಂಡರ ಮೇಲೆ ದಾಖಲಾದ ಕೇಸುಗಳೂ ಸೇರಿದಂತೆ 35 ಕ್ರಿಮಿನಲ್ ಮೊಕದ್ದಮೆಗಳನ್ನು ವಾಪಸ್ ಪಡೆಯಲು ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಹಾಸ್ಟೆಲ್‌ಗಳಲ್ಲಿ ಹೆಚ್ಚುವರಿ ಶೇ.25 ರಷ್ಟುಸಂಖ್ಯಾಬಲ ಹೆಚ್ಚಳ
ಸಚಿವ ಸಂಪುಟದ ಉಪಸಮಿತಿಯ ಶಿಫಾರಸು ಆಧರಿಸಿ ತೀರ್ಮಾನಿಸಲಾಗಿದೆ. ಕನ್ನಡಪರ ಹೋರಾಟಗಾರರು, ರೈತ ಮುಖಂಡರು ಸೇರಿದಂತೆ ಇತರ ವಿರುದ್ಧ ದಾಖಲಾದ 35 ಕ್ರಿಮಿನಲ್ ಮೊಕದ್ದಮೆಗಳನ್ನು ಹಿಂಪಡೆಯಲು ನಿರ್ಧರಿಸಲಾಗಿದೆ. ಇದರಲ್ಲಿ ಬಿಜೆಪಿ ಕಾರ್ಯಕರ್ತರು, ಹಿಂದೂ ಪರ ಕಾರ್ಯಕರ್ತರು ಸಹ ಸೇರಿದ್ದಾರೆ ಎಂದು ಮೂಲಗಳು ಹೇಳಿವೆ.
ಸಂಪುಟದ ಇತರ ನಿರ್ಣಯಗಳು:
ಕೊನೆಗೂ ಪೌರಕಾರ್ಮಿಕರ ಹೋರಾಟಕ್ಕೆ ಜಯ; ಸರ್ಕಾರಿ ನೌಕರರಾಗಿ ನೇಮಕ!
ಪ್ರೌಢಶಿಕ್ಷಣ ಮಂಡಳಿ, ಪಪೂ ಮಂಡಳಿ ವಿಲೀನ:
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮತ್ತು ಪದವಿಪೂರ್ವ ಶಿಕ್ಷಣ ಮಂಡಳಿಯನ್ನು ವಿಲೀನಗೊಳಿಸುವ ಮಹತ್ವ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. ಸೋಮವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಪ್ರೌಢ ಶಿಕ್ಷಣ ಮಂಡಳಿ ಮತ್ತು ಪದವಿ ಪೂರ್ವ ಶಿಕ್ಷಣ ಮಂಡಳಿ ವಿಲೀನಗೊಳಿಸುವ ಸಂಬಂಧ ವಿಧೇಯಕಕ್ಕೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಕುರಿತ ವಿಧೇಯಕವನ್ನು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಮಂಡನೆ ಮಾಡುವ ಸಾಧ್ಯತೆ ಇದೆ. ಎರಡು ಮಂಡಳಿಗಳನ್ನು ಒಗ್ಗೂಡಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಎಂಬ ಒಂದೇ ಪರೀಕ್ಷಾ ಮಂಡಳಿಯನ್ನು ರಚಿಸಲಾಗುವುದು. ಎನ್‌ಇಪಿ ಅನ್ವಯ ಮರುನಾಮಕರಣ ಮಾಡಬೇಕಾಗಿದೆ ಎಂದು ಹೇಳಲಾಗಿದೆ. ವಿಲೀನಗೊಳಿಸುವ ಮೂಲಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಹೊಸ ಸ್ವರೂಪ ಪಡೆಯಲಿದೆ.
ಒಂದು ಸಾವಿರ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗಾಗಿ ಶೀಘ್ರ ಹಾಸ್ಟೆಲ್: ಕೋಟ ಶ್ರೀನಿವಾಸ ಪೂಜಾರಿ
ಇದೇ ವೇಳೆ ಕರ್ನಾಟಕ ಶಿಕ್ಷಕರ ವರ್ಗಾವಣೆ ನಿಯಂತ್ರಣ ತಿದ್ದುಪಡಿ ವಿಧೇಯಕಕ್ಕೆ ಸಚಿವ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶಿಕ್ಷಕರ ವರ್ಗಾವಣೆಯಲ್ಲಿನ ಕೆಲ ಗೊಂದಲಗಳ ನಿವಾರಣೆಗೆ ಕುರಿತ ವಿಧೇಯಕ ಇದಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ