ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಸುಮಾರು 8ರಿಂದ 9 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ, ಅದರ ಪ್ರಮಾಣ ಪ್ರತಿದಿನ ಸುಮಾರು 4 ಸಾವಿರಕ್ಕೆ ಇಳಿದೆ.
ಬೆಂಗಳೂರು, (ಅ.30): ರಾಜ್ಯದಲ್ಲಿ ಇಂದು (ಶುಕ್ರವಾರ) 3589 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 49 ಮಂದಿ ಮಹಾಮಾರಿಗೆ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 8,20,398ಕ್ಕೆ ಏರಿಕೆಯಾಗಿದ್ದು, ಸಾವಿನ ಸಂಖ್ಯೆ 11,140ಕ್ಕೇರಿದೆ.
undefined
ಬಿಗ್ ನ್ಯೂಸ್: ಕರ್ನಾಟಕದಲ್ಲಿ ಶಾಲೆ ಪ್ರಾರಂಭಿಸಲು ಸಕಲ ಸಿದ್ಧತೆ
ಇನ್ನು ಕಳೆದ 24 ಗಂಟೆಗಳಲ್ಲಿ 8521 ಸೋಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ ಇದುವರೆಗೆ ಒಟ್ಟು 7,49,740 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಸದ್ಯ ರಾಜ್ಯದಲ್ಲಿ 59,499 ಸಕ್ರೀಯ ಕೊರೋನಾ ಕೇಸ್‌ಗಳಿವೆ.
ಬೆಂಗಳೂರಿನಲ್ಲಿ 27 ಮಂದಿ ಮೃತಪಟ್ಟಿದ್ದಾರೆ. ರಾಜ್ಯದಲ್ಲಿ 7,49,740 ಗುಣಮುಖಿತರಾಗಿ ಡಿಸ್ಚಾರ್ಜ್ ಆಗಿದ್ದು, 59,449 ಸಕ್ರಿಯ ಪ್ರಕರಣಗಳಿವೆ.
ಸೋಂಕಿನ ಪ್ರಮಾಣ ಇಳಿಕೆ
ಹೌದು...ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ಕಳೆದ ಒಂದು ವಾರದಿಂದ ಪ್ರತಿನಿತ್ಯ ಸುಮಾರು 8ರಿಂದ 9 ಸಾವಿರ ಪಾಸಿಟಿವ್ ಪ್ರಕರಣಗಳು ದಾಖಲಾಗುತ್ತಿದ್ದವು. ಆದ್ರೆ, ಅದರ ಪ್ರಮಾಣ ಪ್ರತಿದಿನ ಸುಮಾರು 4 ಸಾವಿರಕ್ಕೆ ಇಳಿದೆ.