
ವಿಧಾನಸಭೆ(ಫೆ.23): ರಾಜ್ಯದಲ್ಲಿ 3604 ಹೊಸ ಬಸ್‌ಗಳನ್ನು ಖರೀದಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದ್ದು, ಈ ಪೈಕಿ ಕಲ್ಯಾಣ ಕರ್ನಾಟಕ ಭಾಗಕ್ಕೆ 800 ಬಸ್‌ಗಳನ್ನು ಒದಗಿಸಲಾಗುತ್ತದೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಉತ್ತರಿಸಿ, ಶಾಲಾ ಮಕ್ಕಳಿಗೆ ಸಮಸ್ಯೆಯಾಗದಂತೆ ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗುವುದು. ಜೂನ್ ತಿಂಗಳ ವೇಳೆಗೆ ಹೊಸ ಬಸ್‌ಗಳು ಲಭ್ಯವಾಗಲಿವೆ. ಹೊಸ ಬಸ್‌ಗಳನ್ನು ಖರೀದಿ ಮಾಡುತ್ತಿರುವುದರಿಂದ ಅಗತ್ಯವಿರುವ ಕಡೆ ಆದ್ಯತೆ ಮೇಲೆ ಬಸ್‌ಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.
KSRTC: ಸರ್ಕಾರದ ವಿರುದ್ಧ ಮತ್ತೆ ಸಾರಿಗೆ ನೌಕರರ ಸಮರ: ಮಾರ್ಚ್ 1ರಿಂದ ಬಸ್ ಬಂದ್ ಸಾಧ್ಯತೆ
ಕಲ್ಯಾಣ ಕರ್ನಾಟಕ ವ್ಯಾಪ್ತಿಯ 41 ವಿಧಾನಸಭಾ ಕ್ಷೇತ್ರಗಳಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಒಟ್ಟು 45 ಘಟಕಗಳಿವೆ. ಈ ಪೈಕಿ ರಾಯಚೂರು ಒಂದನೇ ಘಟಕವನ್ನು ಪುನರ್ ನಿರ್ಮಿಸಲಾಗುತ್ತಿದೆ. ಬಸ್ ಘಟಕಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಸಾರ್ವಜನಿಕ ಪ್ರಯಾಣಿಕರ ಮತ್ತು ವಿದ್ಯಾರ್ಥಿಗಳ ಅವಶ್ಯಕತೆಗನುಗುಣವಾಗಿ ಬಸ್ ಸಂಚಾರಕ್ಕೆ ಕ್ರಮ ಕೈಗೊಳ್ಳಲಾಗಿದೆ. 925 ಚಾಲಕ, 694 ಚಾಲಕ ಕಂ ನಿರ್ವಾಹಕ ಮತ್ತು 300 ನಿರ್ವಾಹಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದರು.
ಕಾಂಗ್ರೆಸ್ ಸದಸ್ಯ ಡಾ.ರಂಗನಾಥ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕುಣಿಗಲ್ ತಾಲೂಕಿನಲ್ಲಿ ಒಟ್ಟು 315 ಗ್ರಾಮಗಳಿದ್ದು, ಈ ಪೈಕಿ 297 ಗ್ರಾಮಗಳಿಗೆ ನಿಗಮದ ವತಿಯಿಂದ ಸಾರಿಗೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಉಳಿದ 18 ಗ್ರಾಮಗಳ ರಸ್ತೆಗಳು ಭಾರೀ ವಾಹನಗಳ ಕಾರ್ಯಾಚರಣೆಗೆ ಯೋಗ್ಯವಾಗಿರುವುದಿಲ್ಲ ಎಂದರು. ಈ ವೇಳೆ ರಂಗನಾಥ್, ಸರ್ಕಾರವು ನಮಗೆ ಕೇವಲ ಚಾಕಲೇಟ್ ತೋರಿಸುತ್ತಿದೆಯೇ ಹೊರತು ಚಾಕಲೇಟ್ ನೀಡುತ್ತಿಲ್ಲ ಎಂದು ವ್ಯಂಗ್ಯವಾಡಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ