ಬಾಲಮಂದಿರಗಳಿಂದ ಕಾಣೆಯಾದ 484 ಮಕ್ಕಳಲ್ಲಿ 365 ಪತ್ತೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

Published : Aug 03, 2022, 12:30 AM IST
ಬಾಲಮಂದಿರಗಳಿಂದ ಕಾಣೆಯಾದ 484 ಮಕ್ಕಳಲ್ಲಿ 365 ಪತ್ತೆ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ಸಾರಾಂಶ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಲ್ಲಿಸಿದ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಿದ ಸರ್ಕಾರದ ಪರ ವಕೀಲರು

ಬೆಂಗಳೂರು(ಆ.03):  ರಾಜ್ಯದ ಸರ್ಕಾರಿ ಬಾಲ ಮಂದಿರಗಳಿಂದ (ಮಕ್ಕಳ ಆರೈಕೆ ಕೇಂದ್ರ) ಈವರೆಗೆ ಕಾಣೆಯಾಗಿರುವ 484 ಮಕ್ಕಳಲ್ಲಿ 365 ಮಕ್ಕಳನ್ನು ಪತ್ತೆ ಹಚ್ಚಲಾಗಿದೆ ಹಾಗೂ 119 ಮಕ್ಕಳನ್ನು ಪತ್ತೆ ಮಾಡಬೇಕಿದೆ ಎಂದು ಸರ್ಕಾರ ಹೈಕೋರ್ಟ್‌ಗೆ ಮಾಹಿತಿ ನೀಡಿದೆ. ಈ ಕುರಿತಂತೆ ಕೋಲಾರದ ಸಾಮಾಜಿಕ ಕಾರ್ಯಕರ್ತ ಕೆ.ಸಿ.ರಾಜಣ್ಣ ಸಲ್ಲಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಆರಾಧೆ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಲ್ಲಿಸಿದ ವರದಿಯನ್ನು ನ್ಯಾಯಪೀಠಕ್ಕೆ ಒದಗಿಸಿದ ಸರ್ಕಾರದ ಪರ ವಕೀಲರು, ಇಲಾಖೆಯಿಂದ ನಡೆಸಲಾಗುತ್ತಿರುವ ಬಾಲಮಂದಿರಗಳಿಂದ ಒಟ್ಟು 484 ಮಕ್ಕಳು ನಾಪತ್ತೆಯಾಗಿದ್ದಾರೆ. ಅವರಲ್ಲಿ 365 ಮಕ್ಕಳನ್ನು ಪತ್ತೆಯಾಗಿದ್ದಾರೆ. ಇನ್ನೂ 119 ಮಕ್ಕಳು ಪತ್ತೆಯಾಗಬೇಕಿದೆ. ಪತ್ತೆಯಾಗಿರುವ 365 ಮಕ್ಕಳ ಪೈಕಿ 352 ಮಕ್ಕಳು ತಮ್ಮ ಪೋಷಕರೊಂದಿಗೆ ವಾಸವಾಗಿದ್ದಾರೆ. 12 ಮಕ್ಕಳು ಬಾಲ ಮಂದಿರಗಳಲ್ಲಿ ತಂಗಿದ್ದಾರೆ. ಇಬ್ಬರು ಮಕ್ಕಳು ಎಚ್‌ಐವಿ, ಟಿಬಿ ಕಾಯಿಲೆಯಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.

ಕೇಸ್‌ ರದ್ದತಿಗೆ ಡಿಕೆಶಿ ಅರ್ಜಿ: ಸಿಬಿಐಗೆ ಹೈಕೋರ್ಟ್‌ ನೋಟಿಸ್‌

ಪತ್ತೆಯಾಗದ 119 ಮಕ್ಕಳ ಪ್ರಕರಣಗಳಲ್ಲಿ 53 ಪ್ರಕರಣಗಳನ್ನು ಸಂಬಂಧಪಟ್ಟ ಪೊಲೀಸ್‌ ಠಾಣೆಗಳಿಗೆ ಮತ್ತು 66 ಪ್ರಕರಣಗಳನ್ನು ಮಾನವ ಕಳ್ಳಸಾಗಾಣಿಕೆ ತಡೆ ಘಟಕಕ್ಕೆ(ಎಎಚ್‌ಟಿಯು) ವರ್ಗಾಯಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ವರದಿ ದಾಖಲಿಸಿಕೊಂಡ ನ್ಯಾಯಪೀಠ, ನಾಪತ್ತೆಯಾಗಿರುವ ಮಕ್ಕಳ ಪತ್ತೆಗೆ ಕೈಗೊಂಡಿರುವ ಕ್ರಮಗಳ ಕುರಿತು ನಾಲ್ಕು ವಾರದಲ್ಲಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿ ವಿಚಾರಣೆ ಮುಂದೂಡಿತು. ಅರ್ಜಿದಾರರ ಪರ ವಕೀಲ ಎಸ್‌. ಉಮಾಪತಿ ವಾದ ಮಂಡಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ