ಕರ್ನಾಟಕದಲ್ಲಿ ಕಡಿಮೆಯಾಯ್ತು ಕೊರೋನಾ ಸೋಂಕಿನ ಪ್ರಮಾಣ: ಇಲ್ಲಿದೆ ಅಂಕಿ-ಅಂಶ!

By Suvarna News  |  First Published Oct 27, 2020, 10:16 PM IST

ಕರ್ನಾಟಕದಲ್ಲಿ ಕೊರೋನಾ ವೈರಸ್ ಸೋಂಕಿನ ಹರಡುವಿಕೆ ಪ್ರಮಾಣದಲ್ಲಿ ಭಾರಿ ಇಳಿಕೆಯಾಗಿದೆ. ಇದು ಉತ್ತಮ ಬೆಳವಣಿಗೆಯಾಗಿದೆ.


ಬೆಂಗಳೂರು, (ಅ.27): ಕರ್ನಾಟಕದಲ್ಲಿ ಕಳೆದ 24 ಗಂಟೆಗಳಲ್ಲಿ  3691 ಜನರಿಗೆ ಕೊರೋನಾ ವೈರಸ್ ಸೋಂಕು ಪ್ರಕರಣಳು ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆಯು 809638ಕ್ಕೆ ಏರಿಕೆಯಾಗಿದೆ. 

ಇನ್ನು ರಾಜ್ಯದಲ್ಲಿ ಒಂದೇ ದಿನ ಮಹಾಮಾರಿ ಕೊರೋನಾ ವೈರಸ್ ಸೋಂಕಿಗೆ 44 ಜನರು ಸಾವನ್ನಪ್ಪಿದ್ದು,  ಒಟ್ಟು ಸಾವಿನ ಸಂಖ್ಯೆ 10991ಕ್ಕೆ ಏರಿಕೆಯಾಗಿದೆ.  ಒಟ್ಟು 809638 ಸೋಂಕಿತ ಪ್ರಕರಣಗಳ ಪೈಕಿ 727298 ಸೋಂಕಿತರು ಗುಣಮುಖರಾಗಿದ್ದಾರೆ. 71330 ಸಕ್ರಿಯ ಪ್ರಕರಣಗಳಿವೆ. 

Latest Videos

undefined

ಕೊರೋನಾ ಲಸಿಕೆಯ ಪ್ರಯೋಗಕ್ಕೆ ಒಳಗಾದ ಮೈಸೂರಿನ ವೈದ್ಯೆ, ಸುವರ್ಣ ನ್ಯೂಸ್ ಜತೆ ಮಾತು..! 

ಕಳೆದ 24 ಗಂಟೆಗಳಲ್ಲಿ 7740 ಕೊವಿಡ್-19 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ.

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲೇ 14385 ಜನರನ್ನು ರಾಪಿಡ್ ಆಂಟಿಜೆನ್ ಡಿಟೆಕ್ಷನ್ ತಪಾಸಣೆಗೆ ಒಳಪಡಿಸಲಾಗಿದ್ದು, 52316 ಜನರಿಗೆ RT-PCR ವೈದ್ಯಕೀಯ ತಪಾಸಣೆ ನಡೆಸಲಾಗಿದೆ. ಒಂದೇ ದಿನ 66701 ಜನರನ್ನು ಕೊವಿಡ್-19 ಟೆಸ್ಟ್ ಗೆ ಒಳಪಡಿಸಲಾಗಿದೆ. ರಾಜ್ಯದಲ್ಲಿ ಇದುವರೆಗೂ 75,14,194 ಜನರಿಗೆ ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ.

click me!