ಇಬ್ಬರು ಡಿಸಿ ಸೇರಿ ನಾಲ್ವರು ಐಎಎಸ್ ಅಧಿಕಾರಿ ವರ್ಗ

Published : Oct 06, 2018, 08:31 AM ISTUpdated : Oct 06, 2018, 09:10 AM IST
ಇಬ್ಬರು ಡಿಸಿ ಸೇರಿ ನಾಲ್ವರು ಐಎಎಸ್ ಅಧಿಕಾರಿ ವರ್ಗ

ಸಾರಾಂಶ

ಇಬ್ಬರು ಜಿಲ್ಲಾಧಿಕಾರಿಗಳು ಸೇರಿ ಒಟ್ಟು ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. 

ಬೆಂಗಳೂರು: ರಾಜ್ಯ ಸರ್ಕಾರದ ಸ್ಕಿಲ್ ಮಿಷನ್ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ವಸಿರೆಡ್ಡಿ ವಿಜಯಾ ಜ್ಯೋತ್ಸ್ನಾ ಅವರನ್ನು  ವರ್ಗಾಯಿಸಲಾಗಿದ್ದು, ವಸಿರೆಡ್ಡಿ  ಸೇರಿದಂತೆ ನಾಲ್ವರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಶುಕ್ರವಾರ ಸರ್ಕಾರ ಆದೇಶ ಹೊರಡಿಸಿದೆ. 

ರಾಯಚೂರು ಜಿಲ್ಲಾಧಿಕಾರಿಯಾಗಿದ್ದ ಡಾ. ಬಗಾಡಿ ಗೌತಮ್ ಅವರನ್ನು ದಾವಣಗೆರೆ ಜಿಲ್ಲಾಧಿಕಾರಿಯನ್ನಾಗಿ, ಹುದ್ದೆ ನಿರೀಕ್ಷೆಯಲ್ಲಿದ್ದ ಬಿ. ಶರತ್ ಅವರನ್ನು ರಾಯಚೂರು ಜಿಲ್ಲಾಧಿಕಾರಿಯನ್ನಾಗಿ, ಆರ್. ಸ್ನೇಹಲ್ ಅವರನ್ನು ಮಂಗಳೂರು ವಿದ್ಯುತ್ ಸರಬರಾಜು ಕಂಪನಿ (ಮೆಸ್ಕಾಂ) ವ್ಯವಸ್ಥಾಪಕ ನಿರ್ದೇಶಕಿಯನ್ನಾಗಿ ವರ್ಗಾಯಿಸಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!
ದ್ವೇಷ ಭಾಷಣ ಪ್ರಕರಣ; ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ನಿರೀಕ್ಷಣಾ ಜಾಮೀನು!