ಎರಡು ಕಾರು ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಕ್ರಾಸ್ ಬಳಿ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ.
ಹಾವೇರಿ (ಜ. 15): ಎರಡು ಕಾರು ಹಾಗೂ ಲಾರಿ ನಡುವೆ ಡಿಕ್ಕಿ (Collision) ಸಂಭವಿಸಿದ ಪರಿಣಾಮ ನಾಲ್ವರು ಮೃತಪಟ್ಟು, ಮೂವರು ಗಾಯಗೊಂಡಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಕ್ರಾಸ್ ಬಳಿ ಘಟನೆ ನಡೆದಿದ್ದು, ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಓರ್ವ ಬಾಲಕಿ ಸೇರಿದಂತೆ ಮೂವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದ ಭೀಕರತೆಗೆ ಕಾರು ನುಜ್ಜು ನುಜ್ಜಾಗಿ ಹೋಗಿದೆ.
ಅಪಘಾತದಲ್ಲಿ ಮೃತಪಟ್ಟವರು ಉಕ್ಕಡಗಾತ್ರಿಗೆ ದೇವರ ದರ್ಶನಕ್ಕೆ ಬಂದಿದ್ದ ಶಿಕಾರಿಪುರ ತಾಲೂಕಿನ ಮತ್ತಿಕೋಟಿ ಗ್ರಾಮದವರಾಗಿದ್ದಾರೆ. ಇವರು ಒಂದೆ ಕುಟುಂಬದವರಾಗಿದ್ದು, ಎರಡು ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿ ಒದ್ದಾಡುತ್ತಿದ್ದ ಕೆಲವರನ್ನು ಆಸ್ಪತ್ರೆಗೆ ಸೇರಿಸಲು ಸಂಬಂಧಿಕರು ಹಾಗೂ ಜನರು ಸಾಹಸಪಟ್ಟರು. ಈ ವೇಳೆ ಸ್ಥಳಕ್ಕೆ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಟ್ಟಿಹಳ್ಳಿ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
undefined
Bengaluru Accident: 2 ಕಾರು, ಬೈಕ್ ಮೇಲೆ ಲಾರಿ ಪಲ್ಟಿ: 6 ಜನರ ಸಾವು
ಬಳ್ಳಾರಿ ಜಿಲ್ಲೆಯ ಘೋರ ಅಪಘಾತ: ರಸ್ತೆ ಪಕ್ಕದಲ್ಲಿ ಕೆಟ್ಟು ನಿಂತಿದ್ದ ಇಟ್ಟಿಗೆ ತುಂಬಿದ ಟ್ರ್ಯಾಕ್ಟರ್ ಟ್ರಾಲಿಗೆ ಬೈಕ್ ಡಿಕ್ಕಿ(Collision) ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿರುವ(Death) ಬಳ್ಳಾರಿಯಿಂದ ವರದಿಯಾಗಿತ್ತು. ತಾಲೂಕಿನ ಬಾದನಹಟ್ಟಿ ಗ್ರಾಮದ ಸಪ್ತಗಿರಿ ಕ್ಯಾಂಪ್ ಬಳಿ ಈ ಘಟನೆ ಜರುಗಿದೆ. ಮೃತಪಟ್ಟವರನ್ನು ಬಾದನಹಟ್ಟಿ ಗ್ರಾಮ ನಿವಾಸಿಗಳಾದ ಗೊಲ್ಲರ ಗೋಪಾಲ(28), ಕರಿ ಬ್ಯಾಡರ ಕರಿಬಸಪ್ಪ(32), ಕರಿಬ್ಯಾಡರ ದೊಡ್ಡಬಸಪ್ಪ(30) ಎಂದು ಗುರುತಿಸಲಾಗಿತ್ತು. ಸಿದ್ದಮ್ಮನಹಳ್ಳಿ ರಸ್ತೆ ಪಕ್ಕದಲ್ಲಿರುವ ತಮ್ಮ ಜಮೀನಿನಿಂದ ಗ್ರಾಮಕ್ಕೆ ವಾಪಾಸ್ ಮರಳುವಾಗ ಈ ಘಟನೆ ಜರುಗಿತ್ತು
ಟೆಕ್ಕಿಗಳ ಸಾವು: ನೈಸ್ ರಸ್ತೆಯಲ್ಲಿ ಭೀಕರ ಅಪಘಾತ (Road Accident) ಸಂಭವಿಸಿ ಸ್ಥಳದಲ್ಲಿಯೇ ನಾಲ್ವರು ಟೆಕ್ಕಿಗಳು ಸಾವು ಕಂಡಿದ್ದರು. ಕುಮಾರಸ್ವಾಮಿ ಲೇಔಟ್ ಅಪಾರ್ಟ್‌ಮೆಂಟ್ ಬಳಿ ಕಳೆದ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು (Death) ದುರ್ಮರಣಕ್ಕೀಡಾಗಿದ್ದರು. ಬನ್ನೇರುಘಟ್ಟ ಕಡೆಯಿಂದ ತುಮಕೂರು ಕಡೆ ತೆರಳುತ್ತಿದ್ದ ಕಾರಿಗೆ ಹಿಂಬದಿಯಿಂದ ಬಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾನ್ನಪ್ಪಿರುವುದು ಖಚಿತವಾಗಿದೆ. ಘೋರ ಅಪಘಾತದ ಪರಿಣಾಮ ನೈಸ್ ರಸ್ತೆಯಲ್ಲಿ ಸುಮಾರು ಎಂಟು ಕಿ.ಮೀ.ನಷ್ಟು ಟ್ರಾಫಿಕ್ ಜಾಮ್ ಉಂಟಾಗಿತ್ತು.
Davanagere Road Accident: ಜಗಳೂರು ಬಳಿ ಭೀಕರ ಅಪಘಾತ: 7 ಮಂದಿ ಸಾವು
ತಲೆ ಮೇಲೆ ಟಿಪ್ಪರ್ ಚಕ್ರ ಉರುಳಿ ಬಿಇ ವಿದ್ಯಾರ್ಥಿನಿ ಸ್ಥಳದಲ್ಲೇ ಸಾವು: ಟಿಪ್ಪರ್ ಡಿಕ್ಕಿಯಾಗಿ ದ್ವಿ ಚಕ್ರ ವಾಹನದ ಹಿಂದೆ ಕುಳಿತಿದ್ದ ವಿದ್ಯಾರ್ಥಿನಿ(Student) ತಲೆ ಮೇಲೆ ಚಕ್ರ ಹರಿದ ಪರಿಣಾಮ ಸ್ಥಳದಲ್ಲೇ ಮೃತಟ್ಟಿದ್ದಳು. ಬೆಂಗಳೂರು ಅಶೋಕನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಆರ್.ಎಸ್.ಪಾಳ್ಯ ನಿವಾಸಿ ಸಂಜನಾ ಪ್ರಿಯಾ (21) ಮೃತ ವಿದ್ಯಾರ್ಥಿನಿ. ದ್ವಿಚಕ್ರ ವಾಹನ ಚಾಲಕ ವಿನಯ್‌ಕುಮಾರ್(24) ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜನಾ ಪ್ರಿಯಾ ನಗರದ ಖಾಸಗಿ ಎಂಜಿನಿಯರ್ ಕಾಲೇಜಿನಲ್ಲಿ ಅಂತಿಮ ಬಿಇ ವ್ಯಾಸಂಗ ಮಾಡುತ್ತಿದ್ದರು. ಸೋದರ ಸಂಬಂಧಿ ವಿನಯ್‌ಕುಮಾರ್ ಜತೆಗೆ ದ್ವಿಚಕ್ರ ವಾಹನದಲ್ಲಿ ಜಯ ನಗರದ ಸಂಬಂಧಿಕರ ಮನೆಗೆ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿತ್ತು.