
ವರದಿ: ಕಿರಣ್ಎಲ್ ತೊಡರನಾಳ್, ಏಷ್ಯಾನೆಟ್ ಸುವರ್ಣ ನ್ಯೂಸ್, ಚಿತ್ರದುರ್ಗ
ಚಿತ್ರದುರ್ಗ (ಅ.14): ಈಗಾಗಲೇ ಪೋಕ್ಸೊ ಪ್ರಕರಣದಲ್ಲಿ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆ ಬೆನ್ನಲ್ಲೇ ಶ್ರೀಗಳ ವಿರುದ್ಧ ಮತ್ತೊಂದು ಫೋಕ್ಸೊ ಪ್ರಕರಣ ದಾಖಲಾಗಿದೆ. ಆ ಮೂಲಕ ಶ್ರೀಗಳ ಮೇಲಿನ ಆರೋಪಗಳ ಸರಣಿ ಮುಂದುವರೆದಿದೆ. ಈ ಕುರಿತು ಒಂದು ವರದಿ ಇಲ್ಲಿದೆ. ಚಿತ್ರದುರ್ಗ ಮುರುಘಾಮಠದ ಪೀಠಾಧಿಪತಿ ಡಾ.ಶಿವಮೂರ್ತಿ ಮುರುಘಾ ಶರಣರು ಪೋಕ್ಸೊ ಪ್ರಕರಣದಲ್ಲಿ ಈಗಾಗಲೇ ಜೈಲಲ್ಲಿರುವುದು ಹಳೇಯ ಸಂಗತಿಯಾಗಿದೆ.
ಇದೀಗ ಮತ್ತೆ ಮುರುಘಾ ಶರಣರ ವಿರುದ್ಧ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಮಠದ ನೌಕರ ಮಹಿಳೆಯಿಂದಲೇ ಕೇಳಿ ಬಂದಿದೆ. ಮೈಸೂರಿನ CWC ಮುಂದೆ ಹಾಜರಾಗಿ ಸಂತ್ರಸ್ತ ಬಾಲಕಿ ಹೇಳಿಕೆಯನ್ನು ದಾಖಲಿಸಿದ್ದಳು. ಆ ಬಗ್ಗೆ ನಿನ್ನೆ (ಗುರುವಾರ) ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಇದೀಗ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದೆ. ಮೊದಲ ಪ್ರಕರಣದಲ್ಲಿ ಐವರ ಮೇಲೆ ಎಫ್ಐಆರ್ ದಾಖಲಾಗಿದ್ದು ಸೇರಿ ಇದೀಗ ಮತ್ತೆ ಇಬ್ಬರ ಮೇಲೆ ದೂರು ದಾಖಲಾಗಿದೆ.
Murugha Mutt: ಮುರುಘಾ ಮಠದಲ್ಲಿ ಹೆಣ್ಣು ಮಗು ಪತ್ತೆ!
ಮುರುಘಾ ಶರಣರ ಸಹಾಯಕ ಮಹಾಲಿಂಗ ಹಾಗೂ ಮಠದ ಅಡುಗೆ ಸಹಾಯಕ ಕರಿಬಸಪ್ಪ ಅವರ ಮೇಲೆ ದೂರು ದಾಖಲಾಗಿದೆ. ಆ ಮೂಲಕ ಪ್ರಕರಣದಲ್ಲಿ ಆರೋಪಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ. ಮಠದಲ್ಲಿ ಅಡುಗೆ ಸಹಾಯಕಿಯಾಗಿದ್ದ ಮಹಿಳೆಯಿಂದ ಮೈಸೂರಿನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ವಸತಿ ಶಾಲೆಯಲ್ಲಿದ್ದ ತನ್ನ ಇಬ್ಬರು ಮಕ್ಕಳಾದ 12 ಮತ್ತು 14 ವರ್ಷದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ ಎಂದು ಓರ್ವ ಮಗಳನ್ನು ಕರೆದುಕೊಂಡು ಹೋಗಿ ಮಹಿಳೆ ದೂರು ನೀಡಿದ್ದಳು.
Murugha Mutt: ಪೀಠಾಧಿಪತಿ ಸ್ಥಾನದಿಂದ ಮುರುಘಾಶ್ರೀ ವಜಾಗೊಳಿಸಿ, ಸರ್ಕಾರಕ್ಕೆ ಮನವಿ
ವಸತಿ ನಿಲಯದಲ್ಲಿದ್ದ ಇತರರ ಮೇಲೆಯೂ ದೌರ್ಜನ್ಯ ನಡೆದಿದೆ ಎಂದು ಮಠದಲ್ಲಿ ಅಡುಗೆ ಸಹಾಯಕಿಯಾಗಿದ್ದ ಮಹಿಳೆ ದೂರು ನೀಡಿದ್ದಾಳೆ. ಇದೇ ಪ್ರಕರಣ ಇಂದು ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ವರ್ಗಾವಣೆಯಾಗಿದೆ. ಇನ್ನು ಬೆಳಿಗ್ಗೆಯಿಂದಲೇ ಮುಂಜಾಗ್ರತಾ ಕ್ರಮವಾಗಿ ಮುರುಘಾಮಠದಲ್ಲಿ ಗ್ರಾಮಾಂತರ ಠಾಣೆ ಪೊಲೀಸರು ಪೊಲೀಸ್ ಬಂದೋಬಸ್ತ್ ಒದಗಿಸಿದ್ದರು. ಇನ್ನು ಮೊದಲಿನ ಪ್ರಕರಣದಲ್ಲಿ ಮುರುಘಾಶ್ರೀ ಅಕ್ಟೋಬರ್ 21ರವರೆಗೆ ನ್ಯಾಯಾಂಗ ಬಂಧನದಲ್ಲಿದ್ದರು. ಇದೀಗ ನಿನ್ನೆ ದಾಖಲಾದ ಪ್ರಕರಣದಿಂದ ಮುರುಘಾಶ್ರೀ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ