ದಿಲ್ಲಿ ಹೋರಾಟಕ್ಕೆ ರಾಜ್ಯದಿಂದ 4000 ರೈತರು

Kannadaprabha News   | Asianet News
Published : Feb 03, 2021, 07:08 AM IST
ದಿಲ್ಲಿ ಹೋರಾಟಕ್ಕೆ ರಾಜ್ಯದಿಂದ 4000 ರೈತರು

ಸಾರಾಂಶ

ದಿಲ್ಲಿಯಲ್ಲಿ ನಡೆಯುವ ರೈತ ಹೋರಾಟಕ್ಕೆ ರಾಜ್ಯದಿಂದ 4 ಸಾವಿರಕ್ಕೂ ಅಧಿಕ ರೈತರು ಪಾಲ್ಗೊಳ್ಳಲಿದ್ದಾರೆ ಎಂದು ರೈತ ಮುಖಂಡ ಕೋಡಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ.

ಬೆಂಗಳೂರು (ಫೆ.03):  ಕೃಷಿ ಕಾಯ್ದೆಗಳ ವಿರುದ್ಧ ದೆಹಲಿಯ ಗಡಿಗಳಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಯಲ್ಲಿ ರಾಜ್ಯದ ಸಾವಿರಾರು ರೈತರು ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ದೆಹಲಿಯ ಮೂರು ಗಡಿಗಳಲ್ಲಿ ಫೆ.5 ರಿಂದ 7ರವರೆಗೆ ರೈತರ ಹೋರಾಟ ಮತ್ತೆ ತೀವ್ರಗೊಳ್ಳಲಿದೆ. ಪ್ರತಿಭಟನಾ ನಿರತ ರೈತರನ್ನು ಬೆಂಬಲಿಸಿ ರಾಜ್ಯದ ಸುಮಾರು ನಾಲ್ಕು ಸಾವಿರ ರೈತರು ದೆಹಲಿಗೆ ಮಂಗಳವಾರದಿಂದಲೇ ಪ್ರಯಾಣ ಬೆಳೆಸಿದ್ದಾರೆ. ಫೆ.7ರವರೆಗೂ ಹಂತ ಹಂತವಾಗಿ ರೈತರು ರಾಷ್ಟ್ರ ರಾಜಧಾನಿ ತಲುಪಲಿದ್ದಾರೆ. ಬುಧವಾರ ತಾವು ದೆಹಲಿಗೆ ತೆರಳುವುದಾಗಿ ಹೇಳಿದರು.

ಫೆ.6ಕ್ಕೆ ಭಾರತ್ ಬಂದ್? ಏನಿದು ರೈತರು ಘೋಷಿಸಿದ ಚಕ್ಕಾ ಜಾಮ್ ಪ್ರತಿಭಟನೆ? .

ಗಣರಾಜ್ಯೋತ್ಸವದಂದು ದೆಹಲಿಯಲ್ಲಿ ನಡೆದ ಟ್ರ್ಯಾಕ್ಟರ್‌ ಪರೇಡ್‌ ವೇಳೆ ರೈತ ಹೋರಾಟಕ್ಕೆ ಕೆಟ್ಟಹೆಸರು ತರಲು ಉದ್ದೇಶಪೂರ್ವಕವಾಗಿ ಪುಂಡರು ಗಲಾಟೆ ನಡೆಸಿದರು. ರೈತರನ್ನು ಚದುರಿಸಲು ಹಮ್ಮಿಕೊಂಡ ಪೂರ್ವನಿಯೋಜಿತ ಕೃತ್ಯ ಇದಾಗಿದೆ. ಘಟನೆ ಕುರಿತು ಸೂಕ್ತ ತನಿಖೆ ನಡೆಸಬೇಕು. ರೈತರಿಗೆ ಕಳಂಕ ತಂದ ದುಷ್ಕರ್ಮಿಗಳಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಹೊಳೆನರಸೀಪುರದ ಲಕ್ಷ್ಮಿನರಸಿಂಹ ಸ್ವಾಮಿ ರಥೋತ್ಸವ: ರಥದ ಅಲಂಕಾರದಲ್ಲಿ ರಾಜಕೀಯ:ಶ್ರೇಯಸ್ ಪಟೇಲ್ ವಿರುದ್ಧ JDS ಕಾರ್ಯಕರ್ತರ ಆಕ್ರೋಶ
ಇರಾನ್ ದಾಳಿಯ ಸಾವಿನ ದವಡೆಯಿಂದ ಪಾರಾಗಿ ಬೆಂಗಳೂರಿಗೆ ಬಂದಿಳಿದ 230 ಕನ್ನಡಿಗರು; ಬಾಂಬ್ ಬೀಳುವ ಅನುಭವ ಬಿಚ್ಚಿಟ್ಟರು!