ಗುಡ್‌ ನ್ಯೂಸ್: ಜ.18ರಂದು ರಾಜ್ಯದಲ್ಲಿ ಅತೀ ಕಡಿಮೆ ಕೊರೋನಾ ಕೇಸ್ ಪತ್ತೆ

By Suvarna News  |  First Published Jan 18, 2021, 10:20 PM IST

ಕರ್ನಾಟಕದಲ್ಲಿ ಅತೀ ಕಡಿಮೆ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಸೋಂಕಿತರಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ.


ಬೆಂಗಳೂರು, (ಜ.18): ರಾಜ್ಯದಲ್ಲಿ ಇಂದು (ಸೋಮವಾರ) ಅತೀ ಕಡಿಮೆ ಕೊರೋನಾ ಪ್ರಕರಣ ಪತ್ತೆಯಾಗಿದ್ದು, 435 ಪಾಸಿಟಿವ್ ಕೇಸ್ ಪತ್ತೆಯಾಗಿದೆ.

ಕಳೆದ 24 ಗಂಟೆಯಲ್ಲಿ ಕಿಲ್ಲರ್ ಕೊರೋನಾ ಸೋಂಕಿಗೆ 9 ಮಂದಿ ಸಾವನ್ನಪ್ಪಿದ್ದು, ಈ ಮೂಲಕ ರಾಜ್ಯದಲ್ಲಿ ಸೋಂಕಿನಿಂದ ಬಲಿಯಾದವರ ಸಂಖ್ಯೆ 12,275 ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Tap to resize

Latest Videos

'ಕೊರೊನಾ ಲಸಿಕೆ ಪಡೆದುಕೊಂಡ್ರೆ ಸಲಿಂಗಕಾಮಿಗಳಾಗುತ್ತೀರಿ'

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 973 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈ ಮೂಲಕ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,12,205 ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದಲ್ಲಿ 8.033 ಸಕ್ರಿಯ ಪ್ರಕರಣಗಳಿದ್ದು, ಈ ಪೈಕಿ 177 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ 193 ಮಂದಿಗೆ ಸೋಂಕು ತಗುಲಿದ್ದು,  6 ಮಂದಿ ಬಲಿಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 3,95,152 ಕ್ಕೆ ಏರಿಕೆಯಾಗಿದೆ.

click me!