ಗ್ರಾಮ ಪಂಚಾಯತ್ ಎಲೆಕ್ಷನ್‌: ಮೊದಲ ಹಂತಕ್ಕೆ 4,377 ಮಂದಿ ಅವಿರೋಧ ಆಯ್ಕೆ

Kannadaprabha News   | Asianet News
Published : Dec 17, 2020, 12:06 PM IST
ಗ್ರಾಮ ಪಂಚಾಯತ್ ಎಲೆಕ್ಷನ್‌: ಮೊದಲ ಹಂತಕ್ಕೆ 4,377 ಮಂದಿ ಅವಿರೋಧ ಆಯ್ಕೆ

ಸಾರಾಂಶ

ಮೊದಲ ಹಂತದ ಗ್ರಾಮ ಪಂಚಾಯತ್ ಚುನಾವಣೆಗೂ ಮುನ್ನ 4,377 ಮಂದಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಡಿ.17); ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮೊದಲ ಹಂತದಲ್ಲಿ 1,17,383 ಅಭ್ಯರ್ಥಿಗಳು ಅಂತಿಮವಾಗಿ ಚುನಾವಣಾ ಕಣದಲ್ಲಿದ್ದು, 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಡಿ.22ರಂದು ಮೊದಲ ಹಂತದ ಚುನಾವಣೆ ನಡೆಯಲಿದೆ. 3,019 ಗ್ರಾಮ ಪಂಚಾಯಿತಿಗಳಲ್ಲಿ 48,048 ಒಟ್ಟು ಸ್ಥಾನಗಳಿದ್ದು, ಈ ಪೈಕಿ 43,238 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ 4,377 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ರಾಜ್ಯ ಚುನಾವಣಾ ಆಯೋಗವು ತಿಳಿಸಿದೆ.

ಆಯೋಗವು 1,64,550 ನಾಮಪತ್ರಗಳನ್ನು ಸ್ವೀಕರಿಸಿದ್ದು, 1,57,735 ನಾಮಪತ್ರಗಳು ಕ್ರಮಬದ್ಧವಾಗಿದ್ದವು. 40,352 ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್‌ ಪಡೆದುಕೊಂಡಿದ್ದರು. ಚುನಾವಣೆ ನಡೆಯುವ ಗ್ರಾಮಪಂಚಾಯಿತಿಯಲ್ಲಿ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಕೈಗೊಂಡಿದೆ ಎಂದು ಹೇಳಿದೆ.

ಶಬರಿಮಲೆಯಲ್ಲಿ ಕೇಸರಿ ಕಮಾಲ್‌, ಎನ್‌ಡಿಎಗೆ ಬಹುಮತ!

ಗ್ರಾಮ ಪಂಚಾಯಿತಿ ಚುನಾವಣೆಗಳು ಪಕ್ಷ ರಹಿತ ಚುನಾವಣೆಯಾಗಿರುತ್ತವೆ. ರಾಜಕೀಯ ಪಕ್ಷಗಳು ಈ ಚುನಾವಣೆಯಲ್ಲಿ ಪ್ರಚಾರ ಕಾರ್ಯದಲ್ಲಿ ಭಾಗಿಯಾಗುವುದು, ಸಭೆ, ಸಮಾರಂಭಗಳನ್ನು ನಡೆಸುವ, ರಾಜಕೀಯ ಮುಖಂಡರ ಭಾವಚಿತ್ರಗಳನ್ನು ಕರಪತ್ರದಲ್ಲಿ ಮುದ್ರಿಸಿ ಪಕ್ಷಗಳ ಬಾವುಟಗಳ ಮತ್ತು ಚಿಹ್ನೆಯನ್ನು ಬಳಸುವಂತಿಲ್ಲ. ಗ್ರಾಮ ಪಂಚಾಯಿತಿಗಳ ಚುನಾವಣೆಯನ್ನು ಪಕ್ಷದ ಆಧಾರ ರಹಿತವಾಗಿ ನಡೆಸುವುದರಿಂದ ಅಭ್ಯರ್ಥಿಗಳಿಗೆ ಮುಕ್ತ ಚಿಹ್ನೆಗಳನ್ನು ಮಾತ್ರ ಹಂಚಿಕೆ ಮಾಡಲಾಗುತ್ತದೆ. ರಾಜಕೀಯ ಪಕ್ಷದ ಮುಖಂಡರು ಚುನಾವಣಾ ಪ್ರಚಾರದಲ್ಲಿ ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಭಾಗವಹಿಸಿದಲ್ಲಿ ಅಥವಾ ಸಭೆಗಳನ್ನು ಆಯೋಜಿಸಿದರೆ ಮತದಾರರ ಮೇಲೆ ಪ್ರಭಾವ ಬೀರಿದಂತಾಗುತ್ತದೆ. ಇದು ನೀತಿ ಸಂಹಿತೆ ಉಲ್ಲಂಘನೆಯಾಗುತ್ತದೆ. ಹೀಗಾಗಿ ರಾಜಕೀಯ ಪಕ್ಷಗಳು ಪಕ್ಷರಹಿತವಾಗಿ, ಮುಕ್ತ ಮತ್ತು ನ್ಯಾಯಯುತವಾಗಿ ಚುನಾವಣೆ ನಡೆಸಲು ಸಹಕಾರ ನೀಡಬೇಕು ಎಂದು ತಿಳಿಸಿದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: BBK 12 - ಬಿಗ್‌ಬಾಸ್ ಕೊಟ್ಟ ಚೆಕ್‌ಮೆಟ್‌ಗೆ ಮಕ್ಕರ್ ಆದ ಗಿಲ್ಲಿ; ಚಮಕ್ ಕೊಟ್ಟ ರಕ್ಷಿತಾ, ಇತ್ತ ಕಾವ್ಯಾಗೆ ತಳಮಳ
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ