450 ಮಂದಿ ವಜಾ: ಅಟಲ್‌ ಕೇಂದ್ರದ ಸಿಬ್ಬಂದಿ ಪ್ರತಿಭಟನೆ

Published : Aug 08, 2023, 07:33 AM IST
450 ಮಂದಿ ವಜಾ: ಅಟಲ್‌ ಕೇಂದ್ರದ ಸಿಬ್ಬಂದಿ ಪ್ರತಿಭಟನೆ

ಸಾರಾಂಶ

ಹೊರ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಅಟಲ್‌ ಜೀ ಜನಸ್ನೇಹಿ ಕೇಂದ್ರದ 450 ಡಾಟಾ ಎಂಟ್ರಿ ಆಪರೇಟರ್‌ಗಳನ್ನು ವಜಾಗೊಳಿಸಿದ್ದು, ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಉದ್ಯೋಗ ವಂಚಿತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು (ಆ.8) :  ಹೊರ ಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ ಅಟಲ್‌ ಜೀ ಜನಸ್ನೇಹಿ ಕೇಂದ್ರ(Atal Ji Janasnehi Kendra)ದ 450 ಡಾಟಾ ಎಂಟ್ರಿ ಆಪರೇಟರ್‌(Data Entry Operator)ಗಳನ್ನು ವಜಾಗೊಳಿಸಿದ್ದು, ಪುನಃ ಕೆಲಸಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಉದ್ಯೋಗ ವಂಚಿತರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ನಾಡಕಚೇರಿಗಳಲ್ಲಿ ಕಾರ್ಯ ನಿರ್ವಹಿಸಲು 1916 ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಹೊರಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗಿತ್ತು. ಸೇವೆಗಳನ್ನು ಒದಗಿಸಲು ಸಾರ್ವಜನಿಕರಿಂದ ಸಂಗ್ರಹವಾಗುತ್ತಿದ್ದ ಮೊತ್ತ ಅಧಿಕವಾಗಿದ್ದರಿಂದ ನಮಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತಿತ್ತು. ಯಾವುದೇ ತೊಂದರೆ ಇರಲಿಲ್ಲ. ಆದರೆ ಇತ್ತೀಚೆಗೆ ಜೂನ್‌ ಮತ್ತು ಜುಲೈ ತಿಂಗಳ ವೇತನ ಪಾವತಿಸದೆ, ನೋಟಿಸ್‌ ನೀಡದೆ ಸೇವೆಯಿಂದ ವಜಾಗೊಳಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಸಮೀಕ್ಷೆಯಿಂದ ಅಂಗವಿಕರನ್ನು ಕೈಬಿಟ್ಟ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್‌

ಕೆಲಸವಿಲ್ಲದೇ ಜೀವನ ನಿರ್ವಹಣೆಗೆ ತುಂಬಾ ತೊಂದರೆಯಾಗಿದೆ. ಕಳೆದ ನಾಲ್ಕು ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದರೂ ನಮ್ಮ ಅಳಲನ್ನು ಯಾರೂ ಕೇಳುತ್ತಿಲ್ಲ. ತಕ್ಷಣ ನಮ್ಮ ಸೇವೆಯನ್ನು ಮುಂದುವರೆಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರೆಸುವುದಾಗಿ ಪ್ರತಿಭಟನಾಕಾರರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಇನ್ಮುಂದೆ ನೂರು ಗ್ಯಾರಂಟಿ ಘೋಷಣೆ ಮಾಡಿದರೂ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಛಲವಾದಿ ನಾರಾಯಣಸ್ವಾಮಿ
Breaking ಮಂಡ್ಯ ಬಸ್ ಅಪಘಾತದಲ್ಲಿ 23 ಪ್ರಯಾಣಿಕರಿಗೆ ಗಾಯ, ಇಬ್ಬರು ಗಂಭೀರ