Corona Crisis: ಕರ್ನಾಟಕದಲ್ಲಿ 476 ಜನರಿಗೆ ಕೋವಿಡ್‌ ಸೋಂಕು: ಒಂದು ಸಾವು

By Govindaraj S  |  First Published Sep 18, 2022, 3:15 AM IST

ರಾಜ್ಯದಲ್ಲಿ ಶನಿವಾರ 476 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಶಿವಮೊಗ್ಗದಲ್ಲಿ 85 ವಯಸ್ಸಿನ ವ್ಯಕ್ತಿ ಮೃತಪಟ್ಟಿದ್ದಾರೆ. 358 ಮಂದಿ ಚೇತರಿಸಿಕೊಂಡಿದ್ದಾರೆ. 23,400 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಶೇ.2.03 ಪಾಸಿಟಿವಿಟಿ ದರ ದಾಖಲಾಗಿದೆ.


ಬೆಂಗಳೂರು (ಸೆ.18): ರಾಜ್ಯದಲ್ಲಿ ಶನಿವಾರ 476 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಶಿವಮೊಗ್ಗದಲ್ಲಿ 85 ವಯಸ್ಸಿನ ವ್ಯಕ್ತಿ ಮೃತಪಟ್ಟಿದ್ದಾರೆ. 358 ಮಂದಿ ಚೇತರಿಸಿಕೊಂಡಿದ್ದಾರೆ. 23,400 ಮಂದಿ ಕೋವಿಡ್‌ ಪರೀಕ್ಷೆಗೆ ಒಳಗಾಗಿದ್ದು ಶೇ.2.03 ಪಾಸಿಟಿವಿಟಿ ದರ ದಾಖಲಾಗಿದೆ. ರಾಜ್ಯದಲ್ಲಿ ಈವರೆಗೆ 40.61 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು 40.17 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 40,232 ಮಂದಿ ಮರಣವನ್ನಪ್ಪಿದ್ದಾರೆ. 3,735 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಶನಿವಾರ 36,077 ಮಂದಿ ಕೋವಿಡ್‌ ಲಸಿಕೆ ಪಡೆದಿದ್ದಾರೆ. 

33,490 ಮಂದಿ ಮುನ್ನೆಚ್ಚರಿಕೆ ಡೋಸ್‌, 2,100 ಮಂದಿ ಎರಡನೇ ಡೋಸ್‌ ಮತ್ತು 487 ಮಂದಿ ಮೊದಲ ಡೋಸ್‌ ಲಸಿಕೆ ಸ್ವೀಕರಿಸಿದ್ದಾರೆ. ಈವರೆಗೆ ಒಟ್ಟು 11.94 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ 215 ಮಂದಿ, ರಾಮನಗರ 97, ಕೊಡಗು 24, ಮೈಸೂರು 18, ಧಾರವಾಡ 13, ಶಿವಮೊಗ್ಗ 12, ತುಮಕೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ತಲಾ 11 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಬಾಗಲಕೋಟೆ, ಚಾಮರಾಜನಗರ, ಗದಗ, ಹಾವೇರಿ ಮತ್ತು ಯಾದಗಿರಿಯಲ್ಲಿ ಹೊಸ ಪ್ರಕರಣ ಪತ್ತೆಯಾಗಿಲ್ಲ.

Tap to resize

Latest Videos

undefined

Covid-19: ಕೋವಿಶೀಲ್ಡ್ ಲಸಿಕೆಯಿಂದ ಪುರುಷತ್ವಕ್ಕೆ ಹಾನಿ ಇದೆಯಾ?

ಬೆಂಗಳೂರಿನಲ್ಲಿ 215 ಮಂದಿಯಲ್ಲಿ ಕೊರೋನಾ ಪತ್ತೆ: ನಗರದಲ್ಲಿ ಶನಿವಾರ 215 ಜನರಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, ಪಾಸಿಟಿವಿಟಿ ದರ ಶೇ.1.85 ದಾಖಲಾಗಿದೆ. 173 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ 2,533 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 51 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, 24 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು 4197 ಮಂದಿ ಕೋವಿಡ್‌ ವಿರುದ್ಧ ಲಸಿಕೆ ಪಡೆದುಕೊಂಡಿದ್ದಾರೆ. 

128 ಮಂದಿ ಮೊದಲ ಡೋಸ್‌, 415 ಮಂದಿ ಎರಡನೇ ಡೋಸ್‌ ಮತ್ತು 3654 ಮಂದಿ ಮೂರನೇ ಡೋಸ್‌ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 12,545 ಮಂದಿಗೆ ಕೊರೋನಾ ಸೋಂಕು ಪರೀಕ್ಷೆ ನಡೆಸಲಾಗಿದ್ದು, ಈ ಪೈಕಿ 9715 ಆರ್‌ಟಿಪಿಸಿಆರ್‌ ಹಾಗೂ 2830 ಮಂದಿಗೆ ರಾರ‍ಯಪಿಡ್‌ ಆ್ಯಂಟಿಜನ್‌ ಪರೀಕ್ಷೆ ನಡೆಸಲಾಗಿದೆ. ಶನಿವಾರ ಮಹದೇವಪುರ ವಲಯದಲ್ಲಿ ಎರಡು ಪ್ರದೇಶಗಳು ಕಂಟೈನ್ಮೆಂಟ್‌ನಿಂದ ಮುಕ್ತವಾಗಿದ್ದು, ನಗರದಲ್ಲಿ 3 ಸಕ್ರಿಯ ಕಂಟೈನ್ಮೆಂಟ್‌ ಪ್ರದೇಶಗಳಿವೆ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.

Nasal vaccine: ಕೋವಿಡ್‌ಗೆ ಇನ್ನು ಮೂಗಿನ ಮೂಲಕವೂ ಲಸಿಕೆ ವಿತರಣೆ!

ಉಡುಪಿಯಲ್ಲಿ 7 ಮಂದಿಗೆ ಕೋವಿಡ್‌: ಜಿಲ್ಲೆಯಲ್ಲಿ ಶನಿವಾರ 461 ಮಂದಿಯ ಕೋವಿಡ್‌ ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಉಡುಪಿ ತಾಲೂಕಿನ 5, ಕುಂದಾಪುರ ಮತ್ತು ಕಾರ್ಕಳ ತಾಲೂಕಿನ ತಲಾ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಈ ದಿನ 5 ಮಂದಿ ಸೋಂಕಿತರು ಗುಣಮುಖರಾಗಿದ್ದು, ಪ್ರಸ್ತುತ ಜಿಲ್ಲೆಯಲ್ಲಿ 39 ಮಂದಿ ಸಕ್ರಿಯ ಸೋಂಕಿತರಿದ್ದಾರೆ. ಇದುವರೆಗೆ ಜಿಲ್ಲೆಯಲ್ಲಿ ಒಟ್ಟು 541 ಮಂದಿ ಕೋವಿಡ್‌ ನಿಂದ ಮೃತಪಟ್ಟಿದ್ದಾರೆ.

click me!