
ಕಾಬೂಲ್ (ಅ.1): ಅಫ್ಘಾನಿಸ್ತಾನದಲ್ಲಿ ಇಂದು ಗುರುವಾರ ಬೆಳ್ಳಂಬೆಳಗ್ಗೆ 5.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (NCS) ಮಾಹಿತಿ ನೀಡಿದೆ.
NCS ಪ್ರಕಾರ ಭಾರತೀಯ ಕಾಲಮಾನ ಬೆಳಗ್ಗೆ 6:59:20ಕ್ಕೆ ಭೂಕಂಪ ಸಂಭವಿಸಿದ್ದು, ಭೂಮಿಯ 126 ಕಿ.ಮೀ ಆಳದಲ್ಲಿ ಕಂಪನ ದಾಖಲಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸಿರುವ ಬಗ್ಗೆ NCS ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.
ಭೂಕಂಪದ ಕೇಂದ್ರಬಿಂದು 35.981 ಉತ್ತರ ಅಕ್ಷಾಂಶ ಮತ್ತು 68.700 ಪೂರ್ವ ರೇಖಾಂಶದಲ್ಲಿದ್ದು, 126 ಕಿ.ಮೀ ಆಳದಲ್ಲಿ ಕಂಪನ ಸಂಭವಿಸಿದೆ ಎಂದು NCS ತಿಳಿಸಿದೆ.
ಭೂಕಂಪನದಿಂದ ಹಲವು ವಸತಿಗಳು ನೆಲಕ್ಕುರುಳಿವೆ ಎನ್ನಲಾಗಿದೆ. ಸದ್ಯ ಈ ಭೂಕಂಪದಿಂದಾಗಿ ಸಾವು-ನೋವಿನ ಪ್ರಮಾಣ ಎಷ್ಟು ಎಂಬುದು ತಿಳಿದುಬಂದಿಲ್ಲ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ