
ಬೆಂಗಳೂರು (ಮೇ.24): ಕೊರೋನಾ ಮಹಾಮಾರಿಯ ನಡುವೆ ಬ್ಲ್ಯಾಕ್ ಫಂಗಸ್ ಸೋಂಕು ಈಗ ರಾಜ್ಯದ ಜನರನ್ನು ಹೆದರಿಸಲು ಆರಂಭಿಸಿದೆ. ಬ್ಲ್ಯಾಕ್ ಫಂಗಸ್ ಭಾನುವಾರ ರಾಜ್ಯದಲ್ಲಿ ಐವರು ಮರಣ ಹೊಂದಿದ್ದಾರೆ.ರಾಯಚೂರು ಜಿಲ್ಲೆಯಲ್ಲಿ ಮೂರು ಸಾವನ್ನಪ್ಪಿದ್ದಾರೆ. ಆದರೆ ಜಿಲ್ಲಾಡಳಿತ ಒಬ್ಬರು ಮಾತ್ರ ಮೃತಪಟ್ಟಿದ್ದಾರೆ ಎಂದು ದೃಢಪಡಿಸಿದೆ. ಇನ್ನು ತುಮಕೂರು ಜಿಲ್ಲೆಯಲ್ಲಿ ಇಬ್ಬರು ಜೀವ ತೆತ್ತಿದ್ದಾರೆ.
ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ವೃದ್ಧ ರಿಮ್ಸ್ ಬೋಧಕ ಆಸ್ಪತ್ರೆಯಲ್ಲಿ ಶನಿವಾರ ರಾತ್ರಿ ಸಾವನ್ನಪ್ಪಿದ್ದು, ಉಳಿದಂತೆ ಮಾನ್ವಿ ತಾಲೂಕಿನ ಕುರ್ಡಿ ಗ್ರಾಮದ ಯುವಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಇನ್ನು ಜಿಲ್ಲೆ ಸಿರವಾರ ತಾಲೂಕಿನ ಯುವಕ ಕಲಬುರಗಿ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ.
ವೈಟ್ ಫಂಗಸ್ ಸೋಂಕು: ರಾಜ್ಯದಲ್ಲಿ ಮೊದಲ ಬಲಿ? ..
ಇನ್ನು ತುಮಕೂರು ಜಿಲ್ಲೆಯ ಕುಣಿಗಲ್‌ನ ಗ್ರಾಮ ಪಂಚಾಯಿತಿ ಸದಸ್ಯ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ 90 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ತುಮಕೂರು ಜಿಲ್ಲೆಯಲ್ಲಿ 18, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 6, ಬೆಳಗಾವಿಯಲ್ಲಿ 9, ಧಾರವಾಡ ಜಿಲ್ಲೆಯಲ್ಲಿ 16, ಬಳ್ಳಾರಿ ಜಿಲ್ಲೆಯಲ್ಲಿ 10, ಯಾದಗಿರಿ-ಕೊಪ್ಪಳ ಜಿಲ್ಲೆಯಲ್ಲಿ ತಲಾ ಇಬ್ಬರು, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ ಓರ್ವನಲ್ಲಿ ರೋಗ ಕಂಡು ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ