ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ

Published : Jun 03, 2023, 04:20 AM IST
ಬಸ್ಸಲ್ಲಿ ಪುರುಷರಿಗೆ ಮೀಸಲಿಟ್ಟ ದೇಶದ ಮೊದಲ ರಾಜ್ಯ ಕರ್ನಾಟಕ: ಕೆಎಸ್ಸಾರ್ಟಿಸಿ ಬಸ್‌ಗಳ 50% ಆಸನ ಗಂಡಸರಿಗೆ ಸೀಮಿತ

ಸಾರಾಂಶ

ಬಸ್‌ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ಅಳವಡಿಸುವುದು ಸಹಜ. ಆದರೆ, ಇನ್ನು ಮುಂದೆ ರಾಜ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲಾಗಲಿವೆ. 

ಬೆಂಗಳೂರು (ಜೂ.03): ಬಸ್‌ಗಳಲ್ಲಿ ಮಹಿಳೆಯರು, ಹಿರಿಯ ನಾಗರಿಕರಿಗೆ ಆಸನ ಮೀಸಲಿಟ್ಟಿರುವ ಕುರಿತು ಫಲಕ ಅಳವಡಿಸುವುದು ಸಹಜ. ಆದರೆ, ಇನ್ನು ಮುಂದೆ ರಾಜ್ಯ ಕರ್ನಾಟಕ ಸಾರಿಗೆ ಬಸ್‌ಗಳಲ್ಲಿ ಶೇ.50ರಷ್ಟು ಆಸನಗಳು ಪುರುಷರಿಗೆ ಮೀಸಲಾಗಲಿವೆ. ಈ ರೀತಿ ಪುರುಷರಿಗೆ ಶೇ.50ರಷ್ಟು ಆಸನ ಮೀಸಲು ವ್ಯವಸ್ಥೆ ತಂದ ದೇಶದ ಮೊದಲ ರಾಜ್ಯ ಎಂಬ ಘನತೆಗೆ ಕರ್ನಾಟಕ ಪಾತ್ರವಾಗಲಿದೆ!

ಹೌದು, ಇನ್ನು ಮುಂದೆ ರಾಜ್ಯ ಸಾರಿಗೆ ಬಸ್‌ಗಳಲ್ಲಿ ಪುರುಷರಿಗೆ ಆಸನ ಮೀಸಲು ಎಂಬ ಫಲಕ ಬರಲಿದೆ. ಜೂ.11ರಿಂದ ‘ಶಕ್ತಿ’ ಯೋಜನೆಯಡಿ ಕೆಎಸ್‌ಆರ್‌ಟಿಸಿ, ನಗರ ಸಾರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಸೌಲಭ್ಯ ಜಾರಿಯಾಗಲಿದೆ. ಹೀಗಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಶೇ.50ರಷ್ಟು ಸೀಟುಗಳನ್ನು ಪುರುಷರಿಗೆ ಮೀಸಲಿಡಲು ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಿದೆ.

ಪುರುಷರಿಗೆ ಯಾಕೆ ಮೀಸಲು?: ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ ಸೌಲಭ್ಯ ಲಭ್ಯವಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಬಸ್‌ ಪ್ರಯಾಣಕ್ಕೆ ಮುಂದಾಗುವ ಸಾಧ್ಯತೆ ಇದೆ. ಈ ಸಂದರ್ಭದಲ್ಲಿ ಟಿಕೆಟ್‌ ಪಡೆದು ಪ್ರಯಾಣ ಮಾಡುವ ಪುರುಷರಿಗೆ ಆಸನ ಕೊರತೆಯಾಗಬಹುದು. ಇದರಿಂದ ಸಾರಿಗೆ ಸಂಸ್ಥೆಗಳ ಆದಾಯಕ್ಕೆ ಮತ್ತಷ್ಟುಕತ್ತರಿ ಬೀಳಲಿದೆ. ಹೀಗಾಗಿ ಪುರುಷರಿಗೆ ಬಸ್‌ಗಳಲ್ಲಿ ಆಸನಗಳನ್ನು ಮೀಸಲಿಡಲಾಗುತ್ತಿದೆ. ಆದರೆ, ಬಿಎಂಟಿಸಿಯಲ್ಲಿ ಪುರುಷ ಸೀಟು ಮೀಸಲಾತಿ ಇಲ್ಲ.

ಕಾಂಗ್ರೆಸ್‌ ಉಚಿತ ಯೋಜನೆಗಳ ಆಶ್ವಾಸನೆ ನೀಡಿರುವ ಪರಿಣಾಮ ಬಿಜೆಪಿಗೆ ಸೋಲು: ಕೋಟ ಶ್ರೀನಿವಾಸ ಪೂಜಾರಿ

ಈವರೆಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಶೇ.28ರಷ್ಟು ಸೀಟುಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಬಸ್ಸುಗಳಲ್ಲಿನ 49 ಆಸನಗಳ ಪೈಕಿ 14 ಆಸನಗಳನ್ನು ಮಹಿಳೆಯರಿಗೆ ಮೀಸಲಿಡಲಾಗಿದೆ. ಅಂಗವಿಕಲರಿಗೆ ಮೂರು, ಹಿರಿಯ ನಾಗರಿಕರಿಗೆ 3, ಸ್ವಾತಂತ್ರ್ಯ ಹೋರಾಟಗಾರರಿಗೆ 1 ಆಸನ ಮೀಸಲಿಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

Karnataka News Live: ನಮ್ಮನ್ನೇಕೆ ವೈರಿಗಳಂತೆ ನೋಡುತ್ತೀರಿ? ನಾವು ಸಹೋದ್ಯೋಗಿಗಳು: ಡಿಸಿಎಂ ಡಿಕೆ ಶಿವಕುಮಾರ್
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ