ಪ್ರವಾಸೋದ್ಯಮ ಉತ್ತೇಜನಕ್ಕೆ 500 ಕೋಟಿ :ಸಚಿವ ಆನಂದ ಸಿಂಗ್‌

By Kannadaprabha NewsFirst Published Sep 28, 2021, 7:24 AM IST
Highlights
  •  2025ರ ವೇಳೆಗೆ ಕರ್ನಾಟಕವು ಪ್ರವಾಸೋದ್ಯಮ ಕ್ಷೇತ್ರದಲ್ಲಿ ಅತ್ಯುತ್ತಮ ಸ್ಥಾನ ಹೊಂದುವ ಗುರಿ
  • ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು ಸರ್ಕಾರವು 500 ಕೋಟಿ ರು. ಕಾಯ್ದಿರಿಸಿದೆ 

 ಬೆಂಗಳೂರು (ಸೆ.28):  2025ರ ವೇಳೆಗೆ ಕರ್ನಾಟಕವು ಪ್ರವಾಸೋದ್ಯಮ (Karnataka toirism) ಕ್ಷೇತ್ರದಲ್ಲಿ ಅತ್ಯುತ್ತಮ ಸ್ಥಾನ ಹೊಂದುವ ಗುರಿ ಸಾಧಿಸಲು ಕರ್ನಾಟಕ ಪ್ರವಾಸೋದ್ಯಮ ನೀತಿ 2020-26 ಅನ್ನು ರೂಪಿಸಲಾಗಿದ್ದು, ಪ್ರೋತ್ಸಾಹ ಧನ, ರಿಯಾಯಿತಿಗಳನ್ನು ನೀಡಲು ಸರ್ಕಾರವು 500 ಕೋಟಿ ರು. ಕಾಯ್ದಿರಿಸಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ (Anand Singh) ಹೇಳಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ನೀತಿಯು ಐದು ಸಾವಿರ ಕೋಟಿ ರು.ನಷ್ಟುಹೂಡಿಕೆ ಮತ್ತು ಒಂದು ಮಿಲಿಯನ್‌ ನೇರ ಮತ್ತು ಪರೋಕ್ಷ ಉದ್ಯೋಗಗಳನ್ನು ಸೃಷ್ಟಿಸುವ ನಿರೀಕ್ಷೆ ಇದೆ. 17 ಸಾವಿರಕ್ಕೂ ಹೆಚ್ಚು ಪ್ರವಾಸೋದ್ಯಮ ಯೋಜನೆಗಳು ಮತ್ತು ಸೇವೆಗಳು ನೀತಿಯ ಲಾಭವನ್ನು ಪಡೆಯಲಿವೆ. ಮೂಲಸೌಕರ್ಯ ಅಭಿವೃದ್ಧಿ, ಪ್ರವಾಸೋದ್ಯಮ ಉತ್ಪನ್ನ ಕೊಡುಗೆಗಳು, ಕೌಶಲ್ಯ ಅಭಿವೃದ್ಧಿ, ಪ್ರವಾಸೋದ್ಯಮ ಪ್ರಚಾರದ ಅಂಶಗಳ ಮೇಲೆ ನೀತಿಯನ್ನು ವಿನ್ಯಾಸಗೊಳಿಸಲಾಗಿದೆ. ಪ್ರವಾಸೋದ್ಯಮ ಯೋಜನೆಗಳ ಸ್ಥಾಪನೆ ಮತ್ತು ಕಾರ್ಯಾಚರಣೆಗೆ ಅನುಕೂಲಕರ ವಾತಾವರಣವನ್ನು ಕಲ್ಪಿಸಲು ಪ್ರವಾಸೋದ್ಯಮ ಹೂಡಿಕೆ ಸೌಲಭ್ಯದ ಕೋಶವನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಪ್ರವಾಸೋದ್ಯಮ ಎಕ್ಸ್‌ಪೋ:

ಮುಂದಿನ ವರ್ಷ ಫೆ.23ರಿಂದ 25ರ ವರೆಗೆ ಮೂರು ದಿನಗಳ ಕಾಲ ಅರಮನೆ ಮೈದಾನದಲ್ಲಿ ಪ್ರವಾಸೋದ್ಯಮ ಎಕ್ಸ್‌ಪೋ ನಡೆಸಲು ನಿರ್ಧರಿಸಲಾಗಿದೆ. ಇದಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಸಹ ಒಪ್ಪಿಗೆ ಸೂಚಿಸಿದ್ದಾರೆ ಎಂದು ತಿಳಿಸಿದರು.

ಹೊಸ ರೂಪದಲ್ಲಿ ಕಣ್ಮನ ಸೆಳೆಯುತ್ತಿದೆ ರಾಜಾಸೀಟ್, ವ್ಯೂ ಪಾಯಿಂಟ್‌ ಅಂತೂ ಸೂಪರ್..!

ಕೋವಿಡ್‌ (Covid) ಎರಡನೇ ಅಲೆಯಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೊಳಗಾಗಿರುವ ಹೊಟೇಲ್‌ (Hotel) ಉದ್ಯಮ, ಗೈಡ್‌ಗಳು, ಸಿನಿಮಾ ಕ್ಷೇತ್ರ ಸೇರಿದಂತೆ ಇತರರಿಗೆ ಸರ್ಕಾರವು ಅಗತ್ಯ ನೆರವು ನೀಡಲು ಸಿದ್ಧವಿದೆ. ಸಿನಿಮಾ ರಂಗದವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಏಕಗವಾಕ್ಷಿ ಪದ್ಧತಿಗೊಳಿಸಲು ಚಿಂತನೆ ನಡೆಸಲಾಗುತ್ತಿದೆ ಎಂದರು.

ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ, ಅರಣ್ಯ ವಸತಿ ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಸರ್ಕಾರದ ಕಾರ್ಯದರ್ಶಿ ಪಂಕಜ್‌ಕುಮಾರ್‌ ಪಾಂಡೆ ಇತರರು ಉಪಸ್ಥಿತರಿದ್ದರು.

ವಿಧಾನಸೌಧದಲ್ಲಿ ಸೋಮವಾರ ನಡೆದ ವಿಶ್ವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವ ಆನಂದ್‌ ಸಿಂಗ್‌ ಅವರು ಮಾರ್ಗಸೂಚಿ ಹಾಗೂ ವಿಶೇಷ ಅಂಚೆ ಕವರ್‌ ಬಿಡುಗಡೆ ಮಾಡಿದರು. ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಅಧ್ಯಕ್ಷ ಕಾಪು ಸಿದ್ದಲಿಂಗಸ್ವಾಮಿ, ಅರಣ್ಯ ವಸತಿ ವಿಹಾರ ಧಾಮಗಳ ಸಂಸ್ಥೆ ಅಧ್ಯಕ್ಷ ಅಪ್ಪಣ್ಣ, ಸರ್ಕಾರದ ಕಾರ್ಯದರ್ಶಿ ಪಂಕಜ್‌ಕುಮಾರ್‌ ಪಾಂಡೆ ಇತರರು ಉಪಸ್ಥಿತರಿದ್ದರು.

ಇದರಿಂದ ಕೆಲ ಸಮಸ್ಯೆಗಳು ಬಗೆಹರಿಯಲಿದ್ದು, ನಮಗೂ ಉದ್ಯಮ ಬೆಳೆಯಲು ಅವಕಾಶವಾಗಲಿದೆ. ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಹೊಟೇಲ್‌, ರೆಸಾರ್ಟ್‌ ಆಸ್ತಿ ತೆರಿಗೆ ಶೇ.50ರಷ್ಟುಕಡಿತ ಮತ್ತು ಹೊಟೇಲ್‌ ಪರವಾನಗಿ ಶುಲ್ಕವನ್ನು ಮನ್ನಾ ಮಾಡಲಾಗಿದೆ. ಏಪ್ರಿಲ್‌-ಜೂನ್‌ನಿಂದ ವಿದ್ಯುತ್‌ ಶುಲ್ಕವನ್ನು ಸಹ ಮನ್ನಾ ಮಾಡಲಾಗಿದೆ. ವ್ಯಾಪಾರ ಮತ್ತು ಸೌಲಭ್ಯಗಳನ್ನು ಉತ್ತೇಜಿಸಲು ಆನ್‌ಲೈನ್‌ ಮೂಲಕ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಪ್ರವಾಸೋದ್ಯಮದಲ್ಲಿ ಉತ್ತಮ ವಾತಾವರಣವನ್ನು ಕಲ್ಪಿಸಿ ಬಂಡವಾಳ ಆಕರ್ಷಿಸಲು ಹೂಡಿಕೆದಾರರ ಸಭೆ ಕರೆಯಲು ಉದ್ದೇಶಿಸಲಾಗಿದೆ.

click me!