ಬೆಂಗಳೂರು (ಅ.31): ಕೊರೋನಾ (Corona) ಹರಡದಂತೆ ನಿಯಂತ್ರಿಸಲು ಈ ಬಾರಿಯ ಕನ್ನಡ ರಾಜ್ಯೋತ್ಸವವನ್ನು (Kannada Rajyotsava) ಸರಳವಾಗಿ ಆಚರಿಸಲು ನಿರ್ಧರಿಸಿರುವ ರಾಜ್ಯ ಸರ್ಕಾರ (State Govt), ಗರಿಷ್ಠ 500 ಜನರು ಮಾತ್ರ ಭಾಗವಹಿಸಬೇಕು. ರಾಜ್ಯೋತ್ಸವ (Rajyotsava) ಆಚರಣೆಗೆ ವಿವಿಧ ಇಲಾಖೆಗಳಿಂದ ಕಡ್ಡಾಯವಾಗಿ ಅನುಮತಿ (Permission) ಪಡೆಯಬೇಕು ಎಂಬುದು ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಶನಿವಾರ ಬಿಡುಗಡೆ ಮಾಡಿದೆ.
ರಾಜ್ಯೋತ್ಸವ ಸಮಾರಂಭದಲ್ಲಿ ಸಾಮಾಜಿಕ ಅಂತರ (Social Distance), ಮಾಸ್ಕ್ (Mask) ಬಳಕೆ ಮತ್ತು ಸ್ಯಾನಿಟೈಸರ್‌ಗಳನ್ನು (Sanitiser) ಕಡ್ಡಾಯವಾಗಿ ಬಳಸಬೇಕು. ಗರಿಷ್ಠ 500 ಜನರು ಮಾತ್ರ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಸಾಮಾಜಿಕ ಅಂತರವಿಲ್ಲದೆ (Social Distance) ನಡೆಸಲಾಗುವ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ. ರಾಜ್ಯೋತ್ಸವ ಆಚರಣೆ ಸಮಾಜದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಸಾಮರಸ್ಯಗಳು ಉಂಟಾಗಲು ಪೂಕರವಾಗಿವೆ. ಆದ್ದರಿಂದ ಗೌರವ ಪೂರ್ವಕವಾಗಿ ಆಚರಿಸುವ ಮೂಲಕ ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ (Law and order) ಭಂಗ ಬಾರದಂತೆ ಕಾಪಾಡಬೇಕು ಎಂದು ತಿಳಿಸಲಾಗಿದೆ.
undefined
‘ಕನ್ನಡಕ್ಕಾಗಿ ನಾವು’ : 20 ಲಕ್ಷ ಕಂಠಗಳಲ್ಲಿ ಮೊಳಗಿತು ಕನ್ನಡ ಡಿಂಡಿಮ!
ಸಂಘ, ಸಂಸ್ಥೆಗಳು ರಾಜ್ಯೋತ್ಸವ ಆಚರಣೆಗೆ ಪೊಲೀಸ್ (Police), ಮಹಾನಗರ ಪಾಲಿಕೆ, ಸ್ಥಳೀಯ ಸಂಸ್ಥೆ, ವಿದ್ಯುತ್ ಇಲಾಖೆ, ಆರೋಗ್ಯ ಇಲಾಖೆ (Health Department), ಅಗ್ನಿಶಾಮಕ ಇಲಾಖೆ, ಮಾಲಿನ್ಯ ನಿಯಂತ್ರಣ ಮಂಡಳಿ (Pollition Board) ಹಾಗೂ ಇತರೆ ಸಂಬಂಧಪಟ್ಟಇಲಾಖೆಗಳಿಂದ ಪೂರ್ವಾನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು. ಸಾಂಸ್ಕೃತಿಕ ಅಥವಾ ಮನರಂಜನಾ ಹಾಗೂ ಇನ್ನಿತರ ಕಾರ್ಯಕ್ರಮವನ್ನು ಕನಿಷ್ಠ ಪ್ರಮಾಣದಲ್ಲಿ ಹಮ್ಮಿಕೊಳ್ಳಬೇಕು ಎಂದು ಆದೇಶದಲ್ಲಿ ಸೂಚಿಸಿದೆ.
ಆರೋಗ್ಯ ಹಿತದೃಷ್ಟಿಯಿಂದ ಸಣ್ಣ ಮಕ್ಕಳು, ಹಿರಿಯ ನಾಗರಿಕರು ಹಾಗೂ ಅನಾರೋಗ್ಯದಿಂದ ಬಳಲುತ್ತಿರುವವರು ರಾಜ್ಯೋತ್ಸವದಲ್ಲಿ ಭಾಗವಹಿಸದಂತೆ ಎಚ್ಚರವಹಿಸಬೇಕು. ಸರ್ಕಾರ ಹೊರಡಿಸಿದ ಮಾರ್ಗಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು ನಿರ್ವಹಣಾ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ದಿಪಾವಳಿ - ರಾಜ್ಯೋತ್ಸವಕ್ಕೆ ಗೈಡ್‌ಲೈನ್
ದೀಪಾವಳಿ ಹಬ್ಬ ( Deepavali Festival) ಹಾಗೂ ಕನ್ನಡ ರಾಜ್ಯೋತ್ಸವ ಆಚರಣೆಗೆ ಸಂಬಂಧ ರಾಜ್ಯ ಸರ್ಕಾರ ಗೈಡ್‌ಲೈನ್ಸ್ ಬಿಡುಗಡೆ ಮಾಡಿದೆ.
ದೀಪಾವಳಿ ಹಬ್ಬ ಆಚಕಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಆದ್ರೆ, ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ( Green Crackers) ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ಸರ್ಕಾರ ತಿಳಿಸಿದೆ.
ದೀಪಾವಳಿ ಹಬ್ಬದಂದು ದೇವಾಲಯಗಳಲ್ಲಿ ಗೋಪೂಜೆ ಮಾಡಲು ಸರ್ಕಾರ ಆದೇಶ
ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುವುದು. ಬೇರೆ ಯಾವುದೇ ಪಟಾಕಿ ಮಾರಾಟ ಮಾಡುವಂತಿಲ್ಲ. ನವೆಂಬರ್ 1 ರಿಂದ 10 ರವರೆಗೆ ಪಟಾಕಿ ಮಾರಾಟಕ್ಕೆ ಅವಕಾಶ ಇದೆ. ಪರವಾನಗಿ ಪಡೆದವರು ಮಾತ್ರ ಪಟಾಕಿ ಮಾರಾಟ ಮಾಡಬೇಕು ಎಂದು ರಾಜ್ಯ ಸರ್ಕಾರದಿಂದ ದೀಪಾವಳಿಗೆ ಗೈಡ್‌ಲೈನ್ಸ್ ಬಿಡುಗಡೆ ಮಾಡಲಾಗಿದೆ.
ಹಸಿರು ಪಟಾಕಿ ಮಾತ್ರ ಮಾರಾಟ ಮತ್ತು ಹಚ್ಚಲು ಅವಕಾಶ ನೀಡಲಾಗಿದೆ. ಹಸಿರು ಪಟಾಕಿ ಹೊರತುಪಡಿಸಿ ಉಳಿದ ಪಟಾಕಿ ಮಾರಾಟಕ್ಕೆ ನಿಷೇಧ ಹೇರಲಾಗಿದೆ. ಅಷ್ಟೇ ಅಲ್ಲದೆ, ನವೆಂಬರ್ 01ರಿಂದ 10ರ ವರೆಗೆ ಮಾತ್ರ ಹಸಿರು ಪಟಾಕಿ ಮಳಿಗೆ ತೆರೆಯಲು ಅವಕಾಶ ನೀಡಲಾಗಿದೆ. ಅಧಿಕೃತ ಪರವಾನಗಿ ಪಡೆದವರಿಗೆ ಮಾತ್ರ ಹಸಿರು ಪಟಾಕಿ ಮಾರಾಟಕ್ಕೆ ಅವಕಾಶ ಎಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ.
ರಾಜ್ಯದ ಜನತೆಯ ಹಿತದೃಷ್ಠಿಯಿಂದ ಮತ್ತು ಕೋವಿಡ್ ( Covid) ಹರಡುವಿಕೆಯನ್ನ ತಡೆಗಟ್ಟುವ ನಿಟ್ಟಿನಲ್ಲಿ, ದೀಪಾವಳಿ ಹಬ್ಬದ ಆಚರಣೆಯನ್ನು ಸರಳ ಹಾಗೂ ಭಕ್ತಿಪೂರ್ವಕವಾಗಿ ಆಚರಿಸಲು ನಿರ್ಧರಿಸಲಾಗಿದೆ.