
ಬೆಂಗಳೂರು (ನ.24): ನಮ್ಮ ಮೆಟ್ರೋ ರೈಲಿನ ಒಳಗಡೆ ಕಿವುಡ ಮೂಖ ಎಂದು ಚೀಟಿ ತೋರಿಸಿ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯನ್ನು ವಶಕ್ಕೆ ಪಡೆದ ಬೆಂಗಳೂರು ಮೆಟ್ರೋ ನಿಗಮ ನಿಯಮಿತದ ಅಧಿಕಾರಿಗಳು ಆತನ ಮೇಲೆ ಪ್ರಕರಣ ದಾಖಲಿಸಿ ₹500 ದಂಡ ವಸೂಲಿ ಮಾಡಿದ್ದಾರೆ.
ಕೊಪ್ಪಳ ಮೂಲದ ಮಲ್ಲಿಕಾರ್ಜುನ್ (20) ಎಂಬಾತ ದಂಡ ತೆತ್ತಿದ್ದಾನೆ. ಮೆಟ್ರೋದ ಒಳಗಡೆ ಭಿಕ್ಷೆ ಬೇಡುತ್ತಿದ್ದ ವ್ಯಕ್ತಿಯಿಂದ ದಂಡ ವಸೂಲಿ ಮಾಡಿರುವ ಮೊದಲ ಪ್ರಕರಣ ಇದಾಗಿದೆ. ಬಿಎಂಆರ್‌ಸಿಎಲ್ ಈತನ ವಿರುದ್ಧ ಮೆಟ್ರೋ ಕಾಯ್ದೆ ಸೆಕ್ಷನ್ 59ರ ಅಡಿ ಪ್ರಯಾಣಿಕರಿಗೆ ತೊಂದರೆ ನೀಡಿದ ಪ್ರಕರಣ ದಾಖಲಿಸಿಕೊಂಡಿದೆ.
ಬೆಂಗಳೂರು: ಮೆಟ್ರೋದಲ್ಲಿ ಯುವತಿಗೆ ಲೈಂಗಿಕ ಕಿರುಕುಳ?
ಯಶವಂತಪುರ ಮೆಟ್ರೋ ನಿಲ್ದಾಣದಲ್ಲಿ ₹150 ಕೊಟ್ಟು ಒಂದು ದಿನದ ಕಾರ್ಡ್ ತೆಗೆದುಕೊಂಡ ಈತ ₹50 ರಿಚಾರ್ಜ್ ಮಾಡಿಸಿಕೊಂಡಿದ್ದಾನೆ. ಬಳಿಕ ರೈಲನ್ನೇರಿ ಕನ್ನಡ ಹಾಗೂ ಇಂಗ್ಲೀಷ್‌ನಲ್ಲಿ ‘ನಾನು ಮೂಗ ಹಾಗೂ ಕಿವುಡ, ಸಹಾಯ ಮಾಡಿ’ ಎಂದು ಬರೆದಿದ್ದ ಚೀಟಿಗಳನ್ನು ಕೊಟ್ಟು ಭಿಕ್ಷೆ ಬೇಡಿದ್ದಾನೆ. ಇದನ್ನು ಗಮನಿಸಿದ ಪ್ರಯಾಣಿಕರೊಬ್ಬರು ಮೆಟ್ರೋ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಭದ್ರತೆ ಸಿಬ್ಬಂದಿ ಎಲ್ಲಾ ನಿಲ್ದಾಣಗಳಿಗೂ ಈ ಬಗ್ಗೆ ಅಲರ್ಟ್ ಮಾಡಿದ್ದರು. ಸುಮಾರು ಒಂದು ಗಂಟೆ ಬಳಿಕ ಯಶವಂತಪುರಕ್ಕೆ ಬಂದು ಕಾರ್ಡ್ ಹಿಂದಿರುಗಿಸುವ ವೇಳೆ ಈತನನ್ನು ಪತ್ತೆ ಮಾಡಲಾಯಿತು. ಈ ವೇಳೆ ಈತನ ಜೇಬಿನಲ್ಲಿ ₹960 ಇತ್ತು. ಬಳಿಕ ಬಿಎಂಆರ್‌ಸಿಎಲ್ ಸಿಬ್ಬಂದಿ ಮಲ್ಲಿಕಾರ್ಜುನ್‌ನನ್ನು ತಾವೇ ಮಲ್ಲೇಶ್ವರ ಕೆ.ಸಿ.ಜನರಲ್ ಆಸ್ಪತ್ರೆಗೆ ಕರೆದೊಯ್ದು ತಪಾಸಣೆ ಮಾಡಿಸಿದ್ದಾರೆ. ಈ ವೇಳೆ ಆತ ಕಿವುಡ, ಮೂಗನಾಗಿರುವುದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.
ಬೆಂಗ್ಳೂರಲ್ಲಿ ಎಲಿವೇಟೆಡ್ ರಸ್ತೆ ಮೇಲೆ ಮೆಟ್ರೋ ನಿರ್ಮಾಣ: ಡಿಕೆಶಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ