
ಬೆಂಗಳೂರು(ಫೆ.14): ಪ್ರಸಕ್ತ ಸಾಲಿನಲ್ಲಿ ವನ್ಯಜೀವಿ-ಮಾನವ ಸಂಘರ್ಷದಿಂದ 55 ಜನ ಸಾವಿಗೀಡಾಗಿದ್ದು, ಆನೆ ದಾಳಿಗೆ ಅತಿ ಹೆಚ್ಚು 39 ಜನ ಬಲಿಯಾಗಿದ್ದಾರೆ. ಆನೆ ದಾಳಿ ನಿಯಂತ್ರಿಸಲು 186 ಕಿ. ಮೀ ಉದ್ದದಷ್ಟು ರೈಲ್ವೆ ಬ್ಯಾರಿ ಕೇಡ್ ಅಳವಡಿಸುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.
ವಿಧಾನ ಪರಿಷತ್ ಸದಸ್ಯ ಎಸ್.ರವಿ ಅವರು ನಿಯಮ 330ರ ಮೇರೆಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಕಾಡಿನಿಂದ ಹೊರ ಬರುವುದನ್ನು ತಡೆಯಲು 640 ಕಿ.ಮೀ ಉದ್ದದ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಪ್ರಸ್ತಾವನೆ ಇತ್ತು. ಪರಿಷ್ಕರಣೆಗೊಂಡು 730 ಕಿ.ಮೀಗೆ ಏರಿದೆ. ಅದರಲ್ಲಿ 311 ಕಿ.ಮೀ ಬ್ಯಾರಿಕೇಡ್ ಹಾಕಲಾಗಿದೆ. ಉಳಿದ ಕಾಮಗಾರಿಗೆ ಅಯವ್ಯಯದಲ್ಲಿ 100 ಕೋಟಿ ರೂ. ಮಾತ್ರ ಇತ್ತು. ಆ ಮೊತ್ತ ಸಾಲುವುದಿಲ್ಲ ಎಂಬ ಕಾರಣಕ್ಕೆ ಹೆಚ್ಚುವರಿ ಯಾಗಿ 100 ಕೋಟಿ ರೂ.ಯನ್ನು ಮುಖ್ಯಮಂತ್ರಿಯವರು ಮಂಜೂರು ಮಾಡಿದ್ದಾರೆ. ಹಾಲಿ 186 ಕಿ.ಮೀ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಬಂಡೀಪುರದಲ್ಲಿ ರಾತ್ರಿ ಸಂಚಾರ ನಿರ್ಬಂಧ ತೆರವಿಲ್ಲ: ಸಚಿವ ಈಶ್ವರ ಖಂಡ್ರೆ
ಉಳಿದ ರೈಲ್ವೆ ಬ್ಯಾರಿಕೇಡ್ ಕಾಮಗಾರಿಗೆ 500 ಕೋಟಿ ರೂ.ಯನ್ನು ಬಜೆಟ್‌ನಲ್ಲಿ ಮೀಸಲಿಡುವಂತೆ ಮುಖ್ಯಮಂತ್ರಿ ಯವರಲ್ಲಿ ಮನವಿ ಮಾಡಲಾಗಿದೆ. ಆನೆಗಳು ನಾಡಿಗೆ ಬರುವುದನ್ನು ತಪ್ಪಿಸಲು ಆನೆ ಕ್ಯಾಂಪ್ ನಿರ್ಮಿಸುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಾಡಿನಲ್ಲಿ ಸಮರ್ಪಕ ಆಹಾರ ಮತ್ತು ನೀರಿನ ಲಭ್ಯತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕಂದಕ ನಿರ್ಮಾಣ, ಸೋಲಾರ್ ಫೆನ್ಸಿಂಗ್ ಸೇರಿದಂತೆ ಪರಿಣಾಮಕಾರಿ ಕ್ರಮಗಳನ್ನು ಕೈಗೊ ಳ್ಳಲು, ವನ್ಯಜೀವಿ ಸಂಘರ್ಷ ತಪ್ಪಿಸಲು ತಜ್ಞರ ಸಮಿತಿಯಿಂದ ಪರಿಶೀಲನೆಗೂ ಸೂಚಿಸಲಾಗಿದೆ ಎಂದು ಸಚಿವ ಖಂಡ್ರೆ ಮಾಹಿತಿ ನೀಡಿದರು.
ರಾಜ್ಯದಲ್ಲಿ 6,385 ಆನೆಗಳಿವೆ. ಇದು ದೇಶದಲ್ಲೇ ಅಧಿಕ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ