ರಾಜ್ಯದಲ್ಲಿ ಮುಂದುವರಿದ ಕೊರೋನಾ ರಣಕೇಕೆ: ಇಲ್ಲಿದೆ ಬುಧವಾರದ ಅಂಕಿ-ಅಂಶ

Published : Jul 29, 2020, 06:38 PM ISTUpdated : Jul 29, 2020, 06:44 PM IST
ರಾಜ್ಯದಲ್ಲಿ ಮುಂದುವರಿದ ಕೊರೋನಾ ರಣಕೇಕೆ: ಇಲ್ಲಿದೆ ಬುಧವಾರದ ಅಂಕಿ-ಅಂಶ

ಸಾರಾಂಶ

ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದ್ದು, ಬುಧವಾರ 5,503 ಜನರಿಗೆ ಹೊಸದಾಗಿ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹಾಗಾದ್ರೆ ಯಾವ ಜಿಲ್ಲೆಯಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿವೆ ಎನ್ನುವ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ ನೋಡಿ.

ಬೆಂಗಳೂರು, (ಜುಲೈ.29): ರಾಜ್ಯದಲ್ಲಿ ಇಂದು (ಬುಧವಾರ) 5503 ಜನರಿಗೆ ಕೊರೋನಾ ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,12,504 ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಇವತ್ತು 2397 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೆ 42,901 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 67,448 ಸಕ್ರಿಯ ಪ್ರಕರಣಗಳಿದ್ದು 639 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಬುಧವಾರ 92 ಜನ ಮೃತಪಟ್ಟಿದ್ದು,  ಒಟ್ಟು ಸಾವಿನ ಸಂಖ್ಯೆ 2147ಕ್ಕೇರಿದೆ.  

ಗುಡ್‌ ನ್ಯೂಸ್: ಆಗಸ್ಟ್‌ನೊಳಗೆ ವಿಶ್ವದ ಮೊಟ್ಟ ಮೊದಲ ಕೊರೋನಾ ಲಸಿಕೆ ಬಿಡುಗಡೆ!

ಬುಧವಾರ ರಾಜ್ಯದಲ್ಲಿ ಒಟ್ಟು 16995 Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳನ್ನು ನಡೆಸಲಾಗಿದ್ದು, ಈ ಮೂಲಕ Rapid ಆ್ಯಂಟಿಜೆನ್ ಸೋಂಕು ಪತ್ತೆ ಪರೀಕ್ಷೆಗಳ ಸಂಖ್ಯೆ ರಾಜ್ಯದಲ್ಲಿ 104603ಕ್ಕೆ ಏರಿಕೆಯಾಗಿದೆ. ಇನ್ನುಳಿದಂತೆ RT PCR ಮತ್ತು ಇನ್ನಿತರೇ ವಿಧಾನಗಳ ಮೂಲಕ 15995 ಸೋಂಕು ಪತ್ತೆ ಪರೀಕ್ಷೆಗಳನ್ನು ಈ ಅವಧಿಯಲದಲಿ ನಡೆಸಲಾಗಿದೆ.

ಒಟ್ಟಾರೆಯಾಗಿ ಒಂದೇ ದಿನದಲ್ಲಿ 32,990 ಸೋಂಕು ಪತ್ತೆ ಪರೀಕ್ಷೆಗಳನ್ನು ರಾಜ್ಯದಲ್ಲಿ ನಡೆಸಲಾಗಿದ್ದು, ಇಲ್ಲಿಯವರೆಗೆ ಒಟ್ಟು 12,75,761 ಜನರಿಗೆ ಕೋವಿಡ್ 19 ಸೋಂಕು ಪತ್ತೆ ಪರೀಕ್ಷೆಯನ್ನು ನಡೆಸಲಾಗಿದೆ.

ಜಿಲ್ಲಾವಾರ ಕೊರೋನಾ ಅಂಕಿ-ಅಂಶ
ಬೆಂಗಳೂರು ನಗರ 2270, ಬಳ್ಳಾರಿ 338, ಬೆಳಗಾವಿ 279, ದಾವಣಗೆರೆ 225, ದಕ್ಷಿಣ ಕನ್ನಡ 208, ಮೈಸೂರು 200, ಧಾರವಾಡ 175, ಉಡುಪಿ 173, ಕಲಬುರಗಿ 168, ಶಿವಮೊಗ್ಗ 131, ತುಮಕೂರು 128, ಯಾದಗರಿ 114, ಚಿಕ್ಕಬಳ್ಳಾಪುರ 96, ಹಾಸನ 95, ಬೀದರ್ 91, ವಿಜಯಪುರ 90, ಕೊಪ್ಪಳ  84, ಉತ್ತರ ಕನ್ನಡ 75, ರಾಯಚೂರು 73, ಮಂಡ್ಯ 70, ಗದಗ 61, ಬಾಗಲಕೋಟೆ 57, ರಾಮನಗರ 56, ಚಿತ್ರದುರ್ಗ 52, ಹಾವೇರಿ 50, ಬೆಂಗಳೂರು ಗ್ರಾಮಾಂತರ 49, ಕೋಲಾರ 34, ಚಿಕ್ಕಮಗಳೂರು 33, ಚಾಮರಾಜನಗರ 20 ಮತ್ತು ಕೊಡಗು 08.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಕಂದನ ಸ್ನಾನ ಮಾಡಿಸಲು ಹೋದಾಗ ದುರ್ಘಟನೆ, ಗೀಸರ್ ಸೋರಿಕೆಯಿಂದ ತಾಯಿ-ಮಗು ಸಾವು
ಯೋಗೇಶ್ ಗೌಡ ಹತ್ಯೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿ, ಜಾಮೀನು ಅರ್ಜಿ ತಿರಸ್ಕೃತ