ಕೊರೋನಾ ವೈರಸ್ ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆ
ಕರ್ನಾಟಕದಲ್ಲಿ ಪಾಸಿಟಿವಿಟಿ ದರ ಶೇಕಡ 0.52
ಮಾಹಿತಿ ನೀಡಿದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ
ಬೆಂಗಳೂರು, (ಡಿ.29): ಕರ್ನಾಟಕ ಕೊರೋನಾ ವೈರಸ್ (Coronavirus) ಪಾಸಿಟಿವ್ ಕೇಸ್‌ಗಳ ಸಂಖ್ಯೆಯಲ್ಲಿ ಏರಿಕೆ ಕಂಡಿದೆ. ಸದ್ದಿಲ್ಲದೆ ರಾಜ್ಯದ ಹಳ್ಳಿ-ಹಳ್ಳಿಗಳಲ್ಲಿ ಕೊರೋನಾ ಹಬ್ಬುತ್ತಿದೆ.ಅದರಲ್ಲೂ ಶಾಲಾ-ಕಾಲೇಜುಗಳಲ್ಲಿ ಕೊರೋನಾ ಸ್ಫೋಟಗೊಳ್ಳುತ್ತಿದೆ. ಇದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಅಲ್ಲದೇ ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸಬೇಕಿದೆ. ಇನ್ನು ಇಂದಿನ ಕೊರೋನಾ ಅಂಕಿ-ಸಂಖ್ಯೆ ಈ ಕೆಳಗಿನಂತಿದೆ ನೊಡಿ.
ಇಂದು (ಡಿಸೆಂಬರ್ 29) ಹೊಸದಾಗಿ 566 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, 6 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ, ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 30,05,798 ಕ್ಕೆ ಏರಿಕೆಯಾಗಿದ್ರೆ, ರಾಜ್ಯದಲ್ಲಿ ಈವರೆಗೆ ಕೊರೋನಾದಿಂದ 38,324 ಜನ ಸಾವನ್ನಪ್ಪಿದ್ದಾರೆ.
Coronavrius: ಕರ್ನಾಟಕದಲ್ಲಿ ಸದ್ದಿಲ್ಲದೇ ಮತ್ತೆ ಹಳ್ಳಿ-ಹಳ್ಳಿಗೂ ಹಬ್ಬತ್ತಿದೆ ಕೊರೋನಾ..?
ಸೋಂಕಿತರ ಪೈಕಿ 29,59,674 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸದ್ಯ 7,771 ಕೊರೋನಾ ಸಕ್ರಿಯ ಪ್ರಕರಣಗಳಿದ್ದು, ಪಾಸಿಟಿವಿಟಿ ದರ ಶೇಕಡ 0.52 ರಷ್ಟು ಇದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಈ ಬಗ್ಗೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಬುಧವಾರ ಒಂದೇ ದಿನ 400 ಜನರಿಗೆ ಕೊವಿಡ್-19 ಕೇಸ್ ಪತ್ತೆಯಾಗಿವೆ. ಈ ಮೂಲಕ, ಬೆಂಗಳೂರಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 12,62,397 ಕ್ಕೆ ಏರಿಕೆಯಾಗಿದೆ. 12,62,397 ಸೋಂಕಿತರ ಪೈಕಿ 12,39,616 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಈವರೆಗೆ 16,392 ಜನರು ಮೃತಪಟ್ಟಿದ್ದು, 6,388 ಕೊರೋನಾ ಸಕ್ರಿಯ ಪ್ರಕರಣಗಳಿವೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೊರೋನಾ ಸೋಂಕಿನಿಂದ 4 ಮಂದಿ ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಕೊವಿಡ್ನಿಂದ ಒಬ್ಬರು ಮೃತಪಟ್ಟಿದ್ದಾರೆ. ಉಳಿದ ಜಿಲ್ಲೆಗಳಲ್ಲಿ ಸಾವು ಸಂಭವಿಸಿಲ್ಲ
ಜಿಲ್ಲಾವಾರು ಕೊರೋನಾ ಪ್ರಕರಣಗಳ ವಿವರ
ಬಾಗಲಕೋಟೆ 0, ಬಳ್ಳಾರಿ 1, ಬೆಳಗಾವಿ 6, ಬೆಂಗಳೂರು ಗ್ರಾಮಾಂತರ 3, ಬೆಂಗಳೂರು ನಗರ 400, ಬೀದರ್ 0, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 1, ಚಿತ್ರದುರ್ಗ 2, ದಕ್ಷಿಣ ಕನ್ನಡ 33, ದಾವಣಗೆರೆ 2, ಧಾರವಾಡ 7, ಗದಗ 0, ಹಾಸನ 31, ಹಾವೇರಿ 0, ಕಲಬುರಗಿ 3, ಕೊಡಗು 14, ಕೋಲಾರ 14, ಕೊಪ್ಪಳ 0, ಮಂಡ್ಯ 9, ಮೈಸೂರು 9, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 8, ಉಡುಪಿ 17, ಉತ್ತರ ಕನ್ನಡ 2, ವಿಜಯಪುರ 1, ಯಾದಗಿರಿ ಜಿಲ್ಲೆಯಲ್ಲಿ 0.
ಎಚ್ಚರ ತಪ್ಪಿದ್ರೆ ಅಪಾಯ ಫಿಕ್ಸ್
ವಿದೇಶಗಳಂತೆ ಬೆಂಗಳೂರಿನಲ್ಲೂ(Bengaluru) ಕೊರೋನಾ(Coronavirus) ಹೆಚ್ಚುತ್ತಿದ್ದು, ಇದರ ವಿರುದ್ಧ ಅಗತ್ಯ ಕ್ರಮ ಕೈಗೊಂಡಿರುವ ಬಿಬಿಎಂಪಿ ಕೊರೋನಾ ಪರೀಕ್ಷೆ ಹೆಚ್ಚಿಸಲು ಯೋಜನೆ ರೂಪಿಸಿದೆ ಎಂದು ಮುಖ್ಯ ಆಯುಕ್ತ ಗೌರವ್ ಗುಪ್ತಾ(Gaurav Gupta) ತಿಳಿಸಿದರು.
ಬಿಬಿಎಂಪಿ(BBMP) ವ್ಯಾಪ್ತಿಯಲ್ಲಿ ಕೊರೋನಾ ನಿಯಂತ್ರಿಸಲು ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ನಿತ್ಯ ನಗರದಲ್ಲಿ 30-40 ಸಾವಿರ ಜನರ ಕೊರೋನಾ ಪರೀಕ್ಷೆCovid Test) ನಡೆಯುತ್ತಿದ್ದು, ಇದನ್ನು 60 ಸಾವಿರಕ್ಕೆ ಹೆಚ್ಚಿಸಲು ಯೋಜನೆ ಆರಂಭಿಸಲಾಗಿದೆ. ಈಗಾಗಲೇ ಸ್ವಾಬ್ ಸಂಗ್ರಹ ಮಾಡುವವರು, ದತ್ತಾಂಶ ನಮೂದು ಮಾಡುವವರು ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ ಎಂದರು.
ಸಕ್ರಿಯ ಕೇಸ್: ಬೆಂಗ್ಳೂರು ದೇಶಕ್ಕೇ ನಂ.1..!
ದೇಶದ(India) ನಗರ ಮತ್ತು ಮಹಾನಗರಗಳ ಪೈಕಿ ಸದ್ಯ ಅತಿ ಹೆಚ್ಚು ಕೊರೋನಾ ಸಕ್ರಿಯ ಸೋಂಕಿತರಿರುವ ನಗರ ನಮ್ಮ ಸಿಲಿಕಾನ್ ಸಿಟಿ ಬೆಂಗಳೂರು! ಹೌದು. ದೆಹಲಿ, ಮುಂಬೈ, ಪುಣೆ, ಚೆನ್ನೈ, ಹೈದರಾಬಾದ್‌ಗೆ ಹೋಲಿಸಿದರೆ ಅತಿ ಹೆಚ್ಚು 5,866 ಕೊರೋನಾ ಸಕ್ರಿಯ ಸೋಂಕಿತರು ಬೆಂಗಳೂರಿನಲ್ಲಿದ್ದು(Bengaluru), ಆಸ್ಪತ್ರೆ ಮತ್ತು ಮನೆಗಳಲ್ಲಿ ಚಿಕಿತ್ಸೆ/ ಆರೈಕೆಯಲ್ಲಿದ್ದಾರೆ. ಅಲ್ಲದೆ, ಕಳೆದ ಒಂದು ವಾರದಿಂದ ಹೊಸ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ಅವಧಿಯಲ್ಲಿ ದೆಹಲಿ, ಹೈದರಾಬಾದ್, ಚೆನ್ನೈಗಿಂತಲೂ ಹೆಚ್ಚು ಜನರಿಗೆ ಬೆಂಗಳೂರಿನಲ್ಲಿ ಸೋಂಕು ತಗುಲಿದೆ.