ಕರ್ನಾಟಕದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ಜನರು ಎಚ್ಚರಿಕೆಯಿಂದ ಇರಬೇಕು. ಇನ್ನು ಮಾ9ರ ಕೊರೋನಾ ಅಂಕಿ-ಸಂಖ್ಯೆ ತಿಳಿದುಕೊಳ್ಳಿ.
ಬೆಂಗಳೂರು, (ಮಾ.09): ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಹೆಚ್ಚುತ್ತಿದ್ದು, ಇಂದು (ಮಂಗಳವಾರ) 590 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,56,041ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಆರು ಸೋಂಕಿತರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 12,373ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
undefined
ದೇಶದ ಮೊದಲ ಕೋವಿಡ್ ಸಾವಿಗೆ ವರ್ಷ- ಸಾವಿನ ಅಪಖ್ಯಾತಿ ಪಡೆದ ಜಿಲ್ಲೆ ಕಲಬುರಗಿ
ಬೆಂಗಳೂರಿನಲ್ಲಿ ಕಳೆದ 24 ಗಂಟೆಗಳಲ್ಲಿ 363 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4,08,675ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ ನಾಲ್ವರು ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮಂಗಳವಾರ 366 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 9,36,616ಕ್ಕೆ ಏರಿಕೆಯಾಗಿದೆ. ಇನ್ನು 7033 ಸಕ್ರೀಯ ಪ್ರಕರಣಗಳಿದ್ದು, ಈ ಪೈಕಿ 115 ಮಂದಿ ಕೋವಿಡ್ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.