ರಾಜ್ಯದಲ್ಲಿ ಮಂಗಳವಾರ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 889 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 18 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.7 ರಷ್ಟು ದಾಖಲಾಗಿದೆ.
ಬೆಂಗಳೂರು (ಸೆ.07): ರಾಜ್ಯದಲ್ಲಿ ಮಂಗಳವಾರ 592 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆಯಾಗಿದ್ದು, 889 ಮಂದಿ ಗುಣಮುಖರಾಗಿದ್ದಾರೆ. ಇಬ್ಬರು ಸಾವಿಗೀಡಾಗಿದ್ದಾರೆ. 18 ಸಾವಿರ ಸೋಂಕು ಪರೀಕ್ಷೆಗಳು ನಡೆದಿದ್ದು, ಪಾಸಿಟಿವಿಟಿ ದರ ಶೇ.3.7 ರಷ್ಟು ದಾಖಲಾಗಿದೆ. ಸೋಮವಾರಕ್ಕೆ ಹೋಲಿದರೆ ಸೋಂಕು ಪರೀಕ್ಷೆ 6 ಸಾವಿರ ಹೆಚ್ಚು ನಡೆಸಲಾಗಿದೆ. ಹೀಗಾಗಿ, ಹೊಸ ಪ್ರಕರಣಗಳು 108 ಏರಿಕೆಯಾಗಿವೆ. (ಸೋಮವಾರ 484, ಪ್ರಕರಣಗಳು, ಸಾವು ಎರಡು).
ಶಿವಮೊಗ್ಗದಲ್ಲಿ 55 ವರ್ಷದ ಪುರುಷ, ಕಲಬುರಗಿಯಲ್ಲಿ 76 ವರ್ಷದ ವೃದ್ಧೆ ಸೋಂಕಿನಿಂದ ಮೃತಪಟ್ಟಿದ್ದಾರೆ. ಸಕ್ರಿಯ ಸೋಂಕಿತರ ಸಂಖ್ಯೆ 4573 ಇದ್ದು, ಈ ಪೈಕಿ 33 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5 ಮಂದಿ ಐಸಿಯು, 5 ಮಂದಿ ಆಕ್ಸಿಜನ್, 23 ಮಂದಿ ಸಾಮಾನ್ಯ ಹಾಸಿಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದ 4,550 ಮಂದಿ ಮನೆ ಆರೈಕೆಯಲ್ಲಿದ್ದಾರೆ.
undefined
Artificial Coronavirus: ಐಐಎಸ್‌ಸಿಯಲ್ಲಿ ಕೃತಕ ಕೊರೋನಾ ವೈರಸ್ ಸೃಷ್ಟಿ..!
ಬೆಂಗಳೂರಿನಲ್ಲಿ 355 ಜನರಿಗೆ ಕೊರೋನಾ ಸೋಂಕು: ನಗರದಲ್ಲಿ ಮಂಗಳವಾರ 355 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇ.3.34ದಾಖಲಾಗಿದೆ. 587 ಜನರು ಗುಣಮುಖರಾಗಿದ್ದು, ಸೋಂಕಿನಿಂದ ಮೃತಪಟ್ಟ ವರದಿಯಾಗಿಲ್ಲ. ನಗರದಲ್ಲಿ ಸದ್ಯ 2996 ಸಕ್ರಿಯ ಸೋಂಕು ಪ್ರಕರಣಗಳಿದ್ದು, ಈ ಪೈಕಿ 52 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
13 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇಬ್ಬರು ಎಚ್‌ಡಿಯು ಮತ್ತು 37 ಮಂದಿ ಸಾಮಾನ್ಯ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಮನೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 3,236 ಮಂದಿ ಕೋವಿಡ್ ವಿರುದ್ಧ ಲಸಿಕೆ ಪಡೆದು ಕೊಂಡಿದ್ದಾರೆ. 139 ಮಂದಿ ಮೊದಲ ಡೋಸ್, 332 ಮಂದಿ ಎರಡನೇ ಡೋಸ್ ಮತ್ತು 2765 ಮಂದಿ ಬೂಸ್ಟರ್ ಡೋಸ್ ಲಸಿಕೆ ಪಡೆದಿದ್ದಾರೆ. ನಗರದಲ್ಲಿ 9 ಕ್ಲಸ್ಟರ್‌ಗಳಿದ್ದು 5ಕ್ಕಿಂತ ಹೆಚ್ಚು ಸೋಂಕಿತರಿರುವ ಕ್ಲಸ್ಟರ್‌ಗಳು ಇಲ್ಲ ಎಂದು ಬಿಬಿಎಂಪಿ ಮಾಹಿತಿ ನೀಡಿದೆ.
ಎಲ್ಲಿ, ಎಷ್ಟು ಪ್ರಕರಣ?: ಮಂಗಳವಾರ ಬೆಂಗಳೂರಿನಲ್ಲಿ 355 ಪ್ರಕರಣ ಪತ್ತೆಯಾಗಿವೆ. ಉಳಿದಂತೆ ಮೈಸೂರಿನಲ್ಲಿ 35, ಕೊಡಗು 29, ಹಾಸನ 23, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಯಲ್ಲಿ ತಲಾ 21 ಮಂದಿಗೆ ಸೋಂಕು ತಗುಲಿದೆ. 15 ಜಿಲ್ಲೆಗಳಲ್ಲಿ ಬೆರಳೆಣಿಕೆ ಹಾಗೂ ಬೀದರ್, ಚಿತ್ರದುರ್ಗ, ದಾವಣಗೆರೆ, ಗದಗ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ವರದಿಯಾಗಿವೆ.
ಸೆಪ್ಟೆಂಬರ್ ಅಂತ್ಯದವರೆಗೂ ಕರ್ನಾಟಕದಲ್ಲಿ ಮಾಸ್ಕ್ ಕಡ್ಡಾಯ: ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಮುಂಬರುವ ಸೆಪ್ಟೆಂಬರ್ ಅಂತ್ಯದವರೆಗೆ ವಿವಿಧ ಹಬ್ಬಗಳಲ್ಲಿ ಕೊರೋನಾ ಮುಂಜಾಗ್ರತಾ ಕ್ರಮವನ್ನು ಕಡ್ಡಾಯವಾಗಿ ಪಾಲಿಸುವಂತೆ ಆರೋಗ್ಯ ಇಲಾಖೆ ಜಿಲ್ಲಾಡಳಿತಗಳಿಗೆ ಸುತ್ತೋಲೆ ಹೊರಡಿಸಿದೆ. ಸದ್ಯ ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯ ನಿಯಮ ಜಾರಿಯಲ್ಲಿದೆ.
ಉಚಿತ 3ನೇ ಡೋಸ್ ನೀಡಿದರೂ ಜನ ಪಡೆಯುತ್ತಿಲ್ಲ: ಸಚಿವ ಸುಧಾಕರ್
ಆದರೂ, ಜೂನ್ ಆರಂಭದಿಂದ ಸೋಂಕು ಹೆಚ್ಚಳವಾಗುತ್ತಿದ್ದು, ಮುಂಬರುವ ಗೌರಿ-ಗಣೇಶ ಹಬ್ಬ, ಓಣಂ, ಅನಂತ ಪದ್ಮನಾಭ ವ್ರತ, ವಿಶ್ವಕರ್ಮ ಜಯಂತಿ, ಮಹಾಲಯ ಅಮಾವಾಸ್ಯೆ ವೇಳೆ ಮತ್ತಷ್ಟುಹೆಚ್ಚುವ ಸಾಧ್ಯತೆಗಳಿವೆ. ಮುಂಜಾಗ್ರತಾ ಕ್ರಮವಾಗಿ ಸೆಪ್ಟೆಂಬರ್ ಅಂತ್ಯದವರೆಗೂ ಸಾರ್ವಜನಿಕ ಸ್ಥಳಗಳು, ಹೋಟೆಲ್, ಬಾರ್ ರೆಸ್ಟೋರೆಂಟ್‌ಗಳು, ಸರ್ಕಾರಿ ಹಾಗೂ ಖಾಸಗಿ ಕಚೇರಿಗಳಲ್ಲಿ, ಪ್ರಯಾಣ ಸಂದರ್ಭದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ. ಜತೆಗೆ ಗುಂಪು ಸೇರುವುದನ್ನು ನಿರ್ಬಂಧಿಸುವಂತೆ ಕ್ರಮಕೈಗೊಳ್ಳಲು ಸೂಚಿಸಲಾಗಿದೆ.