ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ರೆ ಸರ್ಕಾರದ ಬೊಕ್ಕಸಕ್ಕೆ ಹೊರೆ: ಕತ್ತಿ ಮಾತು

Published : Aug 26, 2021, 10:48 PM IST
ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ರೆ ಸರ್ಕಾರದ ಬೊಕ್ಕಸಕ್ಕೆ ಹೊರೆ: ಕತ್ತಿ ಮಾತು

ಸಾರಾಂಶ

* ಸಚಿವ ಉಮೇಶ್ ಕತ್ತಿ ಮತ್ತೆ ವಿವದಾತ್ಮ ಹೇಳಿಕೆ * ಓರ್ವ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು ಸಾಕು ಎಂದು ಸಚಿವ ಉಮೇಶ್ ಕತ್ತಿ  * ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಹೇಳಿಕೆ

ಚಾಮರಾಜನಗರ, (ಆ.26): ಓರ್ವ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು, 10 ಕೆಜಿ ಕೊಟ್ಟರೆ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು  ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

 ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಇಂದು (ಆ.26) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಹಾರ ಇಲಾಖೆಯಲ್ಲಿ 4 ಕೋಟಿ 1 ಲಕ್ಷ ಫಲಾನುಭವಿಗಳಿದ್ದು, ಹೆಚ್ಚುವರಿ ಆಹಾರ ಧಾನ್ಯದಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಲುತ್ತದೆ ಎಂದಿದ್ದಾರೆ.

ಅಕ್ಕಿ ಕೇಳಿದ ರೈತನಿಗೆ 'ಸಾಯುವುದು ಒಳ್ಳೇದು' ಎಂದ ಸಚಿವ: ಸಮರ್ಥನೆ ವೇಳೆ ಕತ್ತಿ ಉದ್ಧಟತನ

ನಾವು ಈಗ ಆಹಾರ ಭದ್ರತೆ ಯೋಜನೆಯಲ್ಲಿ‌ 5 ಕೆಜಿ ಅಕ್ಕಿ ಕೊಡುತ್ತೇವೆ. ಸಿದ್ದರಾಮಯ್ಯ ಪದೇಪದೆ 10 ಕೆಜಿ ಅಕ್ಕಿ ಕೊಡುತ್ತೇವೆ. ನನ್ನ ಪ್ರಕಾರ ಒಬ್ಬ ವ್ಯಕ್ತಿಗೆ 1 ತಿಂಗಳಿಗೆ 5 ಕೆಜಿ ಅಕ್ಕಿ ಸಾಕು. ಹೆಚ್ಚುವರಿ ಆಹಾರ ಧಾನ್ಯ ನೀಡುವುದರಿಂದ ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗುತ್ತದೆ ಎಂದು ಹೇಳಿದರು.

ಈ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದ್ದು,  ಉಮೇಶ್ ಕತ್ತಿಗೆ ತೆರಕಣಾಂಬಿಯಲ್ಲಿ ರೈತ ಸಂಘದ ಕಾರ್ಯಕರ್ತರು  ಕಪ್ಪು ಬಾವುಟ ಪ್ರದರ್ಶನ ಮಾಡಿದ್ದಾರೆ.

ಅಕ್ಕಿಯ ಪ್ರಮಾಣವನ್ನು ಕಡಿತ ಮಾಡಲಾಗಿದೆ. ನಾವು ಸಾಯಬೇಕಾ ಬದುಕಬೇಕಾ? ಎಂದು ಈ ಹಿಂದೆ ವ್ಯಕ್ತಿಯೋರ್ವ ಪ್ರಶ್ನಿಸಿದ್ದ. ಅದಕ್ಕೆ ದರ್ಪದಿಂದಲೇ ಉತ್ತರಿಸಿದ್ದ ಸಚಿವ ಉಮೇಶ್ ಕತ್ತಿ "ಸಾಯಿ" ಎಂದು ಹೇಳಿದ್ದರು. ಇದು ಸಹ ಭಾರೀ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಕ್ಷಮೆಯಾಚಿಸಿದ್ದರು. ಇದೀಗ ಮತ್ತೊಂದು ಹೇಳಿಕೆ ಕೊಟ್ಟ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

Karnataka News Live: ಅಧಿವೇಶನಕ್ಕೂ ಮೊದಲೇ ಬ್ರದರ್ಸ್ ಒಗ್ಗಟ್ಟು: ಬಿಜೆಪಿ ಮೇಲೆ ಸವಾರಿ ಮಾಡಲು ಕಾಂಗ್ರೆಸ್ ಸಜ್ಜು
ಉಡುಪಿ: ಧರ್ಮ-ಸಂವಿಧಾನ ಬೇರೆಯಲ್ಲ:-ಪವನ್ ಕಲ್ಯಾಣ ಬಣ್ಣನೆ