
ವಿಜಯಪುರ : ಬೊಲೆರೋ ವಾಹನಕ್ಕೆ ಲಾರಿ ಡಿಕ್ಕಿ ಹೊಡೆದು ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಜಯಪುರ ಕೊಲ್ಲೆಯ ಹೊನಗನಹಳ್ಳಿ ಬಳಿ ರಾತ್ರಿ 10.30ಕ್ಕೆ ಸಂಭವಿಸಿದೆ.
ಮೃತರೆಲ್ಲರನ್ನೂ ಮಹಾರಾಷ್ಟ್ರ ಮೂಲದ ಕೂಲಿ ಕಾರ್ಮಿಕರು ಎಂದು ಗುರುತಿಸಲಾಗಿದೆ. ಆದರೆ ಮೃತಪಟ್ಟವರ ಗುರುತು ಇನ್ನು ಪತ್ತೆಯಾಗಿಲ್ಲ ಎಂದು ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.
ಅವರೆಲ್ಲ ಕೂಲಿ ಕೆಲಸವನ್ನು ಅರಸಿ ಬೊಲೆರೋ ವಾಹನದಲ್ಲಿ ಕೊಲ್ಹಾಪುರದತ್ತ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾಗಿ ಎಸ್ಪಿ ಪ್ರಕಾಶ ನಿಕ್ಕಂ ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ