Belagavi: ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ರಸ್ತೆ ಅಪಘಾತದಲ್ಲಿ ಸಾವು!

Published : Feb 24, 2025, 09:59 AM ISTUpdated : Feb 24, 2025, 10:10 AM IST
Belagavi: ಮಹಾಕುಂಭ ಮೇಳಕ್ಕೆ ಹೋಗಿದ್ದ 6 ಮಂದಿ ರಸ್ತೆ ಅಪಘಾತದಲ್ಲಿ ಸಾವು!

ಸಾರಾಂಶ

ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಹೋಗಿ ವಾಪಾಸ್‌ ಬರುತ್ತಿದ್ದ ಆರು ಮಂದಿ ಮಧ್ಯಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗೋಕಾಕನಿಂದ ಪ್ರಯಾಗ್‌ರಾಜ್‌ಗೆ ಪುಣ್ಯಸ್ನಾನಕ್ಕೆ ಹೋಗಿ ವಾಪಾಸ್‌ ಬರುವಾಗ ಈ ದುರ್ಘಟನೆ ಸಂಭವಿಸಿದೆ.

ಬೆಳಗಾವಿ (ಫೆ.24): ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳಕ್ಕೆ ಹೋಗಿ ವಾಪಾಸ್‌ ಬರುತ್ತಿದ್ದ ಆರು ಮಂದಿ ಮಧ್ಯಪ್ರದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದಾರುಣವಾಗಿ ಸಾವು ಕಂಡಿದ್ದಾರೆ. ಗೋಕಾಕನಿಂದ ಪ್ರಯಾಗರಾಜ‌್‌ನಲ್ಲಿ‌ ನಡೆಯುತ್ತಿರುವ ಮಹಾಕುಂಭದ ಪುಣ್ಯಸ್ನಾನಕ್ಕೆ ಹೋಗಿ ವಾಪಾಸ್‌ ಬರುವಾಗ ಈ ಘಟನೆ ನಡೆದಿದೆ. ಮಧ್ಯಪ್ರದೇಶದ ಜಬಲ್ಪುರದಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಸಂಭವಿಸಿದೆ. ಕಳೆದ ಮಂಗಳವಾರ ಗೋಕಾಕ್‌ನಿಂದ ಎಂಟು ಮಂದಿ ಪ್ರಯಾಗ್‌ರಾಜ್‌ಗೆ ಕಾರ್‌ನಲ್ಲಿ ಹೊರಟಿದ್ದರು. ಎಂಟು ಜನರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಾಲಚಂದ್ರ ಗೌಡರ್, ಸುನೀಲ್ ಶೇಡಶಾಳೆ, ಬಸವರಾಜ ಕುರ್ಣಿ, ಬಸವರಾಜ ದೊಡ್ಡಮನಿ, ಈರಣ್ಣ ಶೇಬಿನಕಟ್ಟಿ,‌ವಿರೂಪಾಕ್ಷ ಗುಮಟ್ಟಿ ಸಾವು ಕಂಡಿದ್ದರೆ. ಮುಸ್ತಾಕ್, ಸದಾಶಿವ  ಇಬ್ಬರಿಗ ಗಂಭೀರ ಗಾಯವಾಗಿದೆ.

ಸೋಮವಾರ ಬೆಳಗ್ಗೆ ವೇಗವಾಗಿ ಬರುತ್ತಿದ್ದ ಕಾರು, ಜಬಲ್ಪುರ ಜಿಲ್ಲೆಯ ಹೆದ್ದಾರಿಯಲ್ಲಿ ಎದುರುಗಡೆಯಿಂದ ಬರುತ್ತಿದ್ದ ಖಾಸಗಿ ಬಸ್‌ಗೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ರಭಸಕ್ಕೆ 6 ಮಂದಿ ಸ್ಥಳದಲ್ಲಿಯೇ ಸಾವು ಕಂಡಿದ್ದರೆ, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕದ ಜೀಪ್ ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಿಂದ ಹಿಂತಿರುಗುತ್ತಿದ್ದಾಗ ಖಿತೌಲಾ ಪೊಲೀಸ್ ಠಾಣೆ ವ್ಯಾಪ್ತಿಯ ಪಹ್ರೇವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಜಬಲ್ಪುರ ಕಲೆಕ್ಟರ್ ದೀಪಕ್ ಸಕ್ಸೇನಾ ತಿಳಿಸಿದ್ದಾರೆ.

ಜೀಪ್‌ ಚಾಲಕ ಕಾರ್‌ನ ನಿಯಂತ್ರಣ ಕಳೆದುಕೊಂಡಿದ್ದರ ಪರಿಣಾಮವಾಗಿ ಮೊದಲು ವಾಹನವು ರಸ್ತೆ ಡಿವೈಡರ್‌ಗೆ ಢಿಕ್ಕಿ ಹೊಡೆದು, ಬಳಿಕ ಮರಕ್ಕೆ ಬಡಿದಿದೆ. ಆ ನಂತರ ಹೆದ್ದಾರಿಯ ಇನ್ನೊಂದು ಬದಿಗೆ ಹಾರಿ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ ಎಂದು ಮಾಹಿತಿ ನೀಡಿದ್ದಾರೆ. ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಇನ್ನಿಬ್ಬರು ಗಾಯಗೊಂಡಿದ್ದು, ಸಿಹೋರಾ ಪಟ್ಟಣದ ವೈದ್ಯಕೀಯ ಸೌಲಭ್ಯದಲ್ಲಿ ಪ್ರಾಥಮಿಕ ಚಿಕಿತ್ಸೆಯ ನಂತರ ಅವರನ್ನು ಜಬಲ್ಪುರ ವೈದ್ಯಕೀಯ ಕಾಲೇಜಿಗೆ ಕರೆದೊಯ್ಯಲಾಯಿತು ಎಂದು ಅಧಿಕಾರಿ ತಿಳಿಸಿದ್ದಾರೆ.  ಪ್ರಯಾಗ್‌ರಾಜ್‌ನಿಂದ ಹಿಂತಿರುಗಿ ಜಬಲ್‌ಪುರ ಮೂಲಕ ಕರ್ನಾಟಕಕ್ಕೆ ಹೋಗುತ್ತಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಪ್ರಯಾಗ್‌ರಾಜ್‌ನಲ್ಲಿ ಕಾರು-ಬಸ್ ಡಿಕ್ಕಿ: ಕುಂಭಮೇಳಕ್ಕೆ ಹೊರಟಿದ್ದ 10 ಭಕ್ತರು ಸಾವು

ಸ್ವಲ್ಪ ಹೊತ್ತು ನಿಂತ ನಂತರ, ಬಸ್ ಚಾಲಕ ತನ್ನ ವಾಹನದೊಂದಿಗೆ ಸ್ಥಳದಿಂದ ಹೊರಟುಹೋಗಿದ್ದಾನೆ, ಬಸ್ ಅನ್ನು ಪತ್ತೆಹಚ್ಚಲು ಪ್ರಯತ್ನಗಳು ನಡೆಯುತ್ತಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ಕೂಡಲೇ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಸ್ಥಳಕ್ಕೆ ತಲುಪಿ ಪರಿಶೀಲನೆ ಮಾಡಿದ್ದಾರೆ.

ಬೆಳಗಾವಿಗೆ ಮುಗಿಯದ ಕುಂಭಮೇಳ ಶೋಕ; ಕಾಲ್ತುಳಿತದಲ್ಲಿ ನಾಲ್ವರ ಬಳಿಕ, ಅಪಘಾತಕ್ಕೆ ಮತ್ತೆ ನಾಲ್ವರು ಬಲಿ!

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

Read more Articles on
click me!

Recommended Stories

ಲೀಚೆಟ್ ಸಂಸ್ಕರಣಾ ಘಟಕ:ಬೆಂಗಳೂರಲ್ಲಿ ಜಟಿಲವಾಗಿರುವ ಕಸದ ಸಮಸ್ಯೆಗೆ ಕೊನೆಗೂ ಮುಕ್ತಿ !
ಇಂಡಿಗೋ ವಿಮಾನ ರದ್ದು, ಬೆಂಗ್ಳೂರು ಏರ್‌ಪೋರ್ಟ್‌ನಲ್ಲಿ ನೂಕು ನುಗ್ಗಲು, ಟಿಕೆಟ್ ಬೆಲೆ 15ರಿಂದ 80,000ಕ್ಕೆ ಏರಿಕೆ