ರಾಜ್ಯದ 13 ಜಿಲ್ಲೆಗಳ 61 ತಾಲೂಕು ಅತಿವೃಷ್ಟಿ, ಪ್ರವಾಹ ಪೀಡಿತ: ಸರ್ಕಾರ

Kannadaprabha News   | Asianet News
Published : Aug 12, 2021, 07:15 AM IST
ರಾಜ್ಯದ 13 ಜಿಲ್ಲೆಗಳ 61 ತಾಲೂಕು ಅತಿವೃಷ್ಟಿ, ಪ್ರವಾಹ ಪೀಡಿತ: ಸರ್ಕಾರ

ಸಾರಾಂಶ

 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ  ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಿಸಿ ಆದೇಶ ಹೊರಡಿಸಿದೆ. ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಜೀವ ಹಾನಿ, ಮನೆ ಹಾನಿ, ಬೆಳೆಹಾನಿ 

ಬೆಂಗಳೂರು (ಆ.12): ರಾಜ್ಯದಲ್ಲಿ ಅತಿವೃಷ್ಟಿಮತ್ತು ನದಿ ಹರಿವಿನಿಂದ ಪ್ರವಾಹ ಉಂಟಾಗಿರುವ ಹಿನ್ನೆಲೆಯಲ್ಲಿ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ರಾಜ್ಯ ಸರ್ಕಾರವು ಘೋಷಿಸಿ ಆದೇಶ ಹೊರಡಿಸಿದೆ.

ದಾವಣಗೆರೆ ಜಿಲ್ಲೆ ಹರಿಹರ, ಹೊನ್ನಾಳಿ, ನ್ಯಾಮತಿ, ರಾಯಚೂರು ಜಿಲ್ಲೆಯ ದೇವದುರ್ಗ, ಲಿಂಗಸೂಗೂರು, ರಾಯಚೂರು, ಬೆಳಗಾವಿ ಜಿಲ್ಲೆಯ ಅಥಣಿ, ಬೈಲಹೊಂಗಲ, ಚಿಕ್ಕೋಡಿ, ಗೋಕಾಕ್‌, ಹುಕ್ಕೇರಿ, ಖಾನಾಪುರ, ರಾಯಭಾಗ, ರಾಮದುರ್ಗ, ಸವದತ್ತಿ, ಕಿತ್ತೂರು, ನಿಪ್ಪಾಣಿ, ಕಾಗವಾಡ, ಮೂಡಲಗಿ, ಬಾಗಲಕೊಟೆಯ ಬಾದಾಮಿ, ಬಾಗಲಕೋಟೆ, ಬೀಳಗಿ, ಹುನಗುಂದ, ಜಮಖಂಡಿ, ಮುಧೋಳ, ಗುಳೇದಗುಡ್ಡ, ಇಳಕಲ್‌, ರಬಕವಿ ಬನಹಟ್ಟಿ, ಗದಗದ ನರಗುಂದ, ರೋಣ, ಹಾವೇರಿಯ ಬ್ಯಾಡಗಿ, ಹಾನಗಲ್‌, ಹಾವೇರಿ, ಹಿರೇಕೆರೂರು, ರಾಣೆಬೆನ್ನೂರು, ಸವಣೂರು, ಶಿಗ್ಗಾಂವ್‌, ರಟ್ಟಿಹಳ್ಳಿ, ಧಾರವಾಡ ಜಿಲ್ಲೆಯ ಧಾರವಾಡ, ಕಲಘಟಗಿ, ಕುಂದಗೋಳ, ನವಲಗುಂದ, ಅಳ್ವಾವರ ತಾಲೂಕುಗಳನ್ನು ಪ್ರವಾಹ ಪೀಡಿತ ಎಂದು ಘೋಷಿಸಲಾಗಿದೆ.

ಅತಿವೃಷ್ಟಿಗೆ ನಲುಗಿದ ಧಾರವಾಡ: ಪ್ರವಾಹ ಸಂತ್ರಸ್ತರ ಪರ ಸಂತೋಷ್ ಲಾಡ್ ಹೋರಾಟ

ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಜೀವ ಹಾನಿ, ಮನೆ ಹಾನಿ, ಬೆಳೆಹಾನಿ ಮತ್ತು ಮೂಲಭೂತ ಸೌಕರ್ಯಗಳು ಹಾನಿಯಾಗಿವೆ. ಪ್ರವಾಹ ಪೀಡಿತ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್‌/ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಮತ್ತು ಪರಿಹಾರ ಕಾರ್ಯಗಳಿಗೆ ಸರ್ಕಾರದಿಂದ ಕಾಲ-ಕಾಲಕ್ಕೆ ಹೊರಡಿಸಲಾದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸೂಚನೆ ನೀಡಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ
ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ