ಹೊಸ ವೈರಸ್‌ ಭೀತಿ ಮಧ್ಯೆಯೂ ಕೊರೋನಾ ಸಂಖ್ಯೆಯಲ್ಲಿ ಭಾರೀ ಇಳಿಕೆ

By Suvarna News  |  First Published Dec 29, 2020, 9:45 PM IST

ಬ್ರಿಟನ್ ನ ಕೊರೋನಾ ರೂಪಾಂತರ ಸೋಂಕಿನ ಭೀತಿ ನಡುವೆಯೂ ರಾಜ್ಯದಲ್ಲಿ ಕ್ರಮೇಣವಾಗಿ ಕೊರೋನಾ ಪ್ರಕರಣಗಳು ಇಳಿಕೆಯಾಗಿರುವುದು ನಿಟ್ಟುಸಿರುಬಿಡುವಂತೆ ಮಾಡಿದೆ.


ಬೆಂಗಳೂರು, (ಡಿ.29): ರಾಜ್ಯದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ಕರ್ನಾಟಕದಲ್ಲಿ ಇಂದು (ಮಂಗಳವಾರ) 662 ಕೊರೋನಾ ಪಾಸಿಟಿವ್ ಕೇಸ್‌ ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆಯಾಗಿದೆ.

ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯು ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ನಾಲ್ವರು ಸೋಂಕಿತರು  ಸಾವನ್ನಪ್ಪಿದ್ದಾರೆ. ಹೀಗಾಗಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 12,074ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.

Latest Videos

undefined

ಆರಂಭಿಕ ಹಂತದಲ್ಲೇ ಹೊಸ ವೈರಸ್ ತಡೆಯದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ: ICMR ಎಚ್ಚರಿಕೆ

ಇನ್ನು ಕಳೆದ 24 ಗಂಟೆಗಳಲ್ಲಿ 1,344 ಸೊಂಕಿತರು ಗುಣಮುಖರಾಗಿದ್ದಾರೆ. ಇದರೊಂದಿಗೆ 8,93,617 ಸೋಂಕಿತರು ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ 11,861 ಸಕ್ರೀಯ ಸೋಂಕಿತರಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 370 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,17,571ಕ್ಕೆ ಏರಿಕೆಯಾಗಿದೆ. 

click me!